ರೋಗಿಗಳಿಗಿನ್ನು ಸೂಪರ್‌ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯ

Team Udayavani, Sep 18, 2018, 2:55 AM IST

hospital-17-9.jpg

ಕಾಸರಗೋಡು: ಕೇರಳ ರಾಜ್ಯದ ಎಲ್ಲ ಜಿಲ್ಲೆ ಮತ್ತು ಜನರಲ್‌ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಸೂಪರ್‌ ಸ್ಪೆಷಾಲಿಟಿ ಚಿಕಿತ್ಸಾ  ಸೌಲಭ್ಯ ದೊರಕಲಿದೆ. ಈವರೆಗೆ ರಾಜ್ಯದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಮಾತ್ರವಾಗಿ ಸೀಮಿತಗೊಳಿಸಲಾಗಿದ್ದ ಸೂಪರ್‌ ಸ್ಪೆಷಾಲಿಟಿ ಚಿಕಿತ್ಸಾ ಸೌಕರ್ಯಗಳು ಇನ್ನು ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ಜನರಲ್‌ ಆಸ್ಪತ್ರೆಗಳಲ್ಲಿ ಲಭಿಸಲಿವೆ. ಇದಕ್ಕಿರುವ ಕ್ರಮಗಳು ಹಾಗೂ ಅಗತ್ಯದ ಸೌಕರ್ಯಗಳನ್ನು ಶೀಘ್ರದಲ್ಲೇ ಏರ್ಪಡಿಸಲಾಗುವುದು ಎಂದು ಕೇರಳ ಆರೋಗ್ಯ ಖಾತೆ ಸಚಿವೆ ಕೆ.ಕೆ.ಶೈಲಜಾ ಅವರು ತಿರುವನಂತಪುರದಲ್ಲಿ  ತಿಳಿಸಿದ್ದಾರೆ.

ಈ ಯೋಜನೆಯಂತೆ ಸೂಪರ್‌ ಸ್ಪೆಷಾಲಿಟಿ ಶ್ರೇಣಿಯಲ್ಲಿರುವ ತಜ್ಞ  ಹಾಗೂ ನುರಿತ ವೈದ್ಯರನ್ನು ರಾಜ್ಯದ ಎಲ್ಲ ಜಿಲ್ಲಾ  ಮತ್ತು  ಜನರಲ್‌ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ನೇಮಿಸುವ ಕ್ರಮಗಳು ನಡೆಯುತ್ತಿವೆ. ಅದಕ್ಕಿರುವ ಅಗತ್ಯದ ಕಟ್ಟಡ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಸದ್ಯದಲ್ಲೇ ಏರ್ಪಡಿಸಲಾಗುವುದು. ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ಒದಗಿಸುವ ಸೌಲಭ್ಯಗಳನ್ನು ಕೂಡ ಒದಗಿಸಲಾಗುವುದು ಎಂದು ಸಚಿವೆ ಕೆ.ಕೆ. ಶೈಲಜಾ ವಿವರಿಸಿದರು.

ಎಂಡೋ ರೋಗಿಗಳಿಗೂ ಉತ್ತಮ ಚಿಕಿತ್ಸೆ ಲಭ್ಯ
ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳ ರೋಗಿಗಳು ಉನ್ನತ ಮಟ್ಟದ ಚಿಕಿತ್ಸೆಗಾಗಿ ಬೇರೆ ಜಿಲ್ಲೆಗಳ ವೈದ್ಯಕೀಯ ಆಸ್ಪತ್ರೆಗಳು ಅಥವಾ ಖಾಸಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ ಈಗಿದೆ. ಅಂತಹ ಚಿಕಿತ್ಸೆಗೆ ಭಾರೀ ಖರ್ಚು ತಗಲುತ್ತಿದೆ. ಬಡವರಿಗೆ ಇದು ಕೈಗೆಟುಕದ ವಿಷಯವಾಗಿದೆ. ಅದಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರಕಾರವು ಈ ಹೊಸ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್‌ ಸಂತ್ರಸ್ತರಿಗೆ ಉನ್ನತ ಮಟ್ಟದ ಚಿಕಿತ್ಸೆಗಾಗಿಯೂ ಇದು ಸಹಕಾರಿಯಾಗಲಿದೆ.

ಸರಕಾರದ ಈ ತೀರ್ಮಾನದಂತೆ ಕಾಸರಗೋಡು ಜನರಲ್‌ ಆಸ್ಪತ್ರೆ ಮತ್ತು ಕಾಂಞಂಗಾಡು ಚೆಮ್ಮಟಂವಯಲ್‌ನಲ್ಲಿರುವ ಕಾಸರಗೋಡು ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಶೀಘ್ರದಲ್ಲೇ ಸೂಪರ್‌ ಸ್ಪೆಷಾಲಿಟಿ ಚಿಕಿತ್ಸಾ ಸೌಕರ್ಯ ಲಭ್ಯವಾಗಲಿದೆ. ಈ ಮಧ್ಯೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಯೋಜನೆಯನ್ನು ವಿಸ್ತರಿಸುವ ಕ್ರಮಗಳೂ ನಡೆಯುತ್ತಿವೆ. ಜಿಲ್ಲೆ ಮತ್ತು ಜನರಲ್‌ ಆಸ್ಪತ್ರೆಗಳ ವಿಭಾಗಗಳಲ್ಲಿ ಸೂಪರ್‌ ಸ್ಪೆಷಾಲಿಟಿ ಅಗತ್ಯದ ವೈದ್ಯರನ್ನು ನೇಮಿಸಲು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಅರ್ಹತೆ ಹೊಂದಿರುವ ವೈದ್ಯರನ್ನು ಒಳಪಡಿಸಿ ವಿಶೇಷ ಕೇಡರ್‌ಗಳಿಗೂ ಈಗಾಗಲೇ ರೂಪು ನೀಡಲಾಗಿದೆ. ಈ ಮೂಲಕ ಎಲ್ಲಾ  ಜಿಲ್ಲೆಗಳ ಸೂಪರ್‌ ಸ್ಪೆಷಾಲಿಟಿ ವಿಭಾಗಗಳಿಗೆ ಅಗತ್ಯದ ವೈದ್ಯರನ್ನು ನೇಮಿಸಲು ಕೂಡ ನಿರ್ಧರಿಸಲಾಗಿದೆ.

ಜಿಲ್ಲೆಯ ರೋಗಿಗಳಿಗೆ ಪ್ರಯೋಜನ
ಕಾಸರಗೋಡು ಜಿಲ್ಲೆಯ ಜನರಲ್‌ ಆಸ್ಪತ್ರೆ ಮತ್ತು  ಜಿಲ್ಲಾ  ಆಸ್ಪತ್ರೆಗಳನ್ನು ಸೂಪರ್‌ ಸ್ಪೆಷಾಲಿಟಿಯಾಗಿ ಮೇಲ್ದರ್ಜೆಗೆ ಏರಿಸಿದ್ದಲ್ಲಿ ಜಿಲ್ಲೆಯ ರೋಗಿಗಳಿಗೆ ಹೆಚ್ಚು ಪ್ರಯೋಜನ ದೊರಕಲಿದೆ. ಇದೀಗ ಜಿಲ್ಲೆಯ ರೋಗಿಗಳು ಉನ್ನತ ಮಟ್ಟದ ಚಿಕಿತ್ಸೆಗೆ ಮಂಗಳೂರು, ಮಣಿಪಾಲ ಹಾಗೂ ಪರಿಯಾರಂ ವೈದ್ಯಕೀಯ ಆಸ್ಪತ್ರೆಗಳಿಗೆ ತೆರಳುತ್ತಿದ್ದು, ಕೇರಳ ಸರಕಾರದ ನೂತನ ಯೋಜನೆಯು ಜಾರಿಗೆ ಬಂದಲ್ಲಿ ಅತೀ ಹೆಚ್ಚು ಉಪಕಾರವಾಗಲಿದೆ. ಅಲ್ಲದೆ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಉತ್ತಮ ಚಿಕಿತ್ಸೆ ಕೂಡ ಲಭಿಸಲಿದೆ. ಈ ಮೂಲಕ ಕಾಸರಗೋಡು ಜಿಲ್ಲೆಯು ವೈದ್ಯಕೀಯ ರಂಗದಲ್ಲಿ  ಅಭಿವೃದ್ಧಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.