ಪೆರುಂಬಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ

Team Udayavani, Sep 21, 2020, 7:30 PM IST

ಪೆರುಂಬಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ

ಕಾಸರಗೋಡು: ಪೆರುಂಬಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಕಂದಾಯ ಸಚಿವ ಇ. ಚಂದ್ರಶೇಖರನ್‌ ನೆರವೇರಿಸಿದರು. ಸಮಾಜದ ಸೃಜನಾತ್ಮಕ ಏಳಿಗೆಯಲ್ಲಿ ಶಿಕ್ಷಣಾಲಯಗಳ ಪಾತ್ರ ಪ್ರಧಾನವಾಗಿದೆ ಎಂದವರು ಈ ವೇಳೆ ಅಭಿಪ್ರಾಯಪಟ್ಟರು. ಕೋವಿಡ್‌ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಸುಧಾರಿತ ವಾತಾವರಣ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.

4 ವರ್ಷದ ಅವಧಿಯಲ್ಲಿ 5 ಲಕ್ಷಕ್ಕೂ ಅಧಿಕ ಮಕ್ಕಳು ಸಾರ್ವಜನಿಕ ಶಿಕ್ಷಣ ವಲಯಕ್ಕೆ ಪಾದಾರ್ಪಣೆ ನಡೆಸಿದ್ದಾರೆ. ಪ್ರಬುದ್ಧರಾದ ಶಿಕ್ಷಕ ವೃಂದ ಮತ್ತು ಅತ್ಯಾಧುನಿಕ ತತಂತ್ರಜ್ಞಾನ ಸಹಿತದ ಶಿಕ್ಷಣ ಸಾರ್ವಜನಿಕ ಶಿಕ್ಷಣಾಲಯಗಳ ಏಳಿಗೆಗೆ ಪ್ರಧಾನ ಕಾರಣ. ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 45 ತರಗತಿಗಳು ಸ್ಮಾರ್ಟ್‌ ಕ್ಲಾಸ್‌ಗಳಾಗಿ ಭಡ್ತಿ ಪಡೆದಿವೆ. ಈ ವಿಚಾರ ಇನ್ನೂ ಮುಂದುವರಿಯಲಿದೆ ಎಂದರು.

ಕೋವಿಡ್‌ ಕಟ್ಟುನಿಟ್ಟಿನ ಹಿನ್ನೆಲೆಯಲ್ಲಿ ಸಮಾರಂಭ ಜರಗಿತು. ಶಾಸಕ ಕೆ. ಕುಂಞರಾಮನ್‌ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸಿ.ಎಂ. ಷಾಸಿಯಾ, ಸದಸ್ಯರಾದ ಕರುಣಾಕರನ್‌, ಎನ್‌.ವಿ.ಬಾಲನ್‌, ಕಾಸರಗೋಡು ಉಪಜಿಲ್ಲಾ ಶಿಕ್ಷಣಾಧಿಕಾರಿ ಆಗಸ್ಟಿನ್‌ ಸೆಬಾಸ್ಟಿನ್‌ ಮಂಥೆರೋ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿ.ವಿನೋದ್‌ ಕುಮಾರ್‌, ಹಿರಿಯ ಸಹಾಯಕ ಶಿಕ್ಷಕಿ ಯು. ಗೀತಾ ಉಪಸ್ಥಿತರಿದ್ದರು. ಲೋಕೋಪಯೋಗಿ ಕಾರ್ಯಕಾರಿ ಎಂಜಿನಿಯರ್‌ ಎಂ.ವಿ. ಸಂತೋಷ್‌ ವರದಿ ವಾಚಿಸಿದರು.

ಶಾಸಕ ಕೆ. ಕುಂಞಿರಾಮನ್‌ ಅವರ ಸ್ಥಳೀಯ ಅಭಿವೃದ್ಧಿ ನಿಧಿಯಿಂದ 30 ಲಕ್ಷ ರೂ. ಮಂಜೂರು ಗೊಳಿಸಲಾಗಿದ್ದು, 23.90 ಲಕ್ಷ ರೂ.ನಲ್ಲಿ ಈ ನೂತನ ಕಟ್ಟಡ ನಿರ್ಮಿಸಲಾಗಿದೆ. 4 ತರಗತಿ ಕೊಠಡಿಗಳಿರುವ ನೂತನ ಕಟ್ಟಡಕ್ಕೆ 2018 ಸೆಪ್ಟಂಬರ್‌ ತಿಂಗಳಲ್ಲಿ ಶಿಲಾನ್ಯಾಸ ನಡೆಸಲಾಗಿತ್ತು. ಕಳೆದ ಮಾರ್ಚ್‌ ತಿಂಗಳಲ್ಲಿ ನಿರ್ಮಾಣ ಪೂರ್ತಿಗೊಂಡಿದ್ದರೂ ಕೋವಿಡ್‌ ಸಂಹಿತೆಗಳ ಹಿನ್ನೆಲೆಯಲ್ಲಿ ಉದ್ಘಾಟನೆ ಸಮಾರಂಭವನ್ನು ಮುಂದೂಡಲಾಗಿತ್ತು.

1956ರಲ್ಲಿ ಸ್ಥಾಪನೆಗೊಂಡಿದ್ದ ಈ ಶಾಲೆಯಲ್ಲಿ ಹಳೆಯ ಕಟ್ಟಡ ಮತ್ತು ಸಭಾಂಗಣ ಮಾತ್ರವಿತ್ತು. ಈ ಕಟ್ಟಡದಲ್ಲಿ 4 ತರಗತಿ ಕೊಠಡಿಗಳು, ಕಂಪ್ಯೂಟರ್‌ ಲ್ಯಾಬ್‌, ಶಿಕ್ಷಕರ ಕೊಠಡಿ, ಎಲ್‌.ಕೆ.ಜಿ., ಯು.ಕೆ.ಜಿ. ಸಹಿತ ತರಗತಿಗಳೂ ಚಟುವಟಿಕೆ ನಡೆಸುತ್ತಿದ್ದುವು. ನೂತನ ಕಟ್ಟಡದಲ್ಲಿ ಚಟುವಟಿಕೆ ಆರಂಭಿಸಿರುವ ಹಿನ್ನೆಲೆಯಲ್ಲಿ ಕಲಿಕೆಗೆ ಹೆಚ್ಚುವರಿ ಸೌಲಭ್ಯ ಒದಗಿದೆ.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.