ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿ
Team Udayavani, May 26, 2020, 8:31 AM IST
ಸಾಂದರ್ಭಿಕ ಚಿತ್ರ
ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಜಾನುವಾರಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿಯೊಂದನ್ನು ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದರೂ, ಇದೀಗ ಮತ್ತೂಂದು ಹುಲಿ ದಾಳಿ ಪ್ರಕರಣ ನಡೆದಿದೆ. ಪೊನ್ನಂಪೇಟೆ ಸಮೀಪದ ಚಿಕ್ಕಮುಂಡೂರು ಗ್ರಾಮದ ನಿವೃತ್ತ ಪೋಸ್ಟ್ ಮಾಸ್ಟರ್ ಕಳ್ಳಿಚಂಡ ಜಗದೀಶ್ (ರಘು) ಅವರಿಗೆ ಸೇರಿದ ಹಸುವನ್ನು ಸನಿಹದ ತೋಟದಲ್ಲಿ ಹುಲಿ ಕೊಂದು ಹಾಕಿದೆ. ಎರಡು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ಸನಿಹದ ತೋಟದಲ್ಲಿ ಕಳೇಬರ ಪತ್ತೆಯಾಗಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಜನತೆ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.