ಪಟ್ಲ ಯಕ್ಷಾಶ್ರಯ ಯೋಜನೆ : 2ನೇ ಮನೆಯ ಹಸ್ತಾಂತರ
Team Udayavani, Mar 24, 2018, 9:25 AM IST
ಮಹಾನಗರ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಟ್ಲ ಯಕ್ಷಾಶ್ರಯ ಯೋಜನೆಯಂತೆ ಎರಡನೇಯ ಮನೆಯ ಗೃಹಪ್ರವೇಶವು ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಎಂಬಲ್ಲಿ ನೆರವೇರಿತು. ಬ್ರಹ್ಮಶ್ರೀ ರವೀಶ್ ತಂತ್ರಿ ಅವರು ಈ ಹಿಂದೆ ಕಟೀಲು ಮೇಳದಲ್ಲಿ 45 ವರ್ಷಗಳ ಕಾಲ ಕಲಾಸೇವೆಗೈದು ಇದೀಗ ಅಶಕ್ತರಾಗಿ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಕೊರಗಪ್ಪ ನಾಯ್ಕ ಅವರಿಗೆ ಮನೆಯನ್ನು ಹಸ್ತಾಂತರಿಸಿದರು.
ಆಶೀರ್ವಚನ ನೀಡಿದ ಶ್ರೀಧಾಮ ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು, ಒರ್ವ ಯಕ್ಷಗಾನದ ಕಲಾವಿದ ತನ್ನ ಕ್ಷೇತ್ರದ ಅಶಕ್ತ ಕಲಾವಿದರಿಗೆ ಮನೆಯನ್ನು ನಿರ್ಮಿಸಿಕೊಡುವುದು ಯಕ್ಷಗಾನದ ಇತಿಹಾಸದಲ್ಲೇ ಇದೇ ಪ್ರಥಮ. ಇಂತಹ ಸಮಾಜಮುಖೀ ಸತ್ಕಾರ್ಯಕ್ಕಾಗಿ ತಾನೂ ಕೂಡ ಮಾಣಿಲದಲ್ಲಿ ಪಟ್ಲ ಫೌಂಡೇಶನ್ ಘಟಕ ಸ್ಥಾಪಿಸುವ ಯೋಜನೆ ಹೊಂದಿರುವುದಾಗಿ ಎಂದು ಹೇಳಿದರು.
ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಮಾರ್ಗದರ್ಶಕರಾದ ಪಟ್ಲಗುತ್ತು ಮಹಾಬಲ ಶೆಟ್ಟಿ, ಪಂಚಾಯತ್ ಸದಸ್ಯ ಸಂಜೀವ ರೈ, ಭೋಜನದ ವ್ಯವಸ್ಥೆಯನ್ನು ಮಾಡಿದ ಸತ್ಯಸಾಯಿ ಸೇವಾ ಸಮಿತಿ ಸಂಚಾಲಕ ಸಚ್ಚಿದಾನಂದ ಖಂಡೇರಿ, ಫಲಾಪೇಕ್ಷೆರಹಿತವಾಗಿ ಪೌರೋಹಿತ್ಯ ನೆರವೇರಿಸಿದ ನಾಗರಾಜ್ ಭಟ್ ಮತ್ತು ನಟರಾಜ್ ಭಟ್, ಮಂಗಳೂರು ನಗರ ಘಟಕದ ರಾಕೇಶ್ ಪೂಂಜ ಉಪಸ್ಥಿತರಿದ್ದರು. ಖ್ಯಾತ ಭಾಗವತರಾದ ಸತ್ಯನಾರಾಯಣ ಪುಣಿಂಚತ್ತಾಯರು ಸ್ವಾಗತಿಸಿದರು. ರಾಮಚಂದ್ರ ಮಣಿಯಾಣಿ ಕಾಟುಕುಕ್ಕೆ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.