ನಿರುದ್ಯೋಗ ಸಮಸ್ಯೆ ಯುವಕ್ರಾಂತಿಗೆ ಪ್ರಚೋದನೆ: ನಾಣಯ್ಯ ಆತಂಕ

Team Udayavani, Mar 22, 2018, 10:20 AM IST

unemployment is main inspiration for youth revolution

ಮಡಿಕೇರಿ: ಪ್ರಸ್ತುತ ಸಮಾಜ ಸಾಕಷ್ಟು ಸುಶಿಕ್ಷಿತವಾಗಿದ್ದರೂ ನಿರುದ್ಯೋಗ ಸಮಸ್ಯೆ ಎಲ್ಲೆಡೆ ಕಾಡುತ್ತಿದೆ, ಇದೇ ಸ್ಥಿತಿ ಮುಂದುವರೆದರೆ ಭವಿಷ್ಯದಲ್ಲಿ ಭಾರತದಲ್ಲಿ ಕೂಡ ಯುವಕ್ರಾಂತಿ ಆದರೂ ಆಗಬಹುದು ಎಂದು ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಂಗಳವಾರ ನಡೆದ ವಾರ್ಷಿಕೋತ್ಸವ ಹಾಗೂ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದ‌ರು. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ 50ರಷ್ಟು ಯುವ ಜನಾಂಗದವರಿದ್ದು, ಅವರಲ್ಲಿ ಬಹುತೇಕರು ತಾವು ಪಡೆದ ವಿದ್ಯೆಗೆ ಸೂಕ್ತ ಉದ್ಯೋಗವಿಲ್ಲದೆ ನಿರುದ್ಯೋಗದಿಂದ ಬಳಲುತ್ತಿದ್ದಾರೆ. ನಮ್ಮ ನೆರೆಹೊರೆಯ ರಾಷ್ಟ್ರಗಳಲ್ಲಿ ಆಗುತ್ತಿರುವ ರಕ್ತಕ್ರಾಂತಿಯನ್ನು ಗಮನಿಸಿದರೆ, ಪ್ರಸ್ತುತ ಇರುವ ನಿರುದ್ಯೋಗ ಸಮಸ್ಯೆ ಹೀಗೆ ಮುಂದುವರೆದರೆ, ಭಾರತದಲ್ಲೂ ಕ್ರಾಂತಿಯಾಗುವ ಸಂಭವವಿದೆ ಎಂದು ಎಚ್ಚರಿಸಿದರು.

ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತಂದು ಯುವ ಜನಾಂಗವನ್ನು ಉದ್ಯೋಗಶೀಲರನ್ನಾಗಿಸುವ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ. ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳಲ್ಲಿ ಜ್ಞಾನ ವೃದ್ದಿಸಬೇಕು, ಕೌಶಲ್ಯ ಹೆಚ್ಚಿಸಬೇಕು ಹಾಗೂ ಉದ್ಯೋಗ ಕಲ್ಪಿಸಬೇಕು. ಆಗ ಮಾತ್ರ ನಮ್ಮ ಯುವ ಜನಾಂಗ ಇಂದು ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಂಡಂತಾಗುತ್ತದೆ ಎಂದು ಎಂ.ಸಿ. ನಾಣಯ್ಯ ತಿಳಿಸಿದರು.

ಇಂದು ಶಿಕ್ಷಣದ ಗುಣಮಟ್ಟ ಗಮನಾರ್ಹವಾಗಿರದ ಕಾರಣ ಪದವೀಧರರಲ್ಲಿ ಜ್ಞಾನ, ಕೌಶಲ್ಯದ ಕೊರತೆ ಎದ್ದು ಕಾಣುತ್ತಿದ್ದು, ಪರಿಣಾಮವಾಗಿ ಅವರು ಸೂಕ್ತ ಉದ್ಯೋಗವನ್ನು ಸಮರ್ಪಕವಾಗಿ ನಿಭಾಯಿಸಲು ಅಸಕ್ತರಾಗಿದ್ದಾರೆ. ಇದು ನಿರುದ್ಯೋಗ ಸಮಸ್ಯೆಯಾಗಿ ಮಾರ್ಪಟ್ಟಿದೆ. ಈ ನಿಟ್ಟಿನಲ್ಲಿ, ಸರ್ಕಾರಿ ಕಾಲೇಜುಗಳು, ವಿಶ್ವವಿದ್ಯಾನಿಲಯಗಳ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಅಗತ್ಯವಿದ್ದು, ಅಗತ್ಯ ಕೊಠಡಿ ಸೌಕರ್ಯ, ಅಗತ್ಯ ಸಲಕರಣೆಗಳು, ನುರಿತ ಕ್ಷೇತ್ರ ತಜ್ಞರು, ಪರಿಣಿತರಿಂದ ಬೋಧನೆ, ಮುಂತಾದವನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಿ ಅವುಗಳನ್ನು ಒದಗಿಸುವ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಗುರುತರ ಬದಲಾವಣೆ ತರಬೇಕಿದೆ ಎಂದರು.

ವಿದ್ಯಾರ್ಥಿಗಳಿಗೆ ರಾಜಕೀಯ ಬೇಡ 
ರಾಜಕೀಯ ಪಕ್ಷಗಳು ಹಿತಾಸಕ್ತಿಗಾಗಿ ವಿದ್ಯಾರ್ಥಿ ಗಳನ್ನು ಪ್ರತಿಭಟನೆಗೆ ಬಳಸಿಕೊಂಡು ಅವರ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಬೆಳವಣಿಗೆ ನಡೆಯುತ್ತಿದ್ದು, ಅದನ್ನು ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗಮನಿಸಿ ಎಚ್ಚೆತ್ತುಕೊಳ್ಳಬೇಕು ಎಂದು ನಾಣಯ್ಯ ಅವರು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳಿಗೆ ಸ್ಥಳೀಯ, ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ರಾಜಕೀಯ ಬೆಳವಣಿಗೆಯ ಬಗ್ಗೆ ಜ್ಞಾನ ಇರಬೇಕಷ್ಟೇ ಹೊರತು ಅದರಲ್ಲಿ ತೊಡಗಿಸಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳಬಾರದು. ಅವರವರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವರವರೇ ಶಿಲ್ಪಿಗಳು ಎಂಬ ವಾಸ್ತವವನ್ನು ಎಲ್ಲರೂ ಮನಗಾಣಬೇಕೆಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಶಿಕ್ಷಣವೆಂಬುದು ತಮ್ಮ ತಮ್ಮಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವ ಒಂದು ವ್ಯವಸ್ಥೆಯಷ್ಟೇ, ಇಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ವಿವಿಧ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸದ ಹೊರತು ಪರಿಣಿತರಾಗುವುದು ಸಾಧ್ಯವಿಲ್ಲ ಎಂದು ನಾಣಯ್ಯ ತಿಳಿಸಿದರು.

ಮೊಬೈಲ್‌ ಬಳಸುವಾಗ ಎಚ್ಚರ
ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ವ್ಯಯಿಸುತ್ತಿರುವುದು ಹಾಗೂ ಅಪರಿಚಿತರೊಂದಿಗೆ ಅನಗತ್ಯ ವಿಚಾರಗಳಲ್ಲಿ ಸಂಭಾಷಣೆಯಲ್ಲಿ ತೊಡಗುವುದರಿಂದ ಕಲಿಕಾ ಸಮಯದಲ್ಲಿ ತಿಳಿದುಕೊಳ್ಳಲೇಬೇಕಿರುವ ವಿಚಾರಗಳಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದು, ಈ ನಿಟ್ಟಿನಲ್ಲಿ ಸ್ಮಾರ್ಟ್‌ಫೋನ್‌ ಗಳನ್ನು ಎಷ್ಟು ಅಗತ್ಯವೋ ಅಷ್ಟಕ್ಕೇ ಸೀಮಿತಗೊಳಿಸಿದರೆ ಅದು ವಿದ್ಯಾರ್ಥಿ ಜೀವನಕ್ಕೂ ಅನುಕೂಲವಾಗುತ್ತದೆ ಎಂದು ನಾಣಯ್ಯ ಹೇಳಿದರು. ಮೊಬೈಲ್‌ ಫೋನಿನಿಂದ ಎಷ್ಟು ಒಳ್ಳೆಯದಿದೆಯೋ ಅಷ್ಟೇ ಕೆಡುಕೂ ಇದೆ. ಅತಿಯಾದ ಅವಲಂಬನೆ ವಿದ್ಯಾರ್ಥಿ ಜೀವನಕ್ಕೆ ಮಾರಕವಾಗಿ ಪರಿಣಮಿಸಬಹುದು ಎಂದು ಕಿವಿಮಾತು ಹೇಳಿದರು.
ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ ಅವರು ಕಾಲೇಜಿನ ವಾರ್ಷಿಕ ವರದಿ ಮಂಡಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ  ಪ್ರೊ|  ಬಿ ಎಸ್‌ ನಾಗೇಂದ್ರ ಪ್ರಕಾಶ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಲೇಜಿನ ಸರ್ವತೋ ಮುಖ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಈ ಸಂಬಂಧ ಎಲ್ಲರಿಂದಲೂ ಉತ್ತಮ ಸಹಕಾರ ಅಗತ್ಯವಿದೆ ಎಂದರು.

ಹಿಂದಿ ವಿಭಾಗದ ಮುಖ್ಯಸ್ಥ‌ ಡಾ| ಶ್ರೀಧರ ಹೆಗಡೆ, ವಿದ್ಯಾರ್ಥಿ ಮುಖಂಡರಾದ ಲೋಹಿತ್‌ ಎಂ. ಆರ್‌, ಅಧ್ಯಕ್ಷ, ಜನನಿ ಎಂ.ಡಿ, ಉಪಾಧ್ಯಕ್ಷೆ, ತೃಪ್ತಿ ಕೆ ಪಿ, ಜಂಟಿ ಕಾರ್ಯದರ್ಶಿ, ಸ್ವಪ್ನ ಎಸ್‌ ಆರ್‌, ಕ್ರೀಡಾ ಕಾರ್ಯದರ್ಶಿ, ಕಿರಣ್‌ ಬಿ ಐ, ಕ್ರೀಡಾ ಕಾರ್ಯದರ್ಶಿ, ಅರುಣ್‌ ಕುಮಾರ್‌ ಪಿ ಎಸ್‌, ಸಾಂಸ್ಕೃತಿಕ ಕಾರ್ಯದರ್ಶಿ, ನೀಲಮ್ಮ ಬಿ ಎಂ, ಸಾಂಸ್ಕೃತಿಕ ಕಾರ್ಯದರ್ಶಿ, ಅಹಲ್ಯ ಅಪ್ಪಚ್ಚು ಡಿ ಎ, ಕಾರ್ಯದರ್ಶಿ, ಸುಭಾಶ್‌ ಸಿ ಎಸ್‌, ಜಂಟಿ ಕಾರ್ಯದರ್ಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೋಧಕ ಬೋಧಕೇತರ ಸಿಬಂದಿ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.