ರೈಲು ವಿಧ್ವಂಸಕ್ಕೆ ನಿರಂತರ ಯತ್ನ : ಹಳಿಯಲ್ಲಿತ್ತು 35 ಕೆಜಿ ಕಾಂಕ್ರೀಟ್ ತುಂಡು!
Team Udayavani, Aug 24, 2022, 12:43 PM IST
ಕಾಸರಗೋಡು : ಜಿಲ್ಲೆಯಲ್ಲಿ ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇರಿಸಿ ವಿಧ್ವಂಸಕ ಕೃತ್ಯ ಎಸಗುವ ಯತ್ನ ನಿರಂತರ ಮುಂದುವರಿದಿದೆ.
ಕಾಸರಗೋಡು ರೈಲು ನಿಲ್ದಾಣ ಸಮೀಪ ತಳಂಗರೆ ಪರಿಸರದಲ್ಲಿ ದುಷ್ಕರ್ಮಿಗಳು ಮಂಗಳವಾರ ಹಳಿಯಲ್ಲಿ ಕಲ್ಲುಗಳನ್ನಿರಿಸಿ ಬುಡಮೇಲು ಕೃತ್ಯಕ್ಕೆ ಯತ್ನಿಸಿದ್ದಾರೆ. ಈ ಬಗ್ಗೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರವಿವಾರವೂ 3 ಕಡೆ ಯತ್ನ
ಜಿಲ್ಲೆಯ ತೃಕ್ಕನ್ನಾಡು, ಕುಂಬಳೆ, ಹೊಸದುರ್ಗದಲ್ಲಿ ರೈಲು ಹಳಿಯಲ್ಲಿ ಬೃಹತ್ ಗಾತ್ರದ ಕಲ್ಲುಗಳನ್ನು ಮತ್ತು ಕಬ್ಬಿಣದ ಸರಳುಗಳನ್ನಿರಿಸಿದ ಘಟನೆ ರವಿವಾರ (ಆ. 21) ನಡೆದಿದೆ.
ಕೋಟಿಕುಳಂ-ಬೇಕಲ ಮಧ್ಯೆ ತೃಕ್ಕನ್ನಾಡು ದೇಗುಲದ ಹಿಂದುಗಡೆಯಿರುವ ರೈಲು ಹಳಿಯಲ್ಲಿ ಕಬ್ಬಿಣದ ಸರಳುಗಳು ಒಳಗೊಂಡ ಬೃಹತ್ ಗಾತ್ರದ ಕಾಂಕ್ರೀಟ್ ತುಂಡುಗಳನ್ನಿರಿಸಿ ಆ ಮೂಲಕ ರೈಲುಗಳನ್ನು ಬೀಳಿಸುವ ಸಂಚು ನಡೆಸಲಾಗಿದೆ. ರೈಲ್ವೇ ಗಾರ್ಡ್ ಹಳಿಯಲ್ಲಿ ಕಾಂಕ್ರೀಟ್ ತುಂಡುಗಳನ್ನು ಇರಿಸಿರುವುದನ್ನು ಕಂಡು ಸಕಾಲದಲ್ಲಿ ಅದನ್ನು ಎತ್ತಿ ಬದಿಗೆ ಎಸೆದು ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದರು. ಸುಮಾರು 35 ಕಿಲೋ ತೂಕದ ಕಾಂಕ್ರೀಟ್ ತುಂಡನ್ನು ಹಳಿ ಮೇಲೆ ಇರಿಸಲಾಗಿತ್ತು. ಈ ಬಗ್ಗೆ ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂಬಳೆ ರೈಲು ನಿಲ್ದಾಣದ ಸುಮಾರು 400 ಮೀಟರ್ ಉತ್ತರ ಭಾಗದಲ್ಲಿ ಹಳಿಗಳ ಮೇಲೆ ಕಲ್ಲುಗಳನ್ನು ಇರಿಸಿ ಕೃತ್ಯಕ್ಕೆ ಯತ್ನಿಸಲಾಗಿದೆ. ಹಳಿಯ ಮೇಲೆ ಕಲ್ಲುಗಳನ್ನು ಇರಿಸಿರುವುದು ಸ್ಥಳೀಯರ ಗಮನಕ್ಕೆ ಬಂದು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಬಗ್ಗೆ ರೈಲ್ವೇ ಸೆಕ್ಷನ್ ಆಫೀಸರ್ ರಂಜಿತ್ ಕುಮಾರ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸದುರ್ಗದಲ್ಲಿ ರೈಲಿಗೆ ಕಲ್ಲು ಎಸೆಯಲಾಗಿದೆ. ಈ ಬಗ್ಗೆ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿದ್ದಾರೆ. ಈ ಮೂರು ಘಟನೆಗಳನ್ನು ರೈಲ್ವೇ ಭದ್ರತಾ ಪಡೆ (ಆರ್‌ಪಿಎಫ್), ರೈಲ್ವೇ ಪೊಲೀಸರು ಮತ್ತು ಲೋಕಲ್ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.