ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಬೇಕು: ಪದ್ಮನಾಭ ಶೆಟ್ಟಿ
ಕಾಟುಕುಕ್ಕೆ ಎಸ್‌ಎಸ್‌ಎಚ್‌ಎಸ್ ಶಾಲೆಯಲ್ಲಿ ಎನ್‌ಎಸ್‌ಎಸ್ ದಿನಾಚರಣೆ
Team Udayavani, Sep 26, 2019, 5:16 AM IST
ಪೆರ್ಲ: ಕಾಟುಕುಕ್ಕೆ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕಂಡರಿ ಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ನೇತೃತ್ವದಲ್ಲಿ ಎನ್ನೆಸ್ಸೆಸ್ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಪ್ರಾಂಶುಪಾಲ ಪದ್ಮನಾಭ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ ಮಾತಾನಡಿದ ಅವರು ಸೇವಾ ಮನೋಭಾವ ವನ್ನು ಎಲ್ಲ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು.ಜೀವನದಲ್ಲಿ ಶಿಸ್ತು,ದೇಶ ಪ್ರೇಮ ಮೊದಲಾದ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಯುವ ಜನರು ಕ್ರಿಯಾಶೀಲರಾಗಿ ತಮ್ಮನ್ನು ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಬೇಕು.ಅದೇ ರೀತಿ ಪರಿಸರ ರಕ್ಷಣೆಯಲ್ಲಿಯೂ ಕಾಳಜಿ ವಹಿಸಬೇಕು.ಇಂದು ಪ್ಲಾಸ್ಟಿಕ್ ಮಾಲಿನ್ಯ ದೊಡ್ಡ ಸಮಸ್ಯೆಯಾಗಿದೆ.ಇದು ಕೇವಲ ನಮ್ಮ ದೇಶದ ಮಾತ್ರ ಸಮಸ್ಯೆ ಅಲ್ಲ .ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ.ಆದ್ದರಿಂದ ಅದರ ಬಳಕೆಯನ್ನು ಕಡಿಮೆ ಮಾಡುವ,ಹಾಗೆಯೆ ಸುಸ್ಥಿರ ಅಭಿವೃದ್ಧಿಗೆ,ಪರಿಸರ ಸಂರಕ್ಷಿಸುವ ಕೆಲಸ ಆಗಬೇಕಾಗಿದೆ.ಶಾಲಾ ಎನ್‌ಎಸ್‌ಎಸ್ ಘಟಕವು ಆ ನಿಟ್ಟಿನಲ್ಲಿ ಉತ್ತಮ ಕಾರ್ಯಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ಪೆನ್ನುಗಳನ್ನು ಉಪಯೋಗಿಸಿ ಎಸೆಯುವ ಬದಲು ಪುನರ್ಬಳಕೆ ಮಾಡಲು ಅಥವಾ ವೈಜ್ಞಾನಿಕವಾಗಿ ಸಂಸ್ಕರಿಸುವ ಉದ್ದೇಶದಿಂದ ಆರಂಭಿಸಲಾದ ಪೆನ್ ಫ್ರೆಂಡ್ ಯೋಜನೆಯನ್ನು ಪ್ರಾಂಶುಪಾಲರು ಉದ್ಘಾಟಿಸಿದರು.
ಮಳೆಗಾಲದಲ್ಲಿ ಸಂಭವಿಸಿದ ನೆರೆ ಸಂತ್ರಸ್ತ ಸ್ಥಳಗಳಿಗೆ ತೆರಳಿ ಸ್ವಯಂಸೇವೆ ಸಲ್ಲಿಸಿದ ಎನ್ನೆಸ್ಸೆಸ್ ವಿದ್ಯಾರ್ಥಿಗಳಾದ ಮೊಹಮ್ಮದ್ ಮಶೂಕ್ ಹಾಗೂ ಸ್ವಾತಿಕ್‌ರನ್ನು ಅಭಿನಂದಿಸಲಾಯಿತು.ದಿನಾಚರಣೆ ಪ್ರಯುಕ್ತ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ವಿದ್ಯಾಲಯಗಳಲ್ಲಿ ಎನ್ನೆಸ್ಸೆಸ್ ಘಟಕದ ಮಹತ್ವ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿ ನಾಯಕ ಅಶ್ವಿನ್ ಪಿ.ಮಾತನಾಡಿದರು.ಎನ್‌ಎಸ್‌ಎಸ್ ಯೋಜನಾಧಿಕಾರಿ ಮಹೇಶ ಏತಡ್ಕ ನೇತೃತ್ವ ನೀಡಿದರು.ಶಾಲಾ ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.