ಕನ್ನಡ ನಾಡು ನುಡಿ ಸಂಸ್ಕೃತಿ ಸಂರಕ್ಷಣೆಗೆ ಕಂಕಣಬದ್ಧರಾಗಿ : ರಾಧಾಕೃಷ್ಣ ಕಲ್ಚಾರ್‌

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಸಮ್ಮೇಳನ

Team Udayavani, Sep 22, 2019, 5:17 AM IST

21KSDE9

ಮಂಜೇಶ್ವರ: ಕನ್ನಡ ನಾಡು ನುಡಿ ಸಂರಕ್ಷಣೆಗೆ ನಾವು ಕಂಕಣಬದ್ಧರಾಗಿರಬೇಕು. ಅಧ್ಯಾಪಕರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಇದೆ. ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದರೆ ಮಾತ್ರ ಮಕ್ಕಳ ಭವಿಷ್ಯವನ್ನು ಬೆಳಗಿಸಲು ಸಾಧ್ಯ. ಶಿಕ್ಷಕರು ಅನೇಕ ಸವಾಲುಗಳನ್ನು ಎದುರಿ ಸುತ್ತಾ ಕಾರ್ಯನಿರ್ವಹಿಸುವಾಗ ಸಾಮಾಜಿಕ ವ್ಯವಸ್ಥೆಯು ಅದಕ್ಕೆ ಪೂರಕವಾಗಿ ವರ್ತಿಸಬೇಕಾಗು ತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಅಂಕಣ ಬರಹಗಾರ, ಅರ್ಥದಾರಿ ರಾಧಾಕೃಷ್ಣ ಕಲ್ಚಾರ್‌ ಅವರು ಅಭಿಪ್ರಾಯಪಟ್ಟರು.ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘಟನೆಯ ಉಪಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲ ಕೆ. ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್‌ ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಮಿತಿ ಅಧ್ಯಕ್ಷರಾದ ರವೀಂದ್ರನಾಥ್‌ ಕೆ. ಆರ್‌, ಎಸ್‌.ಎ.ಟಿ. ಎಲ್‌.ಪಿ. ಶಾಲೆಯ ಮುಖ್ಯೋಪಾಧ್ಯಾಯತೇಜಸ್‌ ಕಿರಣ್‌, ನಿವೃತ್ತ ಮುಖ್ಯ ಶಿಕ್ಷಕರಾದ ಟಿ.ಡಿ.ಸದಾಶಿವ ರಾವ್‌, ಸತ್ಯನಾರಾಯಣ ಭಟ್‌, ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಕುಮಾರಿ ಟೀಚರ್‌ ಉಪಸ್ಥಿತರಿದ್ದರು. ಉಪಜಿಲ್ಲಾ ಸಮಿತಿ ಕಾರ್ಯದರ್ಶಿ ಜಯಪ್ರಶಾಂತ್‌ ಪಾಲೆಂಗ್ರಿ ಸ್ವಾಗತಿಸಿದರು. ಉಪಜಿಲ್ಲಾ ಜತೆ ಕಾರ್ಯದರ್ಶಿ ಸದಾಶಿವ ಪೊಯೆ ವಂದಿಸಿದರು. ಉಪಜಿಲ್ಲಾ ಸಮಿತಿ ಸದಸ್ಯರಾದ ರಾಜಾರಾಮ ರಾವ್‌ ಕಾರ್ಯಕ್ರಮ ನಿರೂಪಿಸಿದರು.

ಕೇಂದ್ರ ಸಮಿತಿಯ ಅಶೋಕ್‌ ಕೊಡ್ಲಮೊಗರು ನೂತನ ಪದಾ ಧಿಕಾರಿಗಳನ್ನು ಆಯ್ಕೆ ಮಾಡಲು ಸಹಕರಿಸಿದರು. ಉಪಜಿಲ್ಲಾ ಘಟಕದ ಜೊತೆ ಕಾರ್ಯದರ್ಶಿ ಜೀವನ್‌ ಕುಮಾರ್‌ ಸ್ವಾಗತಿಸಿದರು. ಮಂಜೇಶ್ವರ ಪಂಚಾಯತ್‌ ಸಮಿತಿ ಕಾರ್ಯದರ್ಶಿ ಕುಂಜತ್ತೂರು ಶಾಲೆಯ ಕವಿತ ಕೂಡ್ಲು ವಂದಿಸಿದರು. ಕೇಂದ್ರ ಸಮಿತಿ ಸದಸ್ಯರಾದ ಜಬ್ಟಾರ್‌ ಕಾರ್ಯಕ್ರಮ ನಿರೂಪಿಸಿದರು. ಉಪಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಕೆ. ಅವರು ಧ್ವಜಾರೋಹಣಗೈದರು. ಉಪಜಿಲ್ಲಾ ಕಾರ್ಯದರ್ಶಿ ಜಯಪ್ರಶಾಂತ್‌ ಪಾಲೆಂಗ್ರಿ ವಾರ್ಷಿಕ ವರದಿ ಮಂಡಿಸಿದರು. ಉಪಜಿಲ್ಲಾ ಸಮಿತಿ ಕೋಶಾಧಿ ಕಾರಿ ನಯನ ಪ್ರಸಾದ್‌ ಎಚ್‌.ಟಿ. ಲೆಕ್ಕ ಪತ್ರ ಮಂಡಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ
ನೂತನ ಸಮಿತಿಗೆ ಅಧ್ಯಕ್ಷೆಯಾಗಿ ಪೈವಳಿಕೆ ನಗರ ಶಾಲೆಯ ಶಶಿಕಲ ಕೆ, ಉಪಾಧ್ಯಕ್ಷರಾಗಿ ಮಂಗಲ್ಪಾಡಿ ಪ್ರೌಢಶಾಲೆಯ ಸುನಿತ ಎ. ಹಾಗೂ ಉದ್ಯಾವರ ತೋಟಶಾಲೆಯ ಮುಖ್ಯೋಪಾಧ್ಯಾಯರಾದ ಶಿವರಾಮ ಭಟ್‌, ಕಾರ್ಯದರ್ಶಿಯಾಗಿ ಕುಳೂರು ಶಾಲೆಯ ಜಯಪ್ರಶಾಂತ್‌ ಪಾಲೆಂಗ್ರಿ, ಜೊತೆ ಕಾರ್ಯದರ್ಶಿಗಳಾಗಿ ಕವಿತ ಕೂಡ್ಲು ಹಾಗೂ ಸದಾಶಿವ ಪೊಯೆ, ಕೋಶಾ ಧಿಕಾರಿಯಾಗಿ ಆನೆಕಲ್ಲು ಶಾಲೆಯ ಜೀವನ್‌ ಕುಮಾರ್‌ ಆಯ್ಕೆಯಾದರು.ರಂಗ ಕಲಾವಿದ ಸದಾಶಿವ ಪೊಯೆÂ, ವಸಂತ ಮೂಡಂಬೈಲ್‌, ಉಮೇಶ್‌ ನಾಯ್ಕ, ಆದಿನಾರಾಯಣ ಭಟ್‌ ಸಂಘಟನಾತ್ಮಕ ವಿಚಾರಗಳ ಚರ್ಚೆ ನಡೆಸಿದರುಅನಂತರ ನಡೆದ ಪ್ರತಿನಿಧಿ ಸಮ್ಮೇಳನದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ರವೀಂದ್ರನಾಥ್‌ ಕೆ.ಆರ್‌, ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಶ್ರೀನಿವಾಸ ರಾವ್‌ ಪಿ.ಬಿ, ಸಂಘಟನೆಯ ಉಪಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ಶಿವರಾಮ ಭಟ್‌, ಉಪಜಿಲ್ಲಾ ಸಮಿತಿ ಉಪಾಧ್ಯಕ್ಷೆ ಸುನಿತ ಎ, ಕೇಂದ್ರ ಸಮಿತಿ ಸದಸ್ಯರಾದ ಸುಕೇಶ್‌ ಎ.ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.