ಮಕ್ಕಳ ಸುರಕ್ಷತೆಗೆ ಗಮನ ನೀಡಿ: ಡಿವೈಎಸ್‌ಪಿ ಸುಂದರರಾಜ್
Team Udayavani, Jun 28, 2019, 5:29 AM IST
ಮಡಿಕೇರಿ : ಪೋಷಕರಿಗೆ ಮಕ್ಕಳ ಸುರಕ್ಷತೆಯೇ ಆದ್ಯ ಕರ್ತವ್ಯ ವಾಗಿರಬೇಕೆಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಎಸ್.ಸುಂದರ ರಾಜ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ, ಪೊಲೀಸ್, ಪ್ರಾದೇಶಿಕ ಸಾರಿಗೆ ಇಲಾಖೆಗಳ ಸಹ ಯೋಗದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ಮಕ್ಕಳ ಸುರಕ್ಷತೆ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ನಡೆದ ಕಾರ್ಯಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಕಳುಹಿಸುವ ಸಂದರ್ಭದಲ್ಲಿ ಒಂದು ವಾಹನದಲ್ಲಿ ಎಷ್ಟು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂಬು ದನ್ನು ಗಮನಿಸಬೇಕು ಎಂದರು.
ಶಾಲೆಗೆ ಕಳುಹಿಸುವ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸುವಂತಾಗಬೇಕು. ಶಾಲಾ ಮಕ್ಕಳನ್ನು ನಿರ್ದಿಷ್ಟ ವಾಹನ ದಲ್ಲಿ ಇಂತಿಷ್ಟು ಆಸನ ವ್ಯವಸ್ಥೆ ಇರುವ ವಾಹ ನದಲ್ಲಿ ಕರೆದುಕೊಂಡು ಹೋಗಬೇಕು ಎಂದರು.
ಶಾಲೆಗಳಲ್ಲಿ ಪೋಷಕರ ಸಭೆಯನ್ನು ಕಾಲ ಕಾಲಕ್ಕೆ ನಡೆಸಬೇಕು. ಮಕ್ಕಳನ್ನು ಶಾಲೆಗೆ ಸಿದ್ಧತೆ ಮಾಡಿ ಕಳುಹಿಸುವುದರ ಜೊತೆಗೆ ಸುರಕ್ಷತೆಯಿಂದ ಕರೆದುಕೊಂಡು ಹೋಗುತ್ತಾರೆಯೇ ಎಂಬುದನ್ನು ಪೋಷಕರು ಗಮನಿಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುಂದರ ರಾಜ್ ಅವರು ಹೇಳಿದರು.
ಅಗ್ನಿಶಾಮಕ ಇಲಾಖೆಯ ಅಧಿಕಾರಿ ಚಂದನ್ ಅವರು ವಾಹನಗಳಲ್ಲಿ ಬೆಂಕಿ ಅವಘಡಗಳನ್ನು ತಡೆಯುವುದು, ವಾಹನ ಸುರಕ್ಷತೆ ಕಡೆ ಗಮನ ಹರಿಸುವುದು ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಕಚೇರಿಯ ವ್ಯವಸ್ಥಾಪಕರಾದ ಶಿವಣ್ಣ ಅವರು ಆಟೋ ರಿಕ್ಷಾಗಳಲ್ಲಿ 6 ವಿದ್ಯಾರ್ಥಿಗಳಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಮೋಟಾರು ವಾಹನ ಕಾಯ್ದೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಇಲ್ಲದಿದ್ದಲ್ಲಿ 2 ರಿಂದ 5 ಸಾವಿರವರೆಗೆ ದಂಡ, ಜೊತೆಗೆ ಸೆರೆವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ವಾಹನ ಚಾಲಕರಿಗೆ ಕನಿಷ್ಠ 5 ವರ್ಷ ವಾಹನ ಚಾಲನಾ ಅನುಭವವಿದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ವಾಹನ ಸುಸ್ಥಿತಿಯಲ್ಲಿದೆಯೇ ಎಂಬುದನ್ನು ಗಮನಿಸಬೇಕು ಎಂದರು. ಕ್ಷೇತ್ರ ಶಿಕ್ಷಣಾ ಧಿಕಾರಿ ಗಾಯತ್ರಿ, ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಮಾದಪ್ಪ, ಪೋಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.