ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ 11.48ಕ್ಕೆ ಅರ್ಘ್ಯಪ್ರದಾನ

Team Udayavani, Aug 30, 2018, 6:00 AM IST

290818astro06.jpg

ಉಡುಪಿ: ಶ್ರೀ ಕೃಷ್ಣಮಠದಲ್ಲಿ  ಸೆ.2, 3ರಂದು ಅದ್ದೂರಿಯಾಗಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ನಡೆಯಲಿದೆ. ಈ ಎರಡು ದಿನ ಭಜನೆ ಅರ್ಚನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ ಉತ್ಸವಗಳು ಜರಗಲಿದೆ. 

ಜನ್ಮಾಷ್ಟಮಿಯ ದಿನ ಕೃಷ್ಣಮಠದಲ್ಲಿ ಶ್ರೀಕೃಷ್ಣನಿಗೆ ಮೂರು ಹೊತ್ತು ಲಕ್ಷ ತುಳಸಿ ಅರ್ಚನೆ ನಡೆಯಲಿದೆ. ಸಂಜೆ ಜನ್ಮಾಷ್ಟಮಿಯ ವಿಶೇಷ ಪೂಜೆಗಳು ನಡೆಯಲಿದೆ. ಜನ್ಮಾಷ್ಟಮಿಗೆ ಚಂದ್ರೋದಯದ ಸಂದರ್ಭ ಅರ್ಘ್ಯ ಪ್ರದಾನ ನಡೆಯಲಿದೆ. ಅಂದು ರಾತ್ರಿ 11.48ಕ್ಕೆ  ಚಂದ್ರೋದಯವಾಗಲಿದ್ದು. ಚಂದ್ರೋದಯಕ್ಕೆ ಪೂರ್ವದಲ್ಲಿ ದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಆ ಬಳಿಕ ಚಂದ್ರೋದಯದ ಸಮಯದಲ್ಲಿ ತುಳಸಿ ಗಿಡದ ಬಳಿ ಬಂದು ಚಂದ್ರನ ದರ್ಶನ ಮಾಡಿ ಅರ್ಘ್ಯ ಪ್ರದಾನ ಮಾಡಲಾಗುತ್ತದೆ. 
 
ವಿಟ್ಲಪಿಂಡಿಯಂದು ಇಸ್ಕಾನ್‌ ಅವರಿಂದ ನಿರಂತರ ಭಜನ ನಡೆಯಲಿದೆ. ದೈನಂದಿನ ಪೂಜೆಗಳು ಲಕ್ಷ ತುಳಸಿ ಅರ್ಚನೆ ನಡೆಯಲಿದ್ದು ಮಧ್ಯಾಹ್ನ 3ಕ್ಕೆ ಉತ್ಸವ ಆರಂಭಗೊಳ್ಳಲಿದೆ. ರಥದಲ್ಲಿ ಶ್ರೀಕೃಷ್ಣನ ಮೂರ್ತಿಯನ್ನು ರಥಬೀದಿಗೆ ಒಂದು ಸುತ್ತು ಪ್ರದಕ್ಷಿಣೆ ತಂದು, ಅನಂತರ ಆ ಮೂರ್ತಿಯನ್ನು ಮಧ್ವಸರೋವರದಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಈಗ ಚಾತುರ್ಮಾಸ್ಯವ್ರತವಾದ ಕಾರಣ ಉತ್ಸವ ಮೂರ್ತಿಯನ್ನು ಗರ್ಭಗುಡಿಯ ಹೊರಗೆ ತರುವುದಿಲ್ಲ. ಹೀಗಾಗಿ ಮಣ್ಣಿನ ಮೂರ್ತಿಗೆ ಪೂಜೆ ಸಲ್ಲಿಸಿ ಉತ್ಸವದಲ್ಲಿ ತರಲಾಗುವುದು. 

20ಸಾವಿರ ಜನರಿಗೆ ಅನ್ನಸಂತರ್ಪಣೆ
ಜನ್ಮಾಷ್ಟಮಿಯಂದು ಸುಮಾರು 20ಸಾವಿರ ಜನರಿಗೆ ಅನ್ನಸಂತರ್ಪಣೆಗೆ ಸಿದ್ದತೆ ನಡೆಸಲಾಗಿದೆ. ಉತ್ಸವ ಸಂದರ್ಭ ಹಂಚಲು 20ಬಗೆಯ ಉಂಡೆ ಚಕ್ಕುಲಿಯನ್ನು ಹಂಚಲಾಗುತ್ತದೆ. ಶ್ರೀಕೃಷ್ಣಮಠದ ಚಿಣ್ಣರ ಸಂತರ್ಪಣೆ ಶಾಲೆಗಳಿಗೂ ಕೂಡ ಇದನ್ನು ಹಂಚಲಾಗುತ್ತಿದೆ. ಸುಮಾರು 120 ಶಾಲೆಗಳಿಗೆ ಇದನ್ನು ಹಂಚಲಾಗುತ್ತದೆ.  

ಅಡಕೆ ಕಂಬಕ್ಕೆ ಈ ಬಾರಿ ಅವಕಾಶ
ಮಠದ ಸಂಪ್ರದಾಯದಂತೆ ಕನಕ ಗೋಪುರದೆದುರು ಅಡಕೆ ಮರದ ಕಂಬವನ್ನು ನೆಟ್ಟು ಎಣ್ಣೆ ಹಚ್ಚಿ ಕಂಬವನ್ನೇರುವ ಸ್ಪರ್ಧೆ ನಡೆಯುತ್ತಿತ್ತು. ಈ ಹಿಂದೆ ನಡೆದ ಅಹಿತಕರ ಘಟನೆಯಿಂದ ಅದನ್ನು ನಿಲ್ಲಿಸಲಾಗಿತ್ತು. ಆದರೆ ಈ ಬಾರಿ ಈ ಸಂಪ್ರದಾಯ ನಡೆಯಲಿದೆ ಎಂದು ಪರ್ಯಾಯ ಪಲಿಮಾರು ಶ್ರೀಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.