ಹೊಸ ಬಸ್‌ ನಿಲ್ದಾಣದ ತ್ಯಾಜ್ಯ ಕೇಂದ್ರವಾದ ಬಾವಿ ಮುಚ್ಚುಗಡೆ


Team Udayavani, Nov 21, 2018, 3:50 AM IST

baavi-20-11.jpg

ಕಾಸರಗೋಡು: ಹೊಟೇಲ್‌ ಸಹಿತ ವಿವಿಧೆಡೆಗಳಿಂದ ತ್ಯಾಜ್ಯ ತಂದು ತುಂಬಿಸುವ ಕೇಂದ್ರವಾಗಿ ಮಾರ್ಪಟ್ಟಿದ್ದ ನಗರದ ಹೊಸ ಬಸ್‌ ನಿಲ್ದಾಣದಲ್ಲಿದ್ದ ಬಾವಿಯನ್ನು ಮುಚ್ಚಲಾಯಿತು. ಜಿಲ್ಲಾಧಿಕಾರಿ ಡಾ|ಡಿ.ಸಜಿತ್‌ ಬಾಬು ಅವರು ಕಾಸರಗೋಡು ನಗರಸಭಾ ಕಾರ್ಯದರ್ಶಿಗೆ ಬಾವಿ ಮುಚ್ಚುವಂತೆ ನಿರ್ದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾತ್ರಿ ಹೊತ್ತು ಬಾವಿಯಲ್ಲಿ ತುಂಬಿದ್ದ ತ್ಯಾಜ್ಯಕ್ಕೆ ಮಣ್ಣು ತುಂಬಿ ನೆಲ ಸಮತಟ್ಟು ಮಾಡಲಾಯಿತು. ಸಾರ್ವಜನಿಕ ದೂರು ಪರಿಹಾರ ಅವಲೋಕನಾ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಾ|ಸಜಿತ್‌ಬಾಬು ನಗರಸಭಾ ಕಾರ್ಯದರ್ಶಿಗೆ ಬಾವಿ ಮುಚ್ಚುವಂತೆ ನಿರ್ದೇಶ ನೀಡಿದ್ದರು. ಈ ನಿರ್ದೇಶ ಪ್ರಕಾರ ಬಾವಿ ಮುಚ್ಚಲಾಯಿತು.

ರಸ್ತೆ ಬದಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ತಂದು ಹಾಕುತ್ತಿರುವ ದೃಶ್ಯಗಳನ್ನು ಮೊಬೈಲ್‌ಗ‌ಳಲ್ಲಿ ಚಿತ್ರೀಕರಿಸಿ ಅದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಜಿಲ್ಲಾ ಆಡಳಿತೆ ಹೊಸದಾಗಿ ವಾಟ್ಸಪ್‌ ಸೌಕರ್ಯವನ್ನು ಏರ್ಪಡಿಸಿದೆ. ಅದು ಜಾರಿಗೊಂಡ ಬಳಿಕ 45 ದೂರುಗಳು ಲಭಿಸಿವೆ. ಈ ಪೈಕಿ 25 ದೂರುಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ತ್ಯಾಜ್ಯ ಸಂಸ್ಕರಣೆ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಲು ಪಂಚಾಯತ್‌ ಮತ್ತು ನಗರಸಭಾ ಮಟ್ಟಗಳಲ್ಲಿ ತುರ್ತು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ನಿರ್ದೇಶ ನೀಡಿದ್ದಾರೆ.

ಕಾಸರಗೋಡು ನಗರಸಭೆ, ಮಂಜೇಶ್ವರ, ಮಂಗಲ್ಪಾಡಿ, ಮೊಗ್ರಾಲ್‌ ಪುತ್ತೂರು, ಕುಂಬಳೆ ಮತ್ತು ಚೆಂಗಳ ಗ್ರಾಮ ಪಂಚಾಯತ್‌ಗಳು ಈ ವಿಷಯದಲ್ಲಿ ಇನ್ನಷ್ಟು ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ತ್ಯಾಜ್ಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದಲೂ ದೂರು ಸ್ವೀಕರಿಸಲಾಗುವುದು. ನಗರದಲ್ಲಿ ಹೆಚ್ಚು ತ್ಯಾಜ್ಯ ತಂದು ಉಪೇಕ್ಷಿಸುವ ಸ್ಥಳಗಳಲ್ಲಿ ಸಿ.ಸಿ. ಟಿವಿ ಕ್ಯಾಮರಾಗಳನ್ನು ಸ್ಥಾಪಿಸುವ ಮೂಲಕ ತ್ಯಾಜ್ಯ ತಂದು ಹಾಕುವವರ ಗುರುತು ಹಿಡಿದು ಕಠಿಣ ಕ್ರಮಕೈಗೊಳ್ಳುವಂತೆಯೂ ನಗರಸಭಾ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ನಿರ್ದೇಶ ನೀಡಿದ್ದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.