Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ
Team Udayavani, May 11, 2024, 1:27 AM IST
ಕಾಸರಗೋಡು: ದೇಸಿ ಭತ್ತದ ತಳಿ ಸಂರಕ್ಷಕ ಕಾಸರಗೋಡು ಜಿಲ್ಲೆಯ ಬೆಳ್ಳೂರು ನೆಟ್ಟಣಿಗೆಯ ಸತ್ಯನಾರಾಯಣ ಬೆಳೇರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಹೊಸದಿಲ್ಲಿ ಯಲ್ಲಿ ಮೇ 9ರಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಸಾಧಾರಣ ಕೃಷಿ ಕುಟುಂಬ ಹಿನ್ನೆಲೆಯ ಸತ್ಯನಾರಾಯಣ ಬೆಳೇರಿ ಕಳೆದ ಕೆಲವು ವರ್ಷಗಳಿಂದ ಮರೆ ಯಾಗುತ್ತಿರುವ ದೇಸೀ ಭತ್ತದ ತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಮಹತ್ಕಾರ್ಯಕ್ಕಾಗಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ದಶಕಗಳ ಹಿಂದೆ ಹಿರಿಯ ಗಾಂಧಿವಾದಿ, ಕೃಷಿ ತಪಸ್ವಿ ಚೇರ್ಕಾಡಿ ರಾಮಚಂದ್ರ ರಾಯರು ನೀಡಿದ ಒಂದು ಮುಷ್ಟಿಯಷ್ಟು “ರಾಜ ಕಯಮೆ’ ಎಂಬ ದೇಸೀ ಭತ್ತದ ತಳಿಯೊಂದಿಗೆ ಆರಂಭವಾದ ಇವರ ಕೆಲಸ ಪ್ರಸ್ತುತ 650ಕ್ಕೂ ಹೆಚ್ಚಿನ ತಳಿಗಳ ಸಂರಕ್ಷಣೆ ಯವರೆಗೆ ತಲುಪಿದೆ.
ರಾಜ ಕಯಮೆ, ಗಂಧಸಾಲೆ, ಅತಿಕಾರ, ನವರ, ಮೈಸೂರು ರಾಜರು ಬಳಸುತ್ತಿದ್ದ ರಾಜಮುಡಿ ಮತ್ತು ರಾಜಭೋಗ, ಉಪ್ಪು ನೀರಿನಲ್ಲಿಯೂ ಬೆಳೆಯುವ ಕಗ್ಗ, ಬರ ನಿರೋಧಕ ಪುಟ್ಟ ಭತ್ತ, ಅವಲಕ್ಕಿಗೆ ಬೇಕಾದ ಸ್ವರಟಾ, ಫಿಲಿಪೈನ್ಸ್ ದೇಶದ ಮನಿಲಾ, ಸುಶ್ರುತನ ಕಾಲದ ಕಳಮೆ, ಬುದ್ಧನ ಕಾಲದ ಕಲಾ ನಾಮಕ್, ನೇರಳೆ ಬಣ್ಣದ ಡಾಂಬಾರ್ ಕಾಳಿ, ಕಾರ್ ರೆಡ್ ರೈಸ್, ಕಲಾಬತಿ, ನಜರ್ ಬಾತ್ ಅಲ್ಲದೆ ಮಣಿಪುರ, ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ಸಹಿತ ಭಾರತದ ಹೆಚ್ಚಿನೆಲ್ಲ ಪ್ರದೇಶಗಳ ಭತ್ತದ ತಳಿಗಳ ಸಂಗ್ರಹ ಅವರಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.