ದಾದಿಯರ ಅನಿರ್ದಿಷ್ಟಾವಧಿ ಮುಷ್ಕರ


Team Udayavani, Jul 15, 2017, 3:25 AM IST

14ksde10.jpg

ಖಾಸಗಿ ಆಸ್ಪತ್ರೆಗಳಲ್ಲಿ ಹಳಿ ತಪ್ಪಿದ ನಿತ್ಯ ನಿರ್ವಹಣೆ
ಕಾಸರಗೋಡು:
ಸುಪ್ರೀಂಕೋರ್ಟ್‌ ನಿಗದಿಪಡಿಸಿದ ಕನಿಷ್ಠ ವೇತನ ನೀಡಬೇಕೆಂದು ಆಗ್ರಹಿಸಿ ಇಂಡಿಯನ್‌ ನರ್ಸಸ್‌ ಅಸೋಸಿಯೇಶನ್‌ ನೇತೃತ್ವದಲ್ಲಿ ದಾದಿಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಪರಿಣಾಮವಾಗಿ ಕಾಸರಗೋಡು ಜಿಲ್ಲೆಯ ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ದೈನಂದಿನ ನಿರ್ವಹಣೆ ಮೇಲೆ ಗಾಢವಾದ ಪರಿಣಾಮ ಬಿದ್ದಿದ್ದು, ಆಸ್ಪತ್ರೆ ಚಟುವಟಿಕೆ ಹಳಿ ತಪ್ಪಿದ ಸ್ಥಿತಿಯಂತಾಗಿದೆ.

ಕಾಸರಗೋಡು ಜಿಲ್ಲೆಯ ಬಹುತೇಕ ಖಾಸಗಿ ಆಸ್ಪತ್ರೆಗಳ ಮುಂದೆ ದಾದಿಯರು ಕಳೆದ ಹಲವು ದಿನಗಳಿಂದ ಚಪ್ಪರ ನಿರ್ಮಿಸಿ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ನಿರತರಾಗಿದ್ದಾರೆ. 

ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಮಳೆಯನ್ನು ಲೆಕ್ಕಿಸದೆ ರಸ್ತೆ ಬದಿ ತಮ್ಮ ಬೇಡಿಕೆಗಳನ್ನೊಳಗೊಂಡ ಘೋಷಣೆಗಳನ್ನು ಮೊಳಗಿಸುತ್ತಾ ಮುಷ್ಕರ ಮುಂದುವರಿದಿದೆ. ದಾದಿಯರು ಮುಷ್ಕರದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಅಗತ್ಯದ ಕೆಲಸಗಳಿಗೆ ಪರ್ಯಾಯ ನರ್ಸ್‌ಗಳು ಲಭಿಸದೇ ಇರುವ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಕೆಲವು ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡುವುದನ್ನು ಕಡಿಮೆ ಮಾಡಲಾಗಿದೆ. ಇನ್ನು ಕೆಲವು ಆಸ್ಪತ್ರೆಗಳಲ್ಲೂ ಮುಷ್ಕರದಲ್ಲಿ ನಿರತರಾದ ದಾದಿಯರಿಗೆ ಆಸ್ಪತ್ರೆಯ ಹಾಸ್ಟೆಲ್‌ ವಾಸ್ತವ್ಯವನ್ನು ಮೆನೇಜ್‌ಮೆಂಟ್‌ ನಿರಾಕರಿಸಿದ ಬಗ್ಗೆಯೂ ದೂರುಗಳಿವೆ.

ಹಲವು ಆಸ್ಪತ್ರೆಗಳಲ್ಲಿ ಮೇಜರ್‌ ಆಪರೇಶನ್‌ಗಳನ್ನು ನಿಲುಗಡೆಗೊಳಿಸಲಾಗಿದೆ. ಇದರಿಂದಾಗಿ ರೋಗಿಗಳು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗಳನ್ನು ಆಶ್ರಯಿಸುವಂತಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಅಗತ್ಯದ ಚಿಕಿತ್ಸೆ ಲಭಿಸದೇ ಗಂಭೀರ ರೋಗ ತಗಲಿದವರು ಚಿಕಿಕ್ಸೆಗಾಗಿ ಮಂಗಳೂರಿನ ಆಸ್ಪತ್ರೆಗಳನ್ನು ಆಶ್ರಯಿಸುತ್ತಿದ್ದಾರೆ. ಕೇರಳದಲ್ಲಿ ದಾದಿಯರು ಮುಷ್ಕರದಲ್ಲಿ ತೊಡಗಿರುವುದರಿಂದಾಗಿ ಮಂಗಳೂರಿನ ಕೆಲವು ಆಸ್ಪತ್ರೆಗಳಿಗೆ ಸುಗ್ಗಿಯಂತಾಗಿದೆ.

ಮುಷ್ಕರ ಹೀಗೆ ಮುಂದುವರಿದರೆ ಮುಂದಿನ ಸೋಮವಾರದಿಂದ ಖಾಸಗಿ ಆಸ್ಪತ್ರೆಗಳ ಸೇವೆಗಳನ್ನು ಪರಿಮಿತಗೊಳಿಸಲಾಗುವುದೆಂದು ರಾಜ್ಯ ಖಾಸಗಿ ಆಸ್ಪತ್ರೆಗಳ ಆಡಳಿತ ಸಂಘಟನೆಗಳ ಪದಾಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ಮಾತ್ರವೇ ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ಡಯಾಲಿಸಿಸ್‌ ಮತ್ತು ಹೆರಿಗೆ ವಾರ್ಡ್‌ಗಳು ಕಾರ್ಯವೆಸಗಲಿವೆ. ತೀವ್ರ ನಿಗಾ ಘಟಕಗಳಲ್ಲಿ ರೋಗಿಗಳನ್ನು ದಾಖಲಿಸುವುದನ್ನು ನಿಲ್ಲಿಸಲಾಗುವುದು. ಹೊರ ರೋಗಿ ಸೇವೆಗೆ ಮಿತಿ ಹೇರಲಾಗುವುದು. ಹೃದ್ರೋಗ ಸೌಕರ್ಯಗಳನ್ನು ಕಡಿಮೆ ಮಾಡಲಾಗುವುದು. ಹೀಗೆ ಹಲವು ತೀರ್ಮಾನಗಳಿಗೆ ಖಾಸಗಿ ಆಸ್ಪತ್ರೆ ಮೆನೇಜ್‌ಮೆಂಟ್‌ ಸಂಘಟನೆಗಳು ಬಂದಿವೆ.

ರಾಜ್ಯ ಸರಕಾರ ನಿಗದಿಪಡಿಸಿದಂತೆ ಖಾಸಗಿ ಆಸ್ಪತ್ರೆಗಳ ದಾದಿಯರಿಗೆ ಕನಿಷ್ಠ 17,200 ರೂ. ನೀಡಬೇಕು. ಆದರೆ ಅದು ಸಾಲದು. ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಯ ವರದಿಯಲ್ಲಿನ ಶಿಫಾರಸಿನಂತೆ 20 ಸಾವಿರ ರೂಪಾಯಿ ಕನಿಷ್ಠ ವೇತನ ನೀಡಬೇಕೆಂದು ನರ್ಸ್‌ ಸಂಘಟನೆಗಳು ತಿಳಿಸಿವೆ. ಜು. 17ರಿಂದ ದಾದಿಯರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವರು. ಜು. 21ರಿಂದ ಸೆಕ್ರೆಟರಿಯೇಟ್‌ ಮುಂದೆ ಚಳವಳಿ ನಡೆಸಲು ತೀರ್ಮಾನಿಸಿದೆ.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.