ಪವಿತ್ರ ಸಪ್ತಾಹ : ಗರಿಗಳ ರವಿವಾರ ಆಚರಣೆ
Team Udayavani, Mar 26, 2018, 9:05 AM IST
ಕಾಸರಗೋಡು: ಗರಿಗಳ ರವಿವಾರ (ಪಾಮ್ ಸಂಡೇ) ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ರವಿವಾರ ಆರಂಭಗೊಂಡಿತು. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೇಮ್ ಪ್ರವೇಶ ಮಾಡುವಾಗ ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ರವಿವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು.
ಜಿಲ್ಲೆಯಾದ್ಯಂತ ಕ್ರೈಸ್ತ ದೇವಾಲಯಗಳಲ್ಲಿ ರವಿವಾರ ಪಾಮ್ ಸಂಡೇ (ಗರಿಗಳ ಹಬ್ಬ) ಆಚರಿಸಲಾಯಿತು. ಕಾಸರಗೋಡಿನ ಕಯ್ನಾರು ಕ್ರಿಸ್ತರಾಜ ದೇವಾಲಯದಲ್ಲಿ ನಡೆದ ವಿಧಿವಿಧಾನಕ್ಕೆ ಧರ್ಮಗುರು ಫಾದರ್ ವಿಕ್ಟರ್ ಡಿ’ಸೋಜಾ ನೇತೃತ್ವ ನೀಡಿದ್ದರು. ಬೇಳ ಶೋಕಮಾತಾ ದೇವಾಲಯ, ಮಂಜೇಶ್ವರ, ಕುಂಬಳೆ, ವರ್ಕಾಡಿ, ಮೀಯಪದವು, ಕಾಸರಗೋಡು, ನಾರಂಪಾಡಿ, ಉಕ್ಕಿನಡ್ಕ, ಮಣಿಯಂ ಪಾರೆ, ತಲಪಾಡಿ ಸೇರಿದಂತೆ ಕಾಸರಗೋಡು ಜಿಲ್ಲೆಯ ಚರ್ಚ್‌ಗಳಲ್ಲಿ ಬಲಿಪೂಜೆ ನೆರವೇರಿತು.
ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ದಿನ ಅಥವಾ ಶುಭ ಶುಕ್ರವಾರದ ಮುಂಚಿನ ರವಿವಾರವನ್ನು ಗರಿಗಳ ರವಿವಾರವಾಗಿ ಕ್ರೈಸ್ತರು ಆಚರಿಸುತ್ತಾರೆ. ಗುರುವಾರ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನಾಚರಣೆ, ಶುಕ್ರವಾರ ಯೇಸು ಕ್ರಿಸ್ತರು ಶಿಲುಬೆಗೇರಿದ ದಿನ, ಶನಿವಾರ ರಾತ್ರಿ ಜಾಗರಣೆ ಮತ್ತು ರವಿವಾರ ಯೇಸು ಕ್ರಿಸ್ತರ ಪುನರುತ್ಥಾನದ ಹಬ್ಬ ಆಚರಣೆ- ಇವು ಪವಿತ್ರ ಸಪ್ತಾಹದ ಕಾರ್ಯಕ್ರಮಗಳಾಗಿವೆ. ಮಾ. 29ರಂದು ಯೇಸುವಿನ ಅಂತ್ಯ ಭೋಜನ, 30ರಂದು ಶುಭ ಶುಕ್ರವಾರ (ಗುಡ್ ಫ್ತೈಡೇ), ಎ. 1ರಂದು ಯೇಸು ಕ್ರಿಸ್ತರ ಪುನರುತ್ಥಾನ ದಿನವಾದ ಈಸ್ಟರನ್ನು ಆಚರಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.