ಮುಳಿಗದ್ದೆ-ಚಕ್ಕರಗುಳಿ ರಸ್ತೆ ಸ್ಥಿತಿ ಶೋಚನೀಯ
Team Udayavani, Aug 2, 2017, 8:20 AM IST
ಪೈವಳಿಕೆ: ಪೈವಳಿಕೆ ಗ್ರಾ.ಪಂ.ವ್ಯಾಪ್ತಿಯ ಮುಳಿಗದ್ದೆಯಿಂದ ಚಕ್ಕರ ಗುಳಿಗೆ ಹೋಗುವ ರಸ್ತೆಯು ಕಳೆದ 5-6 ವರ್ಷಗಳಿಂದ ಹೊಂಡ ಗುಂಡಿಗಳಿಂದ ಕೂಡಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಸಮರ್ಪಕ ಚರಂಡಿಯ ವ್ಯವಸ್ಥೆಯೂ ಇಲ್ಲದೆ ಮಳೆನೀರು ಸಂಪೂರ್ಣ ರಸ್ತೆಯಲ್ಲೇ ಹರಿಯುತ್ತಿದೆ.
ಪೈವಳಿಕೆ ಗ್ರಾ.ಪಂ.ನ ಸಂಬಂಧಪಟ್ಟವರಲ್ಲಿ ಈ ರಸ್ತೆಯ ದುಃಸ್ಥಿತಿ ಬಗ್ಗೆ ಸಾರ್ವಜನಿಕರು ಹಲವು ಬಾರಿ ಹೇಳಿದರೂ, ಅವರು ಇತ್ತ ಗಮನಹರಿಸುವುದೇ ಇಲ್ಲ ಎಂಬ ಆರೋಪ ಕೇಳಿಬಂದಿದೆ. ಆದ್ದರಿಂದ ಪಂಚಾಯತ್ ಅಧ್ಯಕ್ಷೆಯ ಗಮನಕ್ಕೆ ತರಲು ಸಿದ್ಧತೆ ನಡೆಯುತ್ತಿದೆ. ಈ ರಸ್ತೆಯ ಆಸುಪಾಸುಗಳಲ್ಲಿ ಹೆಚ್ಚು ಕಡಿಮೆ 30 ರಿಂದ 40ರಷ್ಟು ಮನೆಗಳಿದ್ದು, ಶೋಚನೀಯ ರಸ್ತೆಯಿಂದಾಗಿ ಇಲ್ಲಿನ ನಿವಾಸಿಗಳು ಭಾರೀ ಸಂಕಷ್ಟಪಡುತ್ತಿದ್ದಾರೆ. ಪ್ರಸ್ತುತ ರಸ್ತೆಯಲ್ಲಿ ಶಾಲಾ ವಾಹನಗಳು ಕೂಡ ಸಂಚರಿಸಲು ಒಪ್ಪುತ್ತಿಲ್ಲ ಎಂಬಂತಾಗಿದೆ ಪರಿಸ್ಥಿತಿ. ಆದ್ದರಿಂದ ಮುಳಿಗದ್ದೆ – ಚಕ್ಕರಗುಳಿ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಂಚಾಯತ್‌ನ ಜನಪ್ರತಿನಿಧಿಗಳು ಇನ್ನಾದರೂ ಈ ನಿಟ್ಟಿನಲ್ಲಿ ಸ್ಪಂದಿಸದಿದ್ದಲ್ಲಿ ಮುಂದಿನ ದಿನ ಗಳಲ್ಲಿ ಭಾರತೀಯ ಜನತಾ ಯುವಮೋರ್ಚಾದ ಚಿಪ್ಪಾರುಪದವು ಸಮಿತಿ ನೇತೃತ್ವದಲ್ಲಿ ಹೋರಾಟಕ್ಕೆ ತಯಾರು ನಡೆಸಬೇಕಾದೀತು ಎಂದು ಪ್ರಕಟನೆಯಲ್ಲಿ ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.