ಕಾಸರಗೋಡು: ಬಹು ದಿನಗಳ ಬಳಿಕ ಸೋಂಕು ಶೂನ್ಯ ದಿನ ; ಕೊಡಗು: ಮತ್ತೆ 2 ಪ್ರಕರಣ
Team Udayavani, Jun 24, 2020, 6:45 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಾಸರಗೋಡು: ನಿರಂತರ ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗುತ್ತಿದ್ದ ಜಿಲ್ಲೆಗೆ ಮಂಗಳವಾರ ಕೊಂಚ ಸಮಾಧಾನದ ದಿನ.
ಕೇರಳದಲ್ಲಿ 141 ಮಂದಿಗೆ ಸೋಂಕು ದೃಢವಾಗಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ಬಾಧಿತರಲ್ಲಿ 79 ಮಂದಿ ವಿದೇಶದಿಂದ ಬಂದವರು. ಅನ್ಯ ರಾಜ್ಯಗಳಿಂದ ಬಂದವರು 52 ಮಂದಿ. 9 ಮಂದಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಒಬ್ಬರು ಆರೋಗ್ಯ ಕಾರ್ಯಕರ್ತರೂ ಬಾಧಿತರಾಗಿದ್ದಾರೆ.
ಓರ್ವ ಸಾವು
ಕೊಲ್ಲಂ ಮಯ್ಯನಾಡ್ ನಿವಾಸಿಯೊಬ್ಬರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 22ಕ್ಕೇರಿದೆ.
7 ಮಂದಿಯ ಬಂಧನ
ಜಿಲ್ಲೆಯಲ್ಲಿ ಮಂಗಳವಾರ ಮಾಸ್ಕ್ ಧರಿಸದ ಆರೋಪದಲ್ಲಿ 239 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಲಾಕ್‌ಡೌನ್ ಉಲ್ಲಂಘನೆ ಆರೋಪದಲ್ಲಿ 7 ಪ್ರಕರಣಗಳನ್ನು ದಾಖಲಿಸಿ 7 ಮಂದಿಯನ್ನು ಬಂಧಿಸಲಾಗಿದೆ. 3 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೊಡಗು: ಮತ್ತೆ 2 ಪ್ರಕರಣ
ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಎರಡು ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಜೂ. 22ರಂದು ಸೋಂಕು ದೃಢಪಟ್ಟಿದ್ದ ಸೋಮವಾರ ಪೇಟೆ ತಾಲೂಕಿನ ಶಿರಂಗಾಲ ಗ್ರಾಮದ ವ್ಯಾಪಾರಿಯ 17 ಮತ್ತು 14 ವರ್ಷದ ಮಕ್ಕಳನ್ನೂ ಸೋಂಕು ಬಾಧಿಸಿದೆ.
ಈ ಮಕ್ಕಳು ಕೂಡ ಜೂ. 22ರಂದೇ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು ಪ್ರಕರಣಗಳು 8 ಆಗಿದ್ದು, ಮೂವರು ಗುಣ ಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಐದು ಕೋವಿಡ್ ಪ್ರಕರಣಗಳು ಸಕ್ರಿಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪರೀಕ್ಷಿಸಿಕೊಳ್ಳಿ
ಸೋಂಕು ದೃಢಪಟ್ಟಿರುವ ಕೊಡ್ಲಿಪೇಟೆ ಹೋಬಳಿ ಶಿರಂಗಾಲ ಗ್ರಾಮದ ವ್ಯಾಪಾರಿಯು ಜೂ. 22ರಂದು ಮುಂಜಾನೆ 3 ಗಂಟೆಯಿಂದ 7 ಗಂಟೆಯವರೆಗೆ ಸೋಮವಾರಪೇಟೆಯ ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸಿದ್ದಾರೆ. ಈ ಅವಧಿಯಲ್ಲಿ ಮಾರುಕಟ್ಟೆಯಲ್ಲಿದ್ದವರು ಸ್ವಯಂಪ್ರೇರಿತರಾಗಿ ತಮ್ಮ ಹತ್ತಿರದ ಸರಕಾರಿ ಆಸ್ಪತ್ರೆಗಳಿಗೆ ತೆರಳಿ ಗಂಟಲ ದ್ರವ ಮಾದರಿ ನೀಡುವಂತೆ ಜಿಲ್ಲಾಡಳಿತ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.