ರ್ಯಾಗಿಂಗ್: ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
Team Udayavani, Aug 2, 2023, 11:02 PM IST
ಕುಂಬಳೆ: ಬೇಕೂರಿನಲ್ಲಿ ಶಾಲಾ ವಿದ್ಯಾರ್ಥಿಯ ಮೇಲೆ ತಂಡವೊಂದು ರ್ಯಾಗಿಂಗ್ ನಡೆಸಿದ ಬಗ್ಗೆ ಆರೋಪ ಕೇಳಿ ಬಂದಿದೆ. ಸೀನಿಯರ್ ವಿದ್ಯಾರ್ಥಿಗಳ ಹಲ್ಲೆಯಿಂದ ಗಂಭೀರ ಗಾಯಗೊಂಡ ಬೇಕೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿ, ಪೆರ್ಮುದೆ ನಿವಾಸಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆ. 1ರಂದು ಸಂಜೆ ಶಾಲೆ ಬಿಟ್ಟ ಬಳಿಕ ಸಮೀಪದ ಬಸ್ ತಂಗುದಾಣದಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಅದೇ ಶಾಲೆಯ ಪ್ಲಸ್ ಟು ವಿದ್ಯಾರ್ಥಿಗಳ ತಂಡವೊಂದು ಶೂ ಧರಿಸಿರುವುದಕ್ಕೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಕಿವಿ ತಮ್ಮಟೆಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.