ಗೋಪಾಲಕೃಷ್ಣ ಯಕ್ಷಗಾನ ಕಲಾಮಂಡಳಿ ತಿರುಗಾಟದ ಉದ್ಘಾಟನೆ
Team Udayavani, Dec 6, 2017, 1:26 PM IST
ಕಾಸರಗೋಡು: ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಮಂಡಳಿ ಇದರ 14 ನೇ ವರ್ಷದ ತಿರುಗಾಟದ ಉದ್ಘಾಟನೆಯನ್ನು ಕರ್ನಾಟಕದ ಲೋಕಸೇವಾ ಆಯೋಗದ ಅಧ್ಯಕ್ಷರಾದ ಡಾ|ಟಿ.ಶ್ಯಾಮ್ ಭಟ್ ಅವರು ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಕೇಶವಾನಂದ ಭಾರತೀ ಶ್ರೀ ಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಖ್ಯಾತ ಸಾಹಿತಿ, ಯಕ್ಷಗಾನ ಕಲಾವಿದ ಡಾ|ರಮಾನಂದ ಬನಾರಿಯವರು ವಹಿಸಿದ್ದರು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಯವರು ಶುಭಾಶಂಸನೆಗೈದರು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದರೂ ಪ್ರಸಂಗಕರ್ತರೂ ಆದ ಮಧೂರು ವೆಂಕಟಕೃಷ್ಣ ಮತ್ತು ಪೆರಡಂಜಿ ಗೋಪಾಲಕೃಷ್ಣ ಭಟ್ ಅವರನ್ನು ಸಮ್ಮಾನಿಸಲಾಯಿತು.
ವೇಣುಗೋಪಾಲ ಭಟ್ ಅವರು ಅಭಿನಂದನಾ ನುಡಿಗಳನ್ನಾಡಿದರು. ಅಗಲಿದ ಹಿರಿಯ ಯಕ್ಷಗಾನ ಕಲಾವಿದರಾದ ಟಿಪ್ಪಾಣಿ ರಾಮಚಂದ್ರ ಹೆಗ್ಡೆ ಮತ್ತು ಭಾಗವತರಾದ ಕುಬಣೂರು ಶ್ರೀಧರ ರಾವ್ ಅವರ ಸಂಸ್ಮರಣೆಯನ್ನು ಪ್ರೊ|ಎಂ.ಎಲ್.ಸಾಮಗರು ನೆರವೇರಿಸಿದರು.
ಶ್ರೀ ಮಠದ ಪ್ರಬಂಧಕ ಹಾಗೂ ಹಿರಿಯ ನ್ಯಾಯವಾದಿಗಳಾದ ಐ.ವಿ.ಭಟ್ ಸ್ವಾಗತಿಸಿದರು. ಧಾರ್ಮಿಕ ಮುಂದಾಳು ಕುಂಟಾರು ರವೀಶ ತಂತ್ರಿಯವರು ವಂದಿಸಿದರು. ಶ್ರೀ ಮಠದ ಕಾರ್ಯದರ್ಶಿ ರಾಜೇಂದ್ರ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.