ವಾಂತಿಚ್ಚಾಲು ಮಂತ್ರಮೂರ್ತಿ ಗುಳಿಗ ಸನ್ನಿಧಿಯಲ್ಲಿ ಸರ್ವಧರ್ಮ ಮಾತೃ ಸಂಗಮ


Team Udayavani, Apr 26, 2019, 3:26 PM IST

matru

ಬದಿಯಡ್ಕ: ಸರ್ವಧರ್ಮ ಮಾತೃ ಸಂಗಮ ಕಾರ್ಯಕ್ರಮ ಏ.27 ರಂದು ಬದಿಯಡ್ಕದ ಉಪ್ಲೇರಿ ವಾಂತಿಚ್ಚಾಲು ಮಂತ್ರಮೂರ್ತಿ ಗುಳಿಗ ಸನ್ನಿಧಿಯಲ್ಲಿ ಜರಗಲಿದೆ.

ಐದು ವರ್ಷಗಳಿಗೊಮ್ಮೆ ಜರಗುವ ದೈವದ ಧರ್ಮಕೋಲೋತ್ಸವ, ಅಷ್ಟೋತ್ತರ ಪಂಚಶತ ಸೀಯಾಳಭಿಷೇಕ, ಲೋಕ ಕಲ್ಯಾಣಾರ್ಥವಾಗಿ ಸಗ್ರಹ ಮುಖ ಶನೈಶ್ವರ ಶಾಂತಿ ಮಹಾಯಾಗವು ಎ. 26, 27 ಹಾಗೂ 28 ರಂದು ಜರಗಲಿದೆ. ಎ. 26 ರಂದು ಸಂಜೆ 4 ಗಂಟೆಗೆ ದೀಪ ಪ್ರತಿಷ್ಠೆ , ಮಂತ್ರಮೂರ್ತಿ ಗುಳಿಗ ದೈವದ ಭಂಡಾರ ಇಳಿಯುವುದು, ವಿಶೇಷ ತಂಬಿಲ ಸೇವೆ, ಸಾಮೂಹಿಕ ಪ್ರಾರ್ಥನೆ, 5 ಗಂಟೆಗೆ ಕುಂಟಾಲುಮೂಲೆ ಶ್ರೀ ಆದಿಶಕ್ತಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಪರಿಸರದಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ, ಉಗ್ರಾಣ ಮುಹೂರ್ತ, ಮಂತ್ರಮೂರ್ತಿ ಗುಳಿಗ ದೈವಕ್ಕೆ ದ್ವಾದಶ ತಂಬಿಲ ಸೇವೆ, ಸಂಜೆ 6.30 ಕ್ಕೆ ಧಾರ್ಮಿಕ ಸಮಾರಂಭದ ಉದ್ಘಾಟನೆ, ರಾತ್ರಿ 8 ರಿಂದ ಯಕ್ಷಗಾನ ಬಯಲಾಟ, 10.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ. ಎ.27 ರಂದು ಪ್ರಾತಃಕಾಲ 6.15 ಕ್ಕೆ ದ್ವಾದಶ ನಾಳಿಕೇರ ಅಷ್ಟದ್ರವ್ಯ ಸಹಿತ ಗಣಪತಿ ಹೋಮ, ದೈವಕ್ಕೆ ಸೀಯಾಳಭೀಷೇಕ, ಭಜನೆ, 10 ಗಂಟೆಗೆ ಲೋಕ ಕಲ್ಯಾಣಾರ್ಥವಾಗಿ ಸಮಸ್ತ ಜನರ ದುರಿತ ನಿವಾರಣೆ, ಕಂಟಕ ದೋಷ, ಸಮಯದೋಷ, ಶತ್ರುದೋಷ, ಶನಿಸಂಕಷ್ಟ ಪರಿಹಾರಕ್ಕಾಗಿ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಸಗ್ರಹಮುಖ ಶನೈಶ್ವರ ಶಾಂತಿ ಮಹಾಯಾಗ, ಮಧ್ಯಾಹ್ನ 12 ಗಂಟೆಗೆ ಮಹಾ ಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.


ಮಧ್ಯಾಹ್ನ 1 ಗಂಟೆಗೆ ಸರ್ವಧರ್ಮ ಮಾತೃಸಂಗಮದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲ ಅಧ್ಯಕ್ಷೆ ಶ್ರೀಮಾತಾ ಪ್ರಶಸ್ತಿ ಪುರಸ್ಕೃತರಾದ ಈಶ್ವರಿ ಶ್ಯಾಮ ಭಟ್‌ ಅಧ್ಯಕ್ಷತೆಯಲ್ಲಿ ಬಪ್ಪನಾಡು ಸಹಕಾರಿ ಬ್ಯಾಂಕ್‌ ನಿರ್ದೇಶಕಿ ಕಸ್ತೂರಿ ಪಂಜ ಉದ್ಘಾಟಿಸುವರು. ಸಂಜೆ 4 ಗಂಟೆಗೆ ನೃತ್ಯ ವೈವಿಧ್ಯ, ರಾತ್ರಿ 7 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜ್ಯೋತಿಷ್ಯ ತಿಲಕಂ ದೈವಜ್ಞ ಶಶಿಧರ ಮಾಂಗಾಡ್‌ ಉದ್ಘಾಟಿಸುವರು. ಕಾರ್ಕಳದ ಮುದ್ರಾಡಿ ಆದಿಶಕ್ತಿ ದೇವಸ್ಥಾನದ ಶ್ರೀ ಧರ್ಮಯೋಗಿ ಮೋಹನ್‌ ಸ್ವಾಮೀಜಿ ಆಶೀರ್ವಚನ ನೀಡುವರು.

ರಾತ್ರಿ 8 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಎ. 28 ರಂದು ಬೆಳಗ್ಗೆ 6.30 ಕ್ಕೆ ಸೀಯಾಳಭೀಷೇಕ, ಕ್ಷೀರಾಭೀಷೇಕ, 10 ಗಂಟೆಗೆ ಮಂತ್ರಮೂರ್ತಿ ಗುಳಿಗ ದೈವದ ಕೋಲೋತ್ಸವ ಆರಂಭ, ಮಧ್ಯಾಹ್ನ ತುಲಾಭಾರ ಸೇವೆ, ದೈವದ ಪ್ರಸಾದ ವಿತರಣೆ ನಡೆಯಲಿದೆ.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.