Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Team Udayavani, Nov 16, 2024, 8:01 PM IST
ಕಾಸರಗೋಡು: ಕಣ್ಣೂರು ಜಿಲ್ಲೆಯ ಕೆಳಕಂ ಪಂಚಾಯತ್ ವ್ಯಾಪ್ತಿಯ ಮಲಯಂಪಾಡಿ ಎಸ್ ತಿರುವಿನಲ್ಲಿ ಶುಕ್ರವಾರ ಮುಂಜಾನೆ ರಂಗಭೂಮಿ ಕಲಾವಿದರು ಸಂಚರಿಸುತ್ತಿದ್ದ ಮಿನಿ ಬಸ್ಸೊಂದು ರಬ್ಬರ್ ತೋಟಕ್ಕೆ ಮಗುಚಿ ಬಿದ್ದು ಇಬ್ಬರು ನಟಿಯರು ಸಾವಿಗೀಡಾಗಿ, 12 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಬಸ್‌ನ ಮುಂಭಾಗದಲ್ಲಿ ಕುಳಿತಿದ್ದ ಕಾಯಂಕುಳಂ ನಿವಾಸಿ ಅಂಜಲಿ (32) ಮತ್ತು ಕರುನಾಗಪಳ್ಳಿ ನಿವಾಸಿ ಜೆಸ್ಸಿ ಮೋಹನ್ (58) ಸಾವಿಗೀಡಾದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಿದೆ.
ಕಡನ್ನಪಳ್ಳಿಯಲ್ಲಿ ನಾಟಕ ಪ್ರದರ್ಶನ ಬಳಿಕ ಸುಲ್ತಾನ್ ಬತ್ತೇರಿ ಕಡೆಗೆ ತೆರಳುತ್ತಿದ್ದಾಗ ನಾಟಕ ತಂಡ ಸಂಚರಿಸುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ.
ನಾಟಕ ತಂಡದಲ್ಲಿ 14 ಜನರಿದ್ದು, ಗಾಯಗೊಂಡ ಕಾಯಂಕುಳಂ ನಿವಾಸಿಗಳಾದ ಉಣ್ಣಿ, ಉಮೇಶ್, ಸುರೇಶ್, ಶಿಬು, ಎರ್ನಾಕುಳಂ ನಿವಾಸಿಗಳಾದ ವಿಜಯ ಕುಮಾರ್, ಬಿಂದು, ಕಲ್ಲುವಾದುಕ್ಕಲ್‌ನ ಚೆಲ್ಲಪ್ಪನ್, ಕೊಲ್ಲಂನ ಶ್ಯಾಮ್ ಮತ್ತು ಅದಿರುಂಗಲ್‌ನ ಸುಭಾಷ್ ಸಹಿತ 9 ಮಂದಿಯನ್ನು ಕಣ್ಣೂರು ಜಿಲ್ಲೆಯ ಚಾಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಗಾಯಗೊಂಡಿರುವ ಮಿನಿ ಬಸ್ ಚಾಲಕ ಮತ್ತು ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಕಣ್ಣೂರು ಕೇಳಕಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಮಿನಿ ಬಸ್ ಚಲಾಯಿಸಿದ್ದಾರೆ. ಸಣ್ಣ ವಾಹನಗಳಿಗೆ ಮಾತ್ರ ಸುಗಮವಾಗಿ ಸಂಚರಿಸಲು ಸಾಧ್ಯವಿರುವ ಏರಿಳಿತದಿಂದ ಕೂಡಿದ ಈ ರಸ್ತೆಯಲ್ಲಿ ಸಾಗಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
————————————————————————————————————————————–
ಪಟಾಕಿ ದುರಂತ: ಸಾವಿನ ಸಂಖ್ಯೆ 6ಕ್ಕೆ
ಕಾಸರಗೋಡು: ನೀಲೇಶ್ವರ ತೆರು ಅಞೂಟಂಬಲ ವೀರರ್ ಕಾವು ಶ್ರೀ ಮೂವಾಲಂಕುಯಿ ಚಾಮುಂಡಿ ದೈವಸ್ಥಾನದಲ್ಲಿ ಅ. 28ರಂದು ಕಳಿಯಾಟ ಮಹೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಆರಕ್ಕೇರಿತು.
ಕಾಸರಗೋಡು ಜಿಲ್ಲಾ ಸಹಕಾರಿ ಬ್ಯಾಂಕ್ ನಿವೃತ್ತ ಪ್ರಬಂಧಕ, ನೀಲೇಶ್ವರ ವೇರ್‌ವಯಲ್ ನಿವಾಸಿ ಪಿ.ಸಿ.ಪದ್ಮನಾಭನ್ (75) ಸಾವಿಗೀಡಾದರು. ಗಂಭೀರ ಸುಟ್ಟ ಗಾಯಗಳೊಂದಿಗೆ ಅವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮೊದಲು ಐವರು ಸಾವಿಗೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.