ಭಾರತದ ಅಭಿವೃದ್ಧಿಗೆ ಸಂಶೋಧನೆ ಅನಿವಾರ್ಯ
Team Udayavani, Jun 10, 2017, 4:02 PM IST
ಕುಂಬಳೆ: ಭಾರತ ಇನ್ನಷ್ಟು ಅಭಿವೃದ್ಧಿ ಪಥದತ್ತ ಸಾಗಲು ವಿಶ್ವವಿದ್ಯಾಲಯಗಳ ಮೂಲಕ ಹೊಸ ಸಂಶೋಧನೆ, ಉತ್ಕೃಷ್ಟ ಆವಿಷ್ಕಾರ ಅನಿವಾರ್ಯ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾಬ್ಡೇಕರ್ ಹೇಳಿದರು.
ಕೇಂದ್ರೀಯ ವಿಶ್ವವಿದ್ಯಾಲಯ ಕೇರಳ ಕಾಸರಗೋಡು ಪೆರಿಯಾದ ತೇಜಸ್ವಿನಿ ಹಿಲ್ಸ್ ಕ್ಯಾಂಪಸ್ಸಿನ ಚಂದ್ರಗಿರಿ ಓಪನ್ ಥಿಯೇಟರಿನಲ್ಲಿ ಜರಗಿದ ದ್ವಿತೀಯ ಪದವಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೇಂದ್ರದಿಂದ ಆರ್ಥಿಕ ನೆರವು ಕೇಂದ್ರ ಸರಕಾರ ವಿದ್ಯಾರ್ಥಿಗಳಿಗೆ ವಿ.ವಿ. ಮೂಲಕ ಸಂಶೋಧನೆಗೆ ಪ್ರೋತ್ಸಾಹ ನೀಡುತ್ತಿದೆ. ದೇಶದ 20 ಕೇಂದ್ರ ವಿಶ್ವವಿದ್ಯಾಲಯಗಳನ್ನು ಉನ್ನತ ಮಟ್ಟಕ್ಕೇರಿಸಲು ಕೇಂದ್ರ ಸರಕಾರ ಮುಂದಾಗಿದೆ.
ವಿ.ವಿ.ಗಳಲ್ಲಿ ಉನ್ನತ ವಿದ್ಯಾಭ್ಯಾಸದೊಂದಿಗೆ ವಿದ್ಯಾರ್ಥಿಗಳು ಗುರು ಹಿರಿಯರಲ್ಲಿ ಗೌರವ, ಉತ್ತಮ ಸಂಸ್ಕಾರ ಮತ್ತು ದೇಶ ಪ್ರೇಮ ಬೆಳೆಸಬೇಕಾಗಿದೆ. ವಿ.ವಿ.ಯಲ್ಲಿ ವಿದ್ಯಾರ್ಜನೆಗೈದ ವಿದ್ಯಾರ್ಥಿಗಳು ಉದ್ಯೋಗಕ್ಕೆ ವಿದೇಶ ಅವಲಂಬಿಸದೆ ಭಾರತದಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಜನಜಾಗೃತಿ
ನೋಟು ಅಪಮೌಲಿÂàಕರಣದ ಬಳಿಕ ದೇಶದಲ್ಲಿ ಉಂಟಾದ ಕ್ಷಿಪ್ರ ಚಲನೆ ಕುರಿತು ಮತ್ತು ಸ್ವತ್ಛ ಭಾರತದ ಪ್ರಧಾನಿ
ಅವರ ದಿಟ್ಟ ನಿಲುವಿವಿಂದ ದೇಶದಲ್ಲಿ ಜನಜಾಗೃತಿ ಉಂಟಾಗಿದೆ ಎಂದರು. ಪ್ರಸ್ತಾಪಿತ ಕೇಂದ್ರ ಸರಕಾರದ ವೈದ್ಯಕೀಯ ಕಾಲೇಜನ್ನು ಪೆರಿಯದಲ್ಲಿ ಆರಂಭಿಸುವ ಕುರಿತು ಕೇಂದ್ರ ಸರಕಾರದೊಂದಿಗೆ ಚರ್ಚಿಸುವ ಭರವಸೆಯನ್ನು ಸಚಿವರು ನೀಡಿದರು.
ಸಮಾರಂಭದಲ್ಲಿ ವಿಶ್ವವಿದ್ಯಾಲಯದ 440 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿದರು. ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಕಾಸರಗೋಡು ಲೋಕಸಭಾ ಸದಸ್ಯ ಪಿ.ಕರುಣಾಕರನ್ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ವಿಶ್ವವಿದ್ಯಾನಿಲಯದ ಕುಲಪತಿ ಪದ್ಮಭೂಷಣ ಡಾ| ವೀರೇಂದ್ರಲಾಲ್ ಚೋಪ್ರ ಅಧ್ಯಕ್ಷತೆ ವಹಿಸಿದರು. ವಿ. ವಿ. ಉಪಕುಲಪತಿ ಡಾ| ಜಿ. ಗೋಪಕುಮಾರ್ ಸ್ವಾಗತಿಸಿದರು. ರಿಜಿಸ್ಟಾರ್ ಎ. ರಾಧಾಕೃಷ್ಣನ್ ನಾಯರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.