ಬಿಜೆಪಿ ವತಿಯಿಂದ ಬದಿಯಡ್ಕದಲ್ಲಿ ಪಾಯಸ ವಿತರಣೆ
Team Udayavani, May 31, 2019, 9:51 AM IST
ಬದಿಯಡ್ಕ: ಉತ್ತಮವಾದ ವ್ಯಕ್ತಿತ್ವ ಹೊಂದಿದ ಕಠಿಣ ಪರಿಶ್ರಮದ ವ್ಯಕ್ತಿಯು ಇಂದು ಮತ್ತೂಮ್ಮೆ ನಮ್ಮನ್ನು ಮುನ್ನಡೆಸಲಿದ್ದಾರೆ. ವಿರೋಧಪಕ್ಷಗಳ ನೇತಾರರ ಸುಳ್ಳು ಪ್ರಚಾರಗಳಿಗೆ ಕಿವಿಗೊಡದ ದೇಶದ ಜನತೆ ಪ್ರಧಾನ ಸೇವಕನಿಗೆ ರಾಜಪೀಠವನ್ನು ನೀಡಿದೆ. ವಿರೋಧಿಗಳ ನಿಂದನೆಗಳಿಗೆ ಬಂಡೆಕಲ್ಲಿನಂತೆ ನಿಂತಿರುವ ಆರ್‌ಎಸ್‌ಎಸ್‌ನ ನಿಷ್ಠಾವಂತ ದೇಶವನ್ನಾಳುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಚಾರ. ಈ ನಿಟ್ಟಿನಲ್ಲಿ ಸಿಹಿ ಹಂಚಿ ಸಂಭ್ರಮಿಸುತ್ತಿರುವುದು ಸಂತಸದ ವಿಚಾರವಾಗಿದೆ. ನರೇಂದ್ರ ಮೋದಿಯವರ ಮೂಲಕ ದೇಶವು ಮತ್ತೂಮ್ಮೆ ಪ್ರಜ್ವಲಿಸಲಿದೆ ಎಂದು ಬದಿಯಡ್ಕ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ, ಹಿರಿಯರಾದ ಬಿ.ಸುಂದರ ಪ್ರಭು ಬದಿಯಡ್ಕ ಹೇಳಿದರು.
ನರೇಂದ್ರ ಮೋದಿಯವರು ಮತ್ತೂಮ್ಮೆ ಅಧಿಕಾರಕ್ಕೇರುತ್ತಿರುವ ಸಂದರ್ಭದಲ್ಲಿ ಬದಿಯಡ್ಕ ಪೇಟೆಯಲ್ಲಿ ನಡೆದ ಪಾಯಸ ವಿತರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಸರಗೋಡು ಮಂಡಲ ಅಧ್ಯಕ್ಷ ಎಂ.ಸುಧಾಮ ಗೋಸಾಡ ಈ ಸಂಧರ್ಭದಲ್ಲಿ ಮೋದಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡುತ್ತಾ ರಾಮಲಕ್ಷ್ಮಣರಂತೆ ಒಗ್ಗಟ್ಟಿನಿಂದ ದೇಶದ ಒಳಿತಿಗಾಗಿ ಹೋರಾಡಿ ವಿರೋಧಿಗಳನ್ನು ಮಣ್ಣು ಮುಕ್ಕಿಸಿದ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ನಮ್ಮ ಜನಪ್ರಿಯ ನಾಯಕರಾಗಿದ್ದಾರೆ. ಅವರ ಆಡಳಿತದಲ್ಲಿ ದೇಶವು ಇನ್ನಷ್ಟು ಪ್ರಗತಿಯನ್ನು ಕಾಣಲಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಎಲ್ಲರನ್ನೂ ಒಂದುಗೂಡಿಸುವ ಪ್ರಧಾನ ಸೇವಕ ನರೇಂದ್ರ ಮೋದಿಯವರು ವಿಶ್ವವಂದ್ಯರು ಎಂದರು.
ನೇತಾರರಾದ ವಿಶ್ವನಾಥ ಪ್ರಭು ಕರಿಂಬಿಲ, ಬಾಲಕೃಷ್ಣ ಶೆಟ್ಟಿ ಕಡಾರು, ಎಂ.ನಾರಾಯಣ ಭಟ್, ಅವಿನಾಶ್ ರೈ ಹಾಗೂ ನರೇಂದ್ರ ಮೋದಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಜೊತೆಗಿದ್ದು ಸಿಹಿ ಹಂಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.