‘ಶೂರ್ಪನಖಾ-ಗುರುನೀತಿ’ ಯಕ್ಷಗಾನ ತಾಳಮದ್ದಳೆ
Team Udayavani, Aug 24, 2018, 1:30 AM IST
ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶರ 58ನೇ ಚಾತುರ್ಮಾಸದ ಅಂಗವಾಗಿ ಶ್ರೀ ಮಠದ ಸಭಾಂಗಣದಲ್ಲಿ ಸಾಂಸ್ಕೃತಿಕ ಸಂಜೆ ‘ಶೂರ್ಪನಖಾ- ಗುರುನೀತಿ’ ಪ್ರಸಂಗಗಳ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ ಸತ್ಯನಾರಾಯಣ ಪುಣಿಂಚತ್ತಾಯ ಪೆರ್ಲ, ರಮೇಶ್ ಭಟ್ ಪುತ್ತೂರು, ಲಕ್ಷ್ಮೀಶ ಅಮ್ಮಣ್ಣಾಯ, ಜಗನ್ನಿವಾಸ ರಾವ್, ಉದಯ ಕುಂಬಾರ್ ಸಹಕರಿಸಿದರು. ಮುಮ್ಮೇಳದಲ್ಲಿ ಡಾ| ರಮಾನಂದ ಬನಾರಿ (ಶ್ರೀರಾಮ), ವಿದ್ವಾನ್.ಹಿರಣ್ಯ ವೆಂಕಟೇಶ್ವರ ಭಟ್ (ಶೂರ್ಪನಖೀ), ಪೆರ್ಮುದೆ ಜಯಪ್ರಕಾಶ ಶೆಟ್ಟಿ (ಲಕ್ಷ್ಮಣ), ಡಾ| ಶ್ರೀಪತಿ ಕಲ್ಲೂರಾಯ ಕೊಣಾಜೆ (ಸೀತೆ), ನಾ. ಕಾರಂತ ಪೆರಾಜೆ (ಕೃಪಾಚಾರ್ಯ), ಕೆಯ್ಯೂರು ನಾರಾಯಣ ಭಟ್ (ಕೌರವ), ಡಾ| ಗೋಪಾಲಕೃಷ್ಣ ಭಟ್ ಎರುಗಲ್ಲು (ಕರ್ಣ), ರಾಜೇಂದ್ರ ಕಲ್ಲೂರಾಯ ಎಡನೀರು (ಅಶ್ವತ್ಥಾಮ) ಪಾತ್ರಗಳನ್ನು ನಿರ್ವಹಿಸುವ ಮೂಲಕ ಗಮನ ಸೆಳೆದರು.
ಬುಧವಾರ ಬೆಳಗ್ಗೆ ಚಾತುರ್ಮಾಸದ ಪುತ್ತೂರು ಅಭಿಮಾನಿ ಶಿಷ್ಯರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಡನೀರು ಶ್ರೀ ಮಠಕ್ಕೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ತೆಂಗಿನಕಾಯಿ ಒಡೆದು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.
ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ, ಬಲರಾಮ ಆಚಾರ್ಯ, ಶ್ರೀಧರ ಬೈಪಡಿತ್ತಾಯ, ವೆಂಕಟೇಶಮೂರ್ತಿ, ಕೃಷ್ಣ ಪ್ರಸಾದ ಕೆದಿಲಾಯ, ಪ್ರೊ| ವೇದವ್ಯಾಸ ರಾಮಕುಂಜ, ಕೃಷ್ಣ ಬೈಪಡಿತ್ತಾಯ, ರವಿ ಹೆಬ್ಟಾರ್ ಮೊದಲಾದವರು ಉಪಸ್ಥಿತರಿದ್ದರು. ಭಾಸ್ಕರ ಬಾರ್ಯ ಸ್ವಾಗತಿಸಿ ವಂದಿಸಿದರು. ಶ್ರೀ ಎಡನೀರು ಕ್ಷೇತ್ರದಲ್ಲಿ ಬಳಿಕ ಹೊರೆಕಾಣಿಕೆ ಮೆರವಣಿಗೆಯನ್ನು ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು. ಸಾಂಸ್ಕೃತಿಕ ಸಂಜೆಯ ಅಂಗವಾಗಿ ರಾಮಕೃಷ್ಣ ಕಾಟುಕುಕ್ಕೆ ತಂಡದವರಿಂದ ದಾಸಸಂಕೀರ್ತನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.