ಮಾಂಗಾಡ್‌ ಭತ್ತದ ಗದ್ದೆಯಲ್ಲಿ ಮಳೆ ಉತ್ಸವ

Team Udayavani, Jul 12, 2018, 7:15 AM IST

11ksde4.gif

ಕಾಸರಗೋಡು: ಜಿಲ್ಲೆಯ ಉದುಮ ಗ್ರಾಮ ಪಂಚಾಯತ್‌ ಆಡಳಿತ ಸಮಿತಿ, ಕುಟುಂಬಶ್ರೀ  ಸಿಡಿಎಸ್‌ ಮತ್ತು ಮಾಂಗಾಡ್‌ ಭತ್ತ ಕೃಷಿ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಂಗಾಡ್‌ ಬಯಲು ಗದ್ದೆಯಲ್ಲಿ ಮಳೆ ಉತ್ಸವವನ್ನು  ನಾಡಿನ ಉತ್ಸವವಾಗಿ ಪರಿಗಣಿಸಿ ನೇಜಿ ನೆಟ್ಟು, ಕ್ರೀಡೋತ್ಸವನ್ನು  ಆಚರಿಸಿ ಸಂಭ್ರಮಿಸಲಾಯಿತು.

ಮಹಿಳೆಯರು, ಸ್ಥಳೀಯ ಹಿರಿಯ ಕೃಷಿಕರು ಸೇರಿದಂತೆ ವಿದ್ಯಾರ್ಥಿಗಳು ಒಟ್ಟು  ಸೇರಿ ನೇಜಿ ನೆಟ್ಟು ಸಂಭ್ರಮಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಉತ್ಸವದಲ್ಲಿ  ಭಾಗವಹಿಸಿದ್ದಲ್ಲದೆ ನೇಜಿ ನೆಡುವ ಮೂಲಕ ಮಹಿಳೆ ಮತ್ತು ಪುರುಷರನ್ನು ಪ್ರೋತ್ಸಾಹಿಸಿದರು. ಇದೇ ಸಂದರ್ಭದಲ್ಲಿ   ಗದ್ದೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸ ಲಾಯಿತು. ಪುರುಷ ಮತ್ತು ಮಹಿಳೆ ಯರಿಗೆ ಹಗ್ಗಜಗ್ಗಾಟ, ಗೋಣಿಚೀಲ ಸ್ಪರ್ಧೆ, ಲಿಂಬೆ ಚಮಚ ಓಟ, ನೂರು ಮೀಟರ್‌ ಓಟ ಸ್ಪರ್ಧೆ,  ಮಕ್ಕಳಿ ಗಾಗಿ ಪುಟ್ಬಾಲ್‌ ಪಂದ್ಯಾಟಗಳು ನಡೆ ದವು. ಉದುಮ ದೀನ್‌ ದಯಾಳ್‌ ಉಪಾಧ್ಯಾಯ ಕಾಲೇಜಿನ ವಿದ್ಯಾರ್ಥಿ ಗಳು ಸ್ಪರ್ಧೆಯಲ್ಲಿ  ಭಾಗವಹಿಸಿ ಅನಂತರ ನೇಜಿ ನೆಡುವ ಕಾರ್ಯದಲ್ಲಿ ಕೈಜೋಡಿಸಿದರು.

ಕೃಷಿ ಸಂಸ್ಕೃತಿಯನ್ನು ಪುನಃ ನೆನಪಿಸಿ, ಮಣ್ಣು, ಜಲ, ಜೀವ ವೈವಿಧ್ಯಗಳನ್ನು ಎತ್ತಿ ಹಿಡಿದು ಸಂರಕ್ಷಿಸುವ ಪ್ರತಿಜ್ಞೆಯನ್ನು  ವರ್ಷೋತ್ಸವದಲ್ಲಿ  ಕೈಗೊಳ್ಳಲಾಯಿತು. ಬಂಜರು ಭೂಮಿಯನ್ನು  ಕೃಷಿ ಯೋಗ್ಯಗೊಳಿಸುವ ಲಕ್ಷ್ಯವಿರಿಸಿ ಆಯೋಜಿಸಲಾದ ಮಳೆ ಉತ್ಸವವನ್ನು  ಜನರು ಆಸ್ವಾದಿಸಿದರು.

ಕಾರ್ಯಕ್ರಮ ಉದ್ಘಾಟನೆ 
ಸಮಾರಂಭವನ್ನು  ಕಾಂಞಂಗಾಡು ಬ್ಲಾಕ್‌ ಪಂಚಾಯತ್‌ ಅಧ್ಯಕ್ಷೆ ಎಂ.ಗೌರಿ ಉದ್ಘಾಟಿಸಿದರು. ಉದುಮ ಗ್ರಾ.ಪಂ. ಅಧ್ಯಕ್ಷ ಕೆ.ಎ. ಮುಹಮ್ಮದಾಲಿ ಅಧ್ಯಕ್ಷತೆ ವಹಿಸಿದ್ದರು. ಸಂಘಟಕ ಸಮಿತಿ ಅಧ್ಯಕ್ಷ ಬಿ.ಬಿ. ಅಶ್ರಫ್‌ ಸ್ವಾಗತಿಸಿದರು. ಕುಟುಂಬಶ್ರೀ ಜಿಲ್ಲಾ  ಸಂಚಾಲಕ ಟಿ.ಟಿ. ಸುರೇಂದ್ರನ್‌  ಉತ್ಸವದ ಬಗ್ಗೆ  ಮಾಹಿತಿ ನೀಡಿದರು.

ಗ್ರಾ.ಪಂ. ಉಪಾಧ್ಯಕ್ಷೆ ಲಕ್ಷ್ಮೀ ಬಾಲಕೃಷ್ಣನ್‌, ಸ್ಥಾಯೀ ಸಮಿತಿ ಅಧ್ಯಕ್ಷ ಕೆ. ಪ್ರಭಾಕರನ್‌, ಕೆ.ಸಂತೋಷ್‌
ಕುಮಾರ್‌, ಅಬೂಬಕ್ಕರ್‌, ಹಮೀದ್‌ ಮಾಂಗಾಡ್‌, ಚಂದ್ರನ್‌, ಕಮಲಾಕ್ಷಿ, ವತ್ಸಲಾ ಶ್ರೀಧರನ್‌, ಮಾಂಗಾಡ್‌ ಭತ್ತ ಕೃಷಿ ಸಮಿತಿಯ ಅಧ್ಯಕ್ಷ ಪಿ.ಎ. ಹಸೈನಾರ್‌, ಗ್ರಾ.ಪಂ. ಕುಟುಂಬಶ್ರೀ ಸಿಡಿಎಸ್‌ನ ಎಂ. ಪುಷ್ಪಲತಾ ಮೊದಲಾದವರು ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಕೃಷಿಕರನ್ನು ಮಾಜಿ ಗ್ರಾ.ಪಂ. ಅಧ್ಯಕ್ಷೆ ಎಂ.ಲಕ್ಷ್ಮೀ ಗೌರವಿಸಿದರು.

ಕರಿಮೋಡ ಆವರಿಸಿದ ಆಕಾಶದ ಕೆಳಗೆ ಮಳೆ, ಗಾಳಿಯನ್ನು  ಲೆಕ್ಕಿಸದೆ ಕುಟುಂಬಶ್ರೀ ಸದಸ್ಯೆಯರು ಸೇರಿದಂತೆ ಹಿರಿ ತಲೆಮಾರಿನ ಕೃಷಿ ಕಾರ್ಮಿಕರು ಒಟ್ಟು  ಸೇರಿ ಕೃಷಿ ಸಂಸ್ಕೃತಿಯನ್ನು  ನೆನಪಿಸುವ ಕಾರ್ಯವನ್ನು ಕೈಗೊಂಡರು. ಈ ಕೃಷಿ ಉತ್ಸವವನ್ನು ನೋಡಲು ಮತ್ತು ಉತ್ಸವದಲ್ಲಿ ಭಾಗವಹಿಸಲು ನೂರಕ್ಕೂ ಹೆಚ್ಚಿನ ಸಂಖ್ಯೆಯ ಆಸಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.