ಕೇರಳಕ್ಕೆ ಬರಲು ನೋಂದಣಿ ಅಗತ್ಯ ; ಕಾಸರಗೋಡು ಗಡಿಗಳಲ್ಲಿ ಮತ್ತೆ ತಪಾಸಣೆ
Team Udayavani, Oct 22, 2020, 12:57 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯ ಎಲ್ಲ ಗಡಿ ಪ್ರದೇಶಗಳಲ್ಲಿ ತಪಾಸಣೆ ಪುನರಾರಂಭಿಸಲು ಜಿಲ್ಲಾ ಮಟ್ಟದ ಕೊರೊನಾ ಕೋರ್ ಸಮಿತಿ ಸಭೆಯಲ್ಲಿ ನಿರ್ಧರಿಸಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ಡಿಸಿ ಡಾ| ಡಿ. ಸಜಿತ್ ಬಾಬು ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಕೇರಳ ಹೈಕೋರ್ಟ್ ತೀರ್ಪಿನ ಪ್ರಕಾರ ಕೋವಿಡ್ ವ್ಯಾಪಿಸುವುದನ್ನು ತಡೆಯುವ ಉದ್ದೇಶದೊಂದಿಗೆ ತಪಾಸಣೆ ನಡೆಸಲಾಗುವುದು. ಆದರೆ ಗಡಿಗಳಲ್ಲಿ ಯಾರನ್ನೂ ತಡೆಯುವುದಿಲ್ಲ. ಬ್ಯಾರಿಕೇಡ್‌ಗಳು ಇರಿಸಲಾಗುವುದಿಲ್ಲ. ಪಾಸ್ ವ್ಯವಸ್ಥೆ ಏರ್ಪಡಿಸಲಾಗುವುದಿಲ್ಲ. ಇತರ ರಾಜ್ಯಗಳಿಂದ ಕಾಸರಗೋಡು ಜಿಲ್ಲೆಗೆ ಬರುವವರು ಕೋವಿಡ್-19 ಜಾಗ್ರತಾ ವೆಬ್ ಪೋರ್ಟಲ್‌ನಲ್ಲಿ ನೋಂದಾಯಿಸಬೇಕು. ಇದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಜಿಲ್ಲಾ ಗಡಿಗಳಲ್ಲಿ ತಪಾಸಣೆ ಮುಂದುವರಿಸಲು ತೀರ್ಮಾನಿಸಲಾಗಿದೆ.
24 ಗಂಟೆ ಕಾರ್ಯಾಚರಣೆ
ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು, ಕಂದಾಯ ಮತ್ತು ಆರೋಗ್ಯ ಅಧಿಕಾರಿ ಗಳಿಂದ ಪರಿಶೀಲನೆ ನಡೆಯಲಿದೆ. ಎಲ್ಲ 16 ಗಡಿಗಳಲ್ಲಿ ತಪಾಸಣೆ ಪುನರಾರಂಭ ಗೊಳ್ಳಲಿದೆ. ಪೊಲೀಸರ ಜತೆಗೆ, ಅರಣ್ಯ, ಅಗ್ನಿಶಾಮಕ ದಳ, ಅಬಕಾರಿ ಇಲಾಖೆ ಅಧಿಕಾರಿಗಳು ಇಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ವಾರದ ಎಲ್ಲ ದಿನಗಳಲ್ಲಿ 24 ಗಂಟೆ ಕಾಲವೂ ತಪಾಸಣೆ ನಡೆಸುವಂತೆ ಸಭೆಯಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.