ಕುಂಬಳೆಯಲ್ಲಿ ಕನ್ನಡಿಗರೊಂದಿಗೆ ಸಂವಾದ ಐಕ್ಯರಂಗ ಎಡರಂಗ ಅಭ್ಯರ್ಥಿಗಳು ಗೈರು
Team Udayavani, Oct 13, 2019, 5:32 AM IST
ಕುಂಬಳೆ : ಕನ್ನಡ ಹೋರಾಟ ಸಮಿತಿ ಕಾಸರಗೋಡು ಇದರ ವತಿಯಿಂದ ಕುಂಬಳೆಯ ಮಾಧವ ಪೈ ಸಭಾಭವನದಲ್ಲಿ ಜರಗಿದ ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಪ್ರಯುಕ್ತ ಕನ್ನಡಿಗರೊಂದಿಗೆ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಮುಖ ರಾಜಕೀಯ ಪಕ್ಷಗಳಾದ ಐಕ್ಯರಂಗ ಮತ್ತು ಎಡರಂಗಗಳ ಅಭ್ಯರ್ಥಿಗಳು ಮತ್ತು ಐವರು ಸ್ವತಂತ್ರ ಅಭ್ಯರ್ಥಿಗಳು ಗೈರು ಹಾಜರಾದರು.
ಭಾಷಾ ಅಲ್ಪಸಂಖ್ಯಾಕ ಕನ್ನಡಿಗರ ಸಮಸ್ಯೆ ಮುಂದಿಡಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಕುಂಟಾರು ರವೀಶ ತಂತ್ರಿಯವರ ಮುಖ್ಯ ಚುನಾವಣಾ ಏಜಂಟ್ ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ ಮತ್ತು ಪಕ್ಷೇತರ ಅಭ್ಯರ್ಥಿ ಜೋನ್ ಕ್ರಾಸ್ತಾ ಭಾಗವಹಿಸಿ ಮಾತನಾಡಿ ತಾವು ಗೆದ್ದಲ್ಲಿ ಕಾಸರಗೋಡಿನ ಕನ್ನಡಿಗರ ಜ್ವಲಂತ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಭರವಸೆ ನೀಡಿದರು.
ಕರ್ನಾಟಕ ಸಮಿತಿಯ ಅದ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯರು ಅಧ್ಯಕ್ಷತೆ ವಹಿಸಿದರು.ಕನ್ನಡ ಸಾಹಿತ್ಯ ಪರಿಷತ್ ಗಡಿನಾಡ ಘಟಕಾಧ್ಯಕ್ಷ ಎಸ್‌ವಿ ಭಟ್,ನಿವೃತ್ತ ಅಧ್ಯಾಪಕ ನಾರಾಯಣ ಗಟ್ಟಿ ಕುಂಬಳೆ ಉಪಸ್ಥಿತರಿದ್ದರು.
ಕನ್ನಡ ಹೋರಾಟ ಸಮಿತಿಯ ಕಾರ್ಯದರ್ಶಿ ಕೆ.ಭಾಸ್ಕರ ಕಾಸರಗೋಡು ಅವರು ಸ್ವಾಗತಿಸಿದರು.ಸತೀಶ್ ಕೂಡ್ಲು ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.