ರಾಹುಲ್‌ ನೇತೃತ್ವದ ಕೇಂದ್ರ ಸರಕಾರ ಅಧಿಕಾರಕRೆ: ರಾಜ್‌ಮೋಹನ್‌


Team Udayavani, Mar 27, 2019, 6:30 AM IST

rahul-netrutva

ಕುಂಬಳೆ: ಕೇಂದ್ರ ಬಿ.ಜೆ.ಪಿ. ಸರಕಾರದ ದುರಾಡಳಿತ ಮತ್ತು ಕೇರಳ ಎಡರಂಗ ಸರಕಾರದ ಕೊಲೆ ರಾಜಕೀಯದಿಂದಾಗಿ ಈ ಬಾರಿ ಕೇಂದ್ರದಲ್ಲಿ ರಾಹುಲ್‌ಗಾಂಧಿ ಅವರ ನೇತೃತ್ವದ ಯು.ಪಿ.ಎ. ಜಾತ್ಯತೀತ ಸರಕಾರ ಬಹುಮತದಿಂದ ಅಧಿಕಾರಕ್ಕೇರುವುದಾಗಿ ಕಾಸರಗೋಡು ಲೋಕಸಭಾ ಐಕ್ಯ ರಂಗದ ಅಭ್ಯರ್ಥಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ಅವರು ಹೇಳಿದರು.

ಕಾಸರಗೋಡು ಪ್ರಸ್‌ಕ್ಲಬ್‌ನಲ್ಲಿ ಜರಗಿದ ಅಭ್ಯರ್ಥಿಯೊಂದಿಗೆ ಮುಖಾಮುಖೀ ಕಾರ್ಯ ಕ್ರಮದಲ್ಲಿ ಮಾತನಾಡಿದರು. ಕಳೆದ ಯು.ಪಿ.ಎ. ಆಡಳಿತದ ಕಾಲದ ಕೇಂದ್ರ ಸರಕಾರದ ಅಭಿವೃದ್ಧಿಯನ್ನು ಜನ ಇನ್ನೂ ಮರೆತಿಲ್ಲ. ಪ್ರದಾನಿ ಮೋದಿಯವರ ಆಡಳಿತದಲ್ಲಿ ಬಡವರ ಏಳಿಗೆಯಾಗದೆ ಶ್ರೀಮಂತರ ಏಳಿಗೆಯಾಗಿದೆ.ಮಾತ್ರವಲ್ಲದೆ ಕೋಮುವಾದ ಬೆಳೆದಿದೆ ಎಂದು ಆರೋಪಿಸಿದರು.

ಹಾಲಿ ಕಾಸರಗೋಡು ಸಂಸದರ ಕಾಲದಲ್ಲಿ ಕಾಸರಗೋಡು ಕೇÒತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕಾಣಿಯೂರು ಕಾಞಂಗಾಡು ರೈಲು ಹಳಿ ಸಂಪರ್ಕಕ್ಕೆ ರಾಜ್ಯ ಸರಕಾರ ನಿಧಿ ನೀಡದೆ ಒಪ್ಪಿಗೆ ನೀಡಲು ವಿಳಂವಾಗಿ ಅನಾಸ್ಥೆ ತೋರಿದೆ. ಕರ್ನಾಟಕದ ಖಾಸಗೀ ಆಸ್ಪತ್ರೆಗಳ ಲಾಬಿಗೆ ಮಣಿದು ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಾಧ್ಯವಾಗಿಲ್ಲ. ಕೃಷಿ ಮತ್ತು ವಿದ್ಯಾಭ್ಯಾಸಕ್ಕೆ ಪೋÅತ್ಸಾಹ ನೀಡಿಲ್ಲವೆಂದು ಆರೋಪಿಸಿದರು.

ವಿಪಕ್ಷಗಳ ಹುರುಳಿಲ್ಲದ ಅಪಪ್ರಚಾರಕ್ಕೆ ಮತದಾರ‌ರು ಮಣಿಯದೆ ತನ್ನನ್ನು ಗೆಲ್ಲಿಸುವರೆಂಬ ವಿಶ್ವಾಸವಿದೆ. ಮಂಜೇಶ್ವರದಿಂದ ಕಲ್ಯಾಶೇÂರಿವಿಧಾನಸಭಾ ಕ್ಷೇತ್ರ ತನಕದ ತನ್ನ ಪರ್ಯಟನೆಯಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಬರಿಮಲೆ ಆಚಾರ ಸಂರಕ್ಷಣೆಗೆ ಯಾವುದೇ ಹೋರಾಟಕ್ಕೂ ತಾನು ಮತ್ತು ತನ್ನ ಬದ್ಧವೆಂದರು.

ತಾನು ಆಯ್ಕೆಯಾದಲ್ಲಿ ಕಾಣಿ ಯೂರು- ಕಾಞಂಗಾಡು ರೈಲು ಹಳಿ ಸಂಪರ್ಕ,ಕಾಸರಗೋಡಿನ ಎಂಡೋಸಲ್ಫಾನ್‌ ಸಂತ್ರಸ್ತರ ಸಮಸ್ಯೆಗೆ ಪರಿಹಾರ,ಕಾಸರಗೋಡು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ, ಕೃಷಿಕರ ಮತ್ತು ಭಾಷಾ ಅಲ್ಪಸಂಖ್ಯಾಕರ ರಕ್ಷಣೆ, ಪೆರಿಯಾದ ಅವಳಿ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಶ್ರಮಿಸುವುದಲ್ಲದೆ ಜನರ ವಿವಿಧ ಸಮಸ್ಯೆಗಳಿಗೆ ಪರಿಹಾರ ಮತ್ತು ಜಾತಿ, ಮತ, ಪಕ್ಷ ಭೇದವೆನ್ನದೆ ಕ್ಷೇತ್ರದ ಅಭಿವೃದ್ಧಿಗೆ ತಾನು ಶ್ರಮಿಸುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸರಗೋಡು ಪ್ರಸ್‌ ಕ್ಲಬ್‌ ಅಧ್ಯಕ್ಷ ಟಿ.ಎ.ಶಾಫಿ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿದರು.ಕಾರ್ಯದರ್ಶಿ ಪದ್ಮೇಶ್‌ ಕೆ.ಪಿ. ಸ್ವಾಗತಿಸಿದರು.

ಬಹುಮತ ವಿಶ್ವಾಸ
ಈ ಬಾರಿ ಮತದಾರರು ಕೇಂದ್ರದಲ್ಲಿ ಮತ್ತು ಕೇರಳದಲ್ಲಿ ಜನ ಬದಲಾವಣೆಗೆ ಬಯಸಿದ್ದಾರೆ. ಕಾಸರಗೋಡಿನಲ್ಲಿ ಎಡರಂಗ ಮತ್ತು ಐಕ್ಯರಂಗದ ಮಧ್ಯೆ ಸ್ಫರ್ಧೆಯಾಗಿದೆ.ಕಳೆದ ಬಾರಿ ಕೇವಲ 6,921 ಮತಗಳ ಅಂತರಂಗದಿಂದ ಐಕ್ಯರಂಗದ ಅಭ್ಯರ್ಥಿ ಸೋಲಬೇಕಾಯಿತು. ಆದರೆ ಈ ಬಾರಿ ಐಕ್ಯರಂಗದ ನಾನು ಬಹುಮತದಿಂದ ಗೆಲ್ಲುವ ವಾತಾವಾರಣವಿದೆ ಎಂದು ಉಣ್ಣಿತ್ತಾನ್‌ ಅವರು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.