ಕಿರು ವಿಮಾನ ನಿಲ್ದಾಣ: ಸ್ಥಳ ಸಮೀಕ್ಷೆ ಪೂರ್ಣ


Team Udayavani, Oct 2, 2018, 6:00 AM IST

01ksde.jpg

ಕಾಸರಗೋಡು: ಜಿಲ್ಲೆಯ ಪೆರಿಯ ಕನಿಕುಂಡಿನಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಿಸಲು ಅಗತ್ಯವಿರುವ  ಸ್ಥಳದ ಸಮೀಕ್ಷೆ ಪೂರ್ತೀಕರಿಸಲಾಗಿದೆ. ಕಿರು ವಿಮಾನ ನಿಲ್ದಾಣ ಸ್ಥಾಪಿಸಲು 80 ಎಕರೆ ಸ್ಥಳ ಅಗತ್ಯವಿದೆ. ಈ ಪೈಕಿ 28.50 ಎಕರೆ ಸರಕಾರಿ ಭೂಮಿ ಇದೆ. ಬಾಕಿ 51.50 ಎಕ್ರೆ ಸ್ಥಳದ ಅಗತ್ಯವಿದೆ. ಅದನ್ನು ಪರಿಸರದ ಖಾಸಗಿ ವ್ಯಕ್ತಿಗಳಿಂದ ಖರೀದಿಸಲಾಗುವುದು.

20 ಮನೆಯವರು ಜಮೀನು 
ಬಿಟ್ಟುಕೊಡಲು ಸಿದ್ಧ

ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನನ್ನು ಬಿಟ್ಟುಕೊಡಲು ಪರಿಸರದ 20 ಮನೆಯವರು ಒಪ್ಪಿಗೆ ನೀಡಿದ್ದಾರೆಂದು ಕಂದಾಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾವು ಬಿಟ್ಟುಕೊಡುವ ಸ್ಥಳಕ್ಕೆ ತಮಗೆ ಸೂಕ್ತ ನಷ್ಟ ಪರಿಹಾರ ನೀಡಬೇಕೆಂದು ಬೇಡಿಕೆಯನ್ನು ಈ ಕುಟುಂಬದವರು ಮುಂದಿರಿಸಿದ್ದಾರೆ. ಅವರ ಬೇಡಿಕೆಯನ್ನು ಪರಿಶೀಲಿಸಿ ಅಗತ್ಯದ ಭೂ ವಶಪಡಿಸುವ ಕ್ರಮಕ್ಕೆ ಶೀಘ್ರ ಚಾಲನೆ ನೀಡಲಾಗುವುದೆಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

ಕಿರು ವಿಮಾನ ನಿಲ್ದಾಣ ಕಾರ್ಯಾರಂಭಗೊಂಡಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನ ಪ್ರವಾಸೋದ್ಯಮ ಕೇಂದ್ರವಾಗಿ ಬದಲಾಗಲಿದೆ. ಕಣ್ಣೂರಿನಲ್ಲಿ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣ ಈಗಾಗಲೇ ಕಾರ್ಯಾರಂಭಗೊಳ್ಳಲಿದೆ. ಅಲ್ಲಿಂದ ಮತ್ತು ಮಂಗಳೂರು ಹಾಗೂ ಮತ್ತಿತರ ವಿಮಾನ ನಿಲ್ದಾಣಗಳಿಂದ ಪೆರಿಯ ಕಿರು ವಿಮಾನ ನಿಲ್ದಾಣಗಳಿಗೆ ಕಿರು ವಿಮಾನಗಳಲ್ಲಿ ಪ್ರವಾಸಿಗರನ್ನು ಜಿಲ್ಲೆಗೆ ತರಲು ಈ ಯೋಜನೆಯಿಂದ ಸಾಧ್ಯವಾಗಲಿದೆ. ಮಾತ್ರವಲ್ಲ ಇದರಿಂದ ಬೇಕಲ ಪ್ರವಾಸೋದ್ಯಮ ಯೋಜನೆ ಮಾತ್ರವಲ್ಲ, ಜಿಲ್ಲೆಯ ಇತರ ಎಲ್ಲಾ ಪ್ರವಾಸಿ ಕೇಂದ್ರಗಳಿಗೆ ದೇಶಿ ಮತ್ತು ವಿದೇಶಿ ಪ್ರವಾಸಿಗಳು ಹರಿದು ಬರುವ ಸಾಧ್ಯತೆಯಲ್ಲಿ ಹೆಚ್ಚಳವಾಗಲಿದೆ. ಈ ಮೂಲಕ ಅದು ಜಿಲ್ಲೆಗೆ ಅಂತಾರಾಷ್ಟ್ರೀಯ  ಭೂಪಟದಲ್ಲಿ ಪ್ರಮುಖ ಸ್ಥಾನ ನೀಡಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಿರು ವಿಮಾನ ನಿಲ್ದಾಣ ಸ್ಥಾಪಿಸುವ ಸ್ಥಳದ ಮೂರು ಕಿಲೋ ಮೀಟರ್‌ ದೂರದಲ್ಲಿ ಬೇಕಲ ಕೋಟೆ ಇದೆ. ಅಲ್ಲಿಂದ ಕೆಲವೇ ಕಿ.ಮೀ. ದೂರದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ, ಕ್ಯಾಶ್‌ ಕೌಂಟರ್‌ ಅಲ್ಲದೆ ನೂತನವಾಗಿ ನಿರ್ಮಿಸುತ್ತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬರುತ್ತಿರುವ ಆನಂದಾಶ್ರಮ ಅಲ್ಲಿಂದ ಕೆಲವೇ ಮೀಟರ್‌ ದೂರದಲ್ಲಿದೆ. ಮಾತ್ರವಲ್ಲ ಚಂದ್ರಗಿರಿ ಕೋಟೆ, ಕಾಸರಗೋಡು ಕೋಟೆ, ಆರಿಕ್ಕಾಡಿ ಕೋಟೆ, ಪೊವ್ವಲ್‌ (ಪೊಳಲಿ) ಕೋಟೆ, ಪೊಸಡಿಗುಂಪೆ ಮತ್ತಿತರ ಜಿಲ್ಲೆಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರ ಪ್ರವಾಹ ಮತ್ತು ಅವುಗಳ ಅಭಿವೃದ್ಧಿಗೂ ಈ ಕಿರು ವಿಮಾನ ನಿಲ್ದಾಣ ಸಹಾಯಕವಾಗಲಿದೆ.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.