“ಯಕ್ಷಗಾನದ ಮೂಲ ಪರಂಪರೆಗೆ ಧಕ್ಕೆಯಾಗದಿರಲಿ’
Team Udayavani, Feb 28, 2017, 4:05 PM IST
ಕಾಸರಗೋಡು: ಯಕ್ಷಗಾನ ಕ್ಷೇತ್ರದ ಮಹಾನ್ ಸಾಧಕರಿಂದ ಅತ್ಯಂತ ಹೆಚ್ಚು ಪ್ರಸಿದ್ಧವಾಗಿರುವ ಪೆರ್ಲ, ಇದೀಗ ತೆಂಕುತಿಟ್ಟಿನ ಪ್ರಸ್ತುತ ಸಂದರ್ಭದ ಏಕೈಕ ನಾಟ್ಯ ತರಬೇತಿ ಕೇಂದ್ರವಾಗಿ ಗುರುತಿಸಲ್ಪಟ್ಟಿರುವುದು ಈ ಮಣ್ಣಿನ ವಿಶೇಷತೆ. ಸಂಕಷ್ಟಮಯ ಸವಾಲುಗಳನ್ನು ಎದುರಿಸಿಯೂ ಪ್ರಬುದ್ಧ ಕೇಂದ್ರವಾಗಿ ಬೆಳೆಯುತ್ತಿರುವ ಪಡ್ರೆ ಚಂದು ಸ್ಮಾರಕ ನಾಟ್ಯ ಕೇಂದ್ರ ಯಕ್ಷ ಗಾನ ಕ್ಷೇತ್ರವನ್ನು ಉಳಿಸಿ ಬೆಳೆಸುವಲ್ಲಿ ಅಪೂರ್ವ ಕೊಡುಗೆಗಳನ್ನು ನೀಡುತ್ತಿ ರುವುದಕ್ಕೆ ಕಲಾಪೋಷಕರ, ಪ್ರೇಮಿ ಗಳ ಸಹೃದಯತೆಯ ಇನ್ನಷ್ಟು ಚೈತನ್ಯ ನೀಡ ಬೇಕಾಗಿದೆ ಎಂದು ಹಿರಿಯ ಯಕ್ಷಗಾನ ಪ್ರಸಾಧನ ಕಲಾವಿದ ದೇವಕಾನ ಕೃಷ್ಣ ಭಟ್ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಹನ್ನೆರಡನೇ ವರ್ಷದ ವಾರ್ಷಿ ಕೋತ್ಸವವದ ಅಂಗವಾಗಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಜನಸಾಮಾನ್ಯರು ಕಟ್ಟಿ ಬೆಳೆಸಿದ ಸಂಸ್ಕೃತಿ ದ್ಯೋತಕವಾದ ಯಕ್ಷಗಾನ ಇಂದು ಸಮೃದ್ಧವಾಗಿ ಬೆಳೆಯುತ್ತಿದೆ.
ಗಡಿಗಳಾಚೆಗೂ ವಿಸ್ತರಿಸಿ ವಿದೇಶಿಯರನ್ನೂ ಆಕರ್ಷಿಸಿದೆ. ಆದರೆ ಮೂಲ ಪರಂಪರೆಗಳಿಗೆ ಧಕ್ಕೆಯಾಗದಂತೆ ನಿರ್ವಹಿಸುವ ಹೊಣೆ ಕಲಾವಿದರ ಮೇಲಿನ ಜವಾಬ್ದಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸಮರ್ಥ ಗುರುಗಳಾದ ಸಬ್ಬಣಕೋಡಿ ರಾಮ ಭಟ್ ಅವರಂತವರ ಸ್ಪಷ್ಟ ನಿರ್ದೇಶನಗಳು ಕಲೆಯ ವಿಸ್ತರಣೆಗೆ ಅನುಕೂಲಕರವಾಗಿದೆಯೆಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಶ್ರೀಧರ ಎಚ್. ಜಿ. ಮಾತನಾಡಿ ಕರಾವಳಿಯಾದ್ಯಂತ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸಿ ಜನಜೀವನವನ್ನು ಪ್ರಭಾವಶಾಲಿಯಾಗಿ ಸಿದ ಏಕೈಕ ಕಲೆ ಯಕ್ಷಗಾನ. ಇಲ್ಲಿಯ ಜನರ ಜೀವನದ ಒಂದು ಭಾಗವೇ ಆಗಿದ್ದ ಕಾಲವಿತ್ತೆಂದು ನೆನಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.