“ಬಾಡುವುದು ಚಿಗುರುವುದು ಕೃಷಿಯ ಸಹಜ ಕ್ರಿಯೆ’

ಕೃಷಿ ದರ್ಶನ, ಸಂವಾದ, ಸಸಿ ವಿತರಣೆ

Team Udayavani, Jul 2, 2019, 5:55 AM IST

01KSDE5

ಏತಡ್ಕ: ಅತಿವೃಷ್ಟಿ, ಅನಾವೃಷ್ಟಿ ಪ್ರಕೃತಿ ಸಹಜ. ಬಾಡುವುದು, ಚಿಗುರುವುದು ಕೃಷಿಯ ಅಂತಃಸತ್ವ. ಎದೆಗುಂದದೆ ಮುನ್ನಡೆಯುವವನೇ ನಿಜವಾದ ಕೃಷಿಕ ಎಂಬುದಾಗಿ ಪ್ರಗತಿಪರ ಕೃಷಿಕ ಸತ್ಯನಾರಾಯಣ ಡಿ.ಕೆ. ಹೇಳಿದರು.

ಏತಡ್ಕದ ಕುಂಬಾxಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ಆಶ್ರಯದಲ್ಲಿ ಡಾ| ವೇಣುಗೋಪಾಲ್‌ ಕಳೆಯತ್ತೋಡಿ ಅವರ ಗ್ರೀನ್‌ ವ್ಯೂ ಮನೆಯಲ್ಲಿ ಏರ್ಪಡಿಸಲಾದ ಕೃಷಿ ದರ್ಶನ, ಸಂವಾದ ಮತ್ತು ಸಸಿ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ನಮ್ಮ ಕೃಷಿ ಭೂಮಿಯಲ್ಲಿ ಮರಗಳನ್ನು ಬೆಳೆಸುವುದರಿಂದ ಪರಿಸರ ಸಂರಕ್ಷಣೆಯ ಜತೆಗೆ ಹೇಗೆ ಆರ್ಥಿಕವಾಗಿ ಲಾಭ ಗಳಿಸಬಹುದು ಎಂಬುದನ್ನು ಅವರು ಸೋದಾಹರಣವಾಗಿ ವಿವರಿಸಿದರು.

ಅರಣ್ಯ ನಾಶವನ್ನು ತಡೆಗಟ್ಟಲು ಪರಿಣಾಮಕಾರಿ ಕಾನೂನಿನ ಅನುಷ್ಠಾನದ ಅಗತ್ಯವಿದೆ ಎಂದರು.

ವಾರ್ಡ್‌ ಸದಸ್ಯ ಎಸ್‌. ಮೊಹಮ್ಮದ್‌ ಅವರು ಅಬ್ದುಲ್‌ ರಹಮಾನ್‌ ಹಾಜಿ ಅವರಿಗೆ ಸಸಿ ಹಸ್ತಾಂತರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಮಾತನಾಡಿ ಇಂದಿನ ದಿನಗಳಲ್ಲಿ ಜಲ ಮರುಪೂರಣ ಮತ್ತು ಮರ ಬೆಳೆಸುವಿಕೆಯ ಅಗತ್ಯವನ್ನು ಒತ್ತಿ ಹೇಳಿದರು. ವಾರ್ಡ್‌ ಸದಸ್ಯೆ ಎಲಿಝಬೆತ್‌ ಕ್ರಾಸ್ತ ಶುಭಾಶಂಸನೆಗೈದರು.

ಅಧ್ಯಕ್ಷತೆ ವಹಿಸಿದ ಗ್ರಂಥಾಲಯದ ಅಧ್ಯಕ್ಷ ಕೆ.ನರಸಿಂಹ ಭಟ್‌ ಮಾತನಾಡಿ ಜನರ ಸಹಭಾಗಿತ್ವ ಇದ್ದರೆ ಯಾವುದೇ ಕಾರ್ಯಕ್ರಮ ಯಶಸ್ವಿಯಾಗುವುದು ಎಂದು ಹೇಳಿ ಮುಖ್ಯ ಅತಿಥಿಗಳ ಮಾತನ್ನು ಪುಷ್ಟೀಕರಿಸಿದರು. ಮುಖ್ಯ ಅತಿಥಿಗಳೊಡನೆ ಸಂವಾದ ನಡೆಯಿತು. ಸಭಿಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು.

ವೈಷ್ಣವಿ, ಅತ್ರೇಯಿ, ದೀಪ್ತಿ ಪ್ರಾರ್ಥನೆ ಹಾಡಿದರು. ಡಾ| ವೇಣು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಕೆ. ಸುಬ್ರಹ್ಮಣ್ಯ ಭಟ್‌ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ವೈ.ಕೆ.ಗಣಪತಿ ಭಟ್‌ ವಂದಿಸಿದರು.

ಕಾರ್ಯಕ್ರಮದ ನೆನಪಿಗಾಗಿ ಗಿಡ ನೆಡಲಾಯಿತು. ಭಾಗವಹಿಸಿದವರಿಗೆ ಅರಣ್ಯ ಇಲಾಖೆಯಿಂದ ದೊರೆತ 200 ಸಸಿಗಳನ್ನು ವಿತರಿಸಲಾಯಿತು.

ಸಭಾ ಕಾರ್ಯಕ್ರಮಕ್ಕೆ ಮೊದಲು ಆತಿಥೇಯರ ಕೃಷಿ ಕ್ಷೇತ್ರವನ್ನು ವೀಕ್ಷಿಸಲಾಯಿತು. ಅವರ ಉತ್ತಮ ಕೃಷಿಯ ಬಗ್ಗೆ ನೋಡುಗರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಟಾಪ್ ನ್ಯೂಸ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.