‘ಸಮಾಜ ಸುಧಾರಣೆಗೆ ಸ್ವಾಮೀಜಿ ಕೊಡುಗೆ ಅಪಾರ’

ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಅವರ 68ನೇ ಪುಣ್ಯಸ್ಮರಣೆ

Team Udayavani, Jun 22, 2019, 5:14 AM IST

21KSDE4

ಕಾಸರಗೋಡು: ಸಮಾಜ ಸುಧಾರಣೆ ಮತ್ತು ದೀನದಲಿತರ ಸಮಗ್ರ ಅಭಿವೃದ್ಧಿಗೆ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿಯವರು ನೀಡಿದ ಕೊಡುಗೆ ಅಪಾರವಾದುದು. ಹೆಣ್ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ಅವರು ಶಾಲೆಯನ್ನು ತೆರೆದು ಶಿಕ್ಷಣ ನೀಡಲು ಮುಂದಾಗಿರುವುದು ಅಂದಿನ ಕಾಲದಲ್ಲಿ ಕ್ರಾಂತಿಕಾರಿ ಬೆಳವಣಿಗೆಯಾಗಿತ್ತು. ಸಮಾಜದ ಸುಧಾರಣೆಗಾಗಿ ಸಂಘಟನೆ ಅಗತ್ಯವೆಂದು ಮನಗಂಡು ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು ಎಂದು ಧಾರ್ಮಿಕ ಚಿಂತಕ, ಮುಂದಾಳು ಗಣಪತಿ ಕೋಟೆಕಣಿ ಅವರು ಹೇಳಿದರು.

ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಆಶ್ರಯದಲ್ಲಿ ಕೋಟೆಕಣಿಯ ಶ್ರೀ ರಾಮನಾಥ ಭವನದಲ್ಲಿ ಆಯೋಜಿಸಿದ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಅವರ 68ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯ ಸ್ಥಾಪಕ ವಾಮನ ರಾವ್‌ ಬೇಕಲ್, ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್‌ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಕುಮಾರ್‌ ಅಣಂಗೂರು, ಸಂಘಟಕ ಜಗದೀಶ್‌ ಕೂಡು ಸತೀಶ್‌ ಕೂಡ್ಲು, ಮಾತನಾಡಿದರು. ದಿನೇಶ ಚಂದ್ರಗಿರಿ ಅಭ್ಯಾಗತರಾಗಿ ಭಾಗವಹಿಸಿ ದರು. ಕಾರ್ಯಕ್ರಮದಲ್ಲಿ ಕೇರಳ ಮತ್ತು ಕರ್ನಾಟಕ ರಾಜ್ಯ ಮಟ್ಟದಲ್ಲಿ ಬಾಕ್ಸಿಂಗ್‌, ಕಬಡ್ಡಿ ಸಹಿತ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಅಕ್ಷಯ ಕುಮಾರ್‌ ಎಚ್. ಮತ್ತು ಅವರ ಸಹೋದರಿ ರಾಜೇಶ್ವರಿ ಎಚ್. ಅವರನ್ನು ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಹರಿ ಮಹಿಳಾ ಭಜನ ಸಂಘ ಕೂಡ್ಲು ಮತ್ತು ಸಪ್ತಗಿರಿ ಮಹಿಳಾ ಭಜನ ಸಂಘ ಪಾರೆಕಟ್ಟೆ ಅವರಿಂದ ದಾಸಸಂಕೀರ್ತನೆ ನಡೆಯಿತು.

ಹರಿಶ್ಚಂದ್ರ ಸೂರ್ಲು ಸ್ವಾಗತಿಸಿದರು. ಸಂಚಾಲಕ ಗುರುಪ್ರಸಾದ್‌ ಕೋಟೆಕಣಿ ಪ್ರಾಸ್ತಾವಿಕ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು. ಕಾವ್ಯ ಕುಶಲ ವಂದಿಸಿದರು.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.