ಸಂಜೀವಿನಿ ವೈದ್ಯ ಸಾಹಿತ್ಯದ ಮೇರು ಕೃತಿ: ಬನಾರಿ
Team Udayavani, Jul 8, 2017, 2:20 AM IST
ಮಂಜೇಶ್ವರ: ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಓಷನ್‌ಪರ್ಲ್ ಹೊಟೇಲಿನ ಸಭಾಂಗಣದಲ್ಲಿ ಹಿರಿಯ ದಂತ ವೈದ್ಯ ಮತ್ತು ಬಾಯಿ, ಮುಖ, ದವಡೆ ಶಸ್ತ್ರ ಚಿಕಿತ್ಸಕ ಡಾ| ಮುರಳೀಮೋಹನ್ ಚೂಂತಾರು ಅವರ ಆರನೇ ವೈದ್ಯಕೀಯ ಕೃತಿ “ಸಂಜೀವಿನಿ ಆರೋಗ್ಯ ಮಾರ್ಗದರ್ಶಿ’ ಭಾಗ ಎರಡು ಲೋಕಾರ್ಪಣೆಗೊಂಡಿತು.
ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಕೃತಿಯನ್ನು ಬಿಡುಗಡೆ ಮಾಡಿದರು. ಸುರûಾ ದಂತ ಚಿಕಿತ್ಸಾಲಯ ಹೊಸಂಗಡಿ ಇದರ ವಿಂಶತಿಯ ಸಂಭ್ರಮದ ಜತೆಗೆ ನಡೆದ ಈ ಕಾರ್ಯ ಕ್ರಮದಲ್ಲಿ ಖ್ಯಾತ ಕುಟುಂಬ ವೈದ್ಯ ಮತ್ತು ವೈದ್ಯ ಸಾಹಿತಿ ಡಾ| ರಮಾನಂದ ಬನಾರಿ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತ್‌ನ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಭಾಗವಹಿಸಿದ್ದರು.
ಕೃತಿಯನ್ನು ಲೋಕಾರ್ಪಣೆ ಮಾಡಿ, ಮಾತನಾಡಿದ ಉಸ್ತುವಾರಿ ಸಚಿವರಾದ ರಮಾನಾಥ ರೈ ಅವರು ವೈದ್ಯಕೀಯ ವಿಷಯಗಳನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ ಕಲೆ ಡಾ| ಮುರಳಿಯವರಿಗೆ ಸಿದ್ಧಿಸಿದೆ ಎಂದರು.
ಡಾ| ಮುರಳಿಯವರು ಬರೆದ ಎಲ್ಲ ಪುಸ್ತಕಗಳನ್ನು ಲೋಕಾರ್ಪಣೆ ಗೊಳಿಸುವ ಅವಕಾಶ ನನಗೆ ದೊರಕಿದೆ. ಅವರ ಪ್ರಾಮಾಣಿಕತೆ ಮತ್ತು ನಿಸ್ವಾರ್ಥ ಸೇವಾ ಮನೋಭಾವ ಮೆಚ್ಚತಕ್ಕದ್ದು. ಸಾರ್ವಜನಿಕ ಬದುಕಿನಲ್ಲಿ ನಮ್ಮಿಂದ ಲಕ್ಷಾಂತರ ಮಂದಿ ಸಹಕಾರ ಪಡೆದುಕೊಳ್ಳುತ್ತಾರೆ.
ಆದರೆ ಅದನ್ನು ನೆನಪಿಟ್ಟುಕೊಳ್ಳುವ ಮಂದಿ ಬಹಳ ಕಡಿಮೆ. ಆದರೆ ಡಾ| ಮುರಳಿ ಅವರು ಇದಕ್ಕೆ ಅಪವಾದ. ಸಹಾಯ ಮಾಡಿದ 25 ವರ್ಷಗಳ ಬಳಿಕವೂ ಎಲ್ಲವನ್ನೂ ನೆನಪಿಟ್ಟುಕೊಂಡಿರುವುದು ಅವರ ಹೃದಯ ವೈಶಾಲ್ಯಕ್ಕೆ ಸಾಕ್ಷಿ ಎಂದು ಕೊಂಡಾಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ| ರಮಾನಂದ ಬನಾರಿ ಅವರು ಮಾತನಾಡುತ್ತಾ ಡಾ| ಮುರಳಿ ಅವರು ಬರೆದ “ಸಂಜೀವಿನಿ’ ಕೃತಿ, ವೈದ್ಯ ಲೋಕದ ಅಪರೂಪದ ಕೃತಿಯಾಗಿದ್ದು ಜನ ಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವಲ್ಲಿ ಅತೀ ನಿರ್ಣಾಯಕ ಪಾತ್ರ ವಹಿಸಬಲ್ಲುದು ಎಂದರು.
ರಾಮಾಯಣದ ಸಮಯದಲ್ಲಿ ರಾಮ-ಲಕ್ಷ್ಮಣರಿಗೆ ಹನುಮಂತ ಬೆಟ್ಟದ ಜತೆಗೆ ಹೊತ್ತು ತಂದ ಸಂಜೀ ವಿನಿ ಔಷಧ ಅಮೃತವಾದಂತೆ ಈ “ಸಂಜೀವಿನಿ’ ಕೃತಿ ಕೂಡಾ ಜನ ಸಾಮಾನ್ಯರಿಗೆ ಮತ್ತು ಮನೆ ಮನೆಗೂ ತಲುಪಲಿ ಎಂದು ಶುಭ ಹಾರೈಸಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಈ ಕೃತಿ ಬಹಳ ಮುಖ್ಯ ಭೂಮಿಕೆ ವಹಿಸಲಿದೆ ಎಂದರು.
ಹರ್ಷಾದ್ ವರ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಚೂಂತಾರು ಪ್ರತಿಷ್ಠಾನದ ಅಧ್ಯಕ್ಷ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಉಪಸ್ಥಿತರಿದ್ದರು.
ರಾಮಕೃಷ್ಣ ಭಟ್ ಚೊಕ್ಕಾಡಿ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಿರಿ, ಸ್ವಸ್ತಿ, ಸ್ನೇಹಾ ಪ್ರಾರ್ಥನೆ ಮಾಡಿದರು. ಮಹೇಶ್ ಚೂಂತಾರು ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಡಾ| ರಾಜಶ್ರೀ ಮೋಹನ್, ಖ್ಯಾತ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗ್ಗಡೆ, ವೈದ್ಯ ಸಾಹಿತಿ ಡಾ| ಮೀರಾ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.