ವಂದೇ ಭಾರತ್ ರೈಲಿಗೆ ಸಂಪರ್ಕಿಸುವಂತೆ ಕೊಲ್ಲೂರಿಗೆ ಬಸ್ ಸೇವೆ ಆರಂಭಿಸಲು ಆಗ್ರಹ
Team Udayavani, Apr 30, 2023, 7:20 AM IST
ಕಾಸರಗೋಡು: ಕಾಸರಗೋಡು ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣಿಕರಿಗಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೇರವಾಗಿ ತೆರಳಲು ಮತ್ತು ವಾಪಸಾಗಲು ಕೇರಳ ಸರಕಾರಿ ಬಸ್ ಸಂಚಾರವನ್ನು ಆರಂಭಿಸಬೇಕೆಂದು ಕುಂಬಳೆ ರೈಲ್ವೇ ಪ್ಯಾಸೆಂಜರ್ ಅಸೋಸಿಯೇಶನ್ ಆಗ್ರಹಿಸಿದೆ.
ಬೆಳಗ್ಗೆ 9 ಗಂಟೆಗೆ ಕೊಲ್ಲೂರಿನಿಂದ ಹೊರಟು ಮಧ್ಯಾಹ್ನ 1.30ಕ್ಕೆ ಕಾಸರಗೋಡು ರೈಲು ನಿಲ್ದಾಣಕ್ಕೆ ತಲುಪುವ ರೀತಿಯಲ್ಲಿ ಹವಾನಿಯಂತ್ರಿತ (ಎಸಿ) ಬಸ್ ಆರಂಭಿಸಿದರೆ ತಿರುವನಂತಪುರ ವರೆಗಿನ ವಂದೇ ಭಾರತ್ ರೈಲು ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ಅಲ್ಲದೆ ಅಪರಾಹ್ನ ಹೊರಡುವ ರೈಲಿನಲ್ಲಿ ಹಿಂದಿರುಗಿ ಪ್ರಯಾಣಿಸಲು ಸಾಧ್ಯವಿದೆ.
ಅಲ್ಲದೆ ಈ ಬಸ್ ಮಧ್ಯಾಹ್ನ 1.50ಕ್ಕೆ ಕಾಸರಗೋಡಿನಿಂದ ಹೊರಟು ಸಂಜೆ 6 ಗಂಟೆಗೆ ಕೊಲ್ಲೂರಿಗೆ ತಲುಪುವಂತೆ ವ್ಯವಸ್ಥೆ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಂಪರ್ಕಿಸುವ ಬಸ್‌ನಿಂದ ಕುಂಬಳೆ, ಉಪ್ಪಳ, ಮಂಜೇಶ್ವರ, ಮಂಗಳೂರು, ಉಡುಪಿ ಭಾಗದ ಸಂಪರ್ಕವೂ ಸುಲಭವಾಗಲಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಅವರಿಗೆ ಅಸೋಸಿಯೇಶನ್‌ನ ಪದಾ ಧಿಕಾರಿಗಳು ಮನವಿ ನೀಡಿ ಆಗ್ರಹಿಸಿದ್ದಾರೆ. ಈ ಸಂದರ್ಭ ಸಂಘಟನೆಯ ಅಧ್ಯಕ್ಷ ನಿಸಾರ್ ಪೆರುವಾಡ್, ಅಶ್ರಫ್ ಸೇರಿದಂತೆ ಇನ್ನಿತರರು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.