ನೆಟ್ಟಾರು ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಮಾಹಿತಿಗೆ 14 ಲಕ್ಷ ರೂ. ಬಹುಮಾನ ಘೋಷಣೆ
ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಲಾಗಿತ್ತು.
Team Udayavani, Jan 5, 2023, 2:15 PM IST
ಕಾಸರಗೋಡು: ಕರ್ನಾಟಕದ ಬೆಳ್ಳಾರೆ ನಿವಾಸಿ, ಯುವಮೋರ್ಚಾ ನೇತಾರ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ಪಾರಿತೋಷಕ ಘೋಷಿಸಿದೆ.
ಇದನ್ನೂ ಓದಿ:ಬೈಕಿಗೆ ಡಿಕ್ಕಿ ಹೊಡೆದು ಸವಾರನನ್ನು 1ಕಿ.ಮೀ. ದೂರ ಎಳೆದೊಯ್ದ ಕಾರು: ಬೈಕ್ ಸವಾರ ದುರ್ಮರಣ
ಸುಳ್ಯ ಬುದು ಹೌಸ್‌ನ ಎಸ್. ಮುಹಮ್ಮದ್ ಮುಸ್ತಫ ಯಾನೆ ಮುಸ್ತಫ ಪೈಚಾರ್ ಮತ್ತು ಮಡಿಕೇರಿಯ ಎಂ.ಎಚ್. ತೌಫಲ್ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು. ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್ ಎಂ.ಆರ್. ಉಮ್ಮರ್ ಫಾರೂಕ್ ಯಾನೆ ಉಮ್ಮರ್, ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್ ಯಾನೆ ಗುಜರಿ ಸಿದ್ದಿಕ್ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ಪಾರಿತೋಷಕ ನೀಡಲಾಗುವುದು ಎಂದು ನೊಟೀಸ್‌ನಲ್ಲಿ ತಿಳಿಸಿದೆ.
ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ನೊಟೀಸಿನ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಲಗತ್ತಿಸಲಾಗಿದೆ. ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಲಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.