ವಿಷು: ಪಟಾಕಿ ವ್ಯಾಪಾರ ಬಿರುಸು
Team Udayavani, Apr 14, 2018, 9:20 AM IST
ಕಾಸರಗೋಡು: ಸಮೃದ್ಧಿಯ ಹಬ್ಬ ವಿಷು ಸ್ವಾಗತಕ್ಕೆ ಪಟಾಕಿ ವ್ಯಾಪಾರ ಸಕ್ರಿಯಗೊಂಡಿದ್ದು, ನಗರದ ಬಹುತೇಕ ಅಂಗಡಿಗಳಲ್ಲಿ ಪಟಾಕಿ ಖರೀದಿಗೆ ಸಾಲುಗಟ್ಟಿ ನಿಂತಿದ್ದಾರೆ. ಕೃಷಿಕರ ಉತ್ಸವ ಎಂದೂ ಕರೆಯಲ್ಪಡುವ ವಿಷು ಹಬ್ಬಕ್ಕೆ ಮೆರುಗು ನೀಡಲು ಎಪ್ರಿಲ್ ತಿಂಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಿದ್ದರೂ ಪಟಾಕಿ ವ್ಯಾಪಾರಕ್ಕೆ ಯಾವುದೇ ಅಡ್ಡಿಯಾಗಿಲ್ಲ.
ಶಬ್ದಕ್ಕಿಂತ ಬೆಳಕು ನೀಡುವ ಪಟಾಕಿಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ. ತಮಿಳುನಾಡಿನ ಶಿವಕಾಶಿಯಿಂದ ಕಾಸರಗೋಡು ನಗರದ ಅಂಗಡಿಗಳಿಗೆ ಪಟಾಕಿ ಬಂದಿದ್ದು, ಪರಂಪರಾಗತ ಪಟಾಕಿ ವ್ಯಾಪಾರಿಗಳಲ್ಲದೆ ವಿಷುವಿಗಾಗಿ ಪ್ರತ್ಯೇಕ ಅನುಮತಿ ಪಡೆದು ಪಟಾಕಿ ವ್ಯಾಪಾರ ನಡೆಯುತ್ತಿದೆ. ಅಪಾಯಕಾರಿಯಲ್ಲದ ಪಟಾಕಿಗಳಿಗೆ ಹೆಚ್ಚಿನ ಬೇಡಿಕೆಯಿದೆ. ಮಕ್ಕಳನ್ನು ಆಕರ್ಷಿಸುವ ಪಟಾಕಿಗಳಿಗೆ 10 ರೂಪಾಯಿಯಿಂದ 80 ರೂಪಾಯಿ ತನಕವಿದೆ. ವೈವಿಧ್ಯಮಯ ಚೈನೀಸ್ ಪಟಾಕಿಗಳು ಹೆಚ್ಚಾಗಿ ಮಾರಾಟವಾಗುತ್ತಿವೆ. ಕಡಿಮೆ ಅಪಾಯಕಾರಿಯಾಗಿದ್ದು, ಪಟಾಕಿಗೆ ಕಡಿಮೆ ಬೆಲೆಯೂ ಹೆಚ್ಚು ವ್ಯಾಪಾರವಾಗಲು ಕಾರಣವಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಚೈನೀಸ್ ಪಟಾಕಿ ಮಾರುಕಟ್ಟೆಯಲ್ಲಿ ನೆಲೆಯೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.