ಸೆ. 15, 16: ಎಡನೀರು ಶ್ರೀಗಳ ಆರಾಧನೆ; ಅ. 1: ನೂತನ ಶ್ರೀಗಳ ಪೀಠಾರೋಹಣ
Team Udayavani, Sep 9, 2020, 2:13 AM IST
ಸಭೆಯಲ್ಲಿ ಸಚ್ಚಿದಾನಂದ ಭಾರತೀ ಶ್ರೀಗಳು ಮಾತನಾಡಿದರು.
ಕಾಸರಗೋಡು: ಎಡನೀರು ಮಠಾಧೀಶ ಶ್ರೀಮತ್ ಕೇಶವಾನಂದ ಭಾರತೀ ಶ್ರೀಗಳ ಪ್ರಥಮ ಆರಾಧನೆ ಕಾರ್ಯಕ್ರಮವು ಸೆ. 15 ಮತ್ತು 16ರಂದು ಶ್ರೀ ಮಠದ ಪರಿಸರದಲ್ಲಿ ನಡೆಯಲಿದೆ. ಕರ್ನಾಟಕ ಲೋಕಸೇವಾ ಆಯೋಗದ ನಿವೃತ್ತ ಆಯುಕ್ತ ಟಿ. ಶಾಮ ಭಟ್ ಸಭೆಯ ಅಧ್ಯಕ್ಷತೆ ಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕೊರೊನಾ ನಿಬಂಧನೆಗಳ ಪಾಲನೆಯೊಂದಿಗೆ ಎಲ್ಲ ವೈದಿಕ ವಿಧಿಗಳನ್ನು ನಿರ್ವಹಿಸಲು ತೀರ್ಮಾ ನಿಸಲಾಯಿತು.
ಸಭೆಯಲ್ಲಿ ನೂತನ ಮಠಾಧಿ ಪತಿಗಳಾಗಲಿರುವ ಶ್ರೀ ಸಚ್ಚಿದಾನಂದ ಭಾರತೀ, ಮಲ್ಲ ಶ್ರೀ ಕ್ಷೇತ್ರದ ಮೊಕ್ತೇಸರ ಆನೆಮಜಲು ವಿಷ್ಣು ಭಟ್, ಡಾ| ಬಿ.ಎಸ್. ರಾವ್, ವಿದ್ವಾನ್ ಪಂಜ ಭಾಸ್ಕರ ಭಟ್, ಪ್ರಕಾಶ್ ರೆಡ್ಡಿ ಬೆಂಗಳೂರು ಉಪಸ್ಥಿತರಿದ್ದರು. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಹಾಗೂ ಸೂರ್ಯನಾರಾಯಣ ಎಡನೀರು ಸ್ವಾಗತಿಸಿ ಸಭೆ ನಿರ್ವಹಿಸಿದರು. ರಾಜೇಂದ್ರ ಕಲ್ಲೂರಾಯ ವಂದಿಸಿದರು.
ಕಾಂಚಿ ಶ್ರೀಗಳಿಂದ ದೀಕ್ಷೆ
ನೂತನ ಯತಿವರ್ಯರಾಗಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ಪೀಠಾರೋಹಣ ಕಾರ್ಯಕ್ರಮವು ಅ. 1ರಂದು ಶ್ರೀ ಮಠದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಪೂರ್ವಭಾವಿಯಾಗಿ ಅ. 19ರಿಂದ ಕುಂಬಳೆ ಸೀಮೆಯ ನಾಲ್ಕು ಪ್ರಧಾನ ದೇವಾಲಯಗಳಲ್ಲಿ ಒಂದಾದ ಅಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಆರಂಭಗೊಳ್ಳುವ ಪುಣ್ಯ ಕ್ಷೇತ್ರಗಳ ಸಂದರ್ಶನವು ಕುಂಬಳೆ ಸೀಮೆಯ ಎಲ್ಲ ದೇವಾಲಯಗಳಿಗೂ ಭೇಟಿ ನೀಡಿ ಹೊರನಾಡು, ಹೊರ ರಾಜ್ಯಗಳ ಪುಣ್ಯ ಕ್ಷೇತ್ರಗಳನ್ನು ಸಂದರ್ಶಿಸಿ ಕಾಂಚಿ ಕಾಮಕೋಟಿ ಜಗದ್ಗುರು ಪೀಠದಲ್ಲಿ ಸಂಪನ್ನಗೊಳ್ಳಲಿದೆ. ಸೆ. 28ರಂದು ಕಾಂಚಿ ಕಾಮಕೋಟಿ ಜಗದ್ಗುರುಗಳಾದ ಶ್ರೀ ವಿಜಯೇಂದ್ರ ಸರಸ್ವತೀ ಶ್ರೀಗಳಿಂದ ಅಧಿಕೃತವಾಗಿ ಸನ್ಯಾಸ ದೀಕ್ಷೆ ಸ್ವೀಕರಿಸಿ ಮರಳುವ ಶ್ರೀ ಸಚ್ಚಿದಾನಂದತೀರ್ಥರ ಪುರಪ್ರವೇಶ ಹಾಗೂ ಪೀಠಾರೋಹಣ ಕಾರ್ಯಕ್ರಮ ಅ. 1 ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.