ದೇಶದೆಲ್ಲೆಡೆಯಿಂದ ದ.ಕ.ಜಿಲ್ಲೆಗೆ ಬರಲಿದ್ದಾರೆ 25,000 ಮಂದಿ:ತಾಲೂಕು ಮಟ್ಟದಲ್ಲಿ ಕ್ವಾರಂಟೈನ್

ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Team Udayavani, May 13, 2020, 6:20 AM IST

ದೇಶದೆಲ್ಲೆಡೆಯಿಂದ ದ.ಕ.ಜಿಲ್ಲೆಗೆ ಬರಲಿದ್ದಾರೆ 25,000 ಮಂದಿ:ತಾಲೂಕು ಮಟ್ಟದಲ್ಲಿ ಕ್ವಾರಂಟೈನ್

ಮಂಗಳೂರು: ಮುಂಬಯಿ ಸೇರಿದಂತೆ ವಿವಿಧ ರಾಜ್ಯಗಳಿಂದ ಸುಮಾರು 25 ಸಾವಿರ ಮಂದಿ ಕರಾವಳಿಯವರು ಆದ್ಯತೆ ಆಧಾರದಲ್ಲಿ ದ.ಕ. ಜಿಲ್ಲೆಗೆ ವಾಪಸಾಗಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದು, ಅವರೆಲ್ಲ 14 ದಿನಗಳವರೆಗೆ ಜಿಲ್ಲಾಡಳಿತದ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕಡ್ಡಾಯವಾಗಿ ಇರಬೇಕಿದೆ.

ಇದಕ್ಕಾಗಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಕ್ವಾರಂಟೈನ್‌ ವ್ಯವಸ್ಥೆಯನ್ನು ಆಯಾ ತಾಲೂಕುಗಳಲ್ಲಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಡಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸೂಚಿಸಿದರು.

ತಾಲೂಕುಗಳಲ್ಲಿ ಲಭ್ಯವಿರುವ ಹಾಸ್ಟೆಲ್‌, ಹೊಟೇಲ್‌, ಕೊಠಡಿ ವ್ಯವಸ್ಥೆಗಳ ಬಗ್ಗೆ ಸ್ಥಳೀಯ ತಹಶೀಲ್ದಾರ್‌, ಆರೋಗ್ಯ ಅಧಿಕಾರಿಗಳು ಶಾಸಕರ ನೇತೃತ್ವದಲ್ಲಿ ನಿರ್ಧಾರ ಕೈಗೊಂಡು, ಮೇ 13ರಂದೇ ಸಭೆ ನಡೆಸಿ ವ್ಯವಸ್ಥೆ ಕೈಗೊಳ್ಳಬೇಕು. ಜಿಲ್ಲಾಡಳಿತದಿಂದ ಮಾಡಲಾಗುವ ಸಾಂಸ್ಥಿಕ ಕ್ವಾರಂಟೈನ್‌ ಉಚಿತ. ಸ್ಥಳೀಯ ನಿಗದಿತ ಹೊಟೇಲ್‌ಗ‌ಳಲ್ಲಿ ಉಳಿಯ ಬಯಸುವವರು ಹಣ ಪಾವತಿಸಿದರೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಮಾತನಾಡಿ, ಒಟ್ಟು 6,092 ಅರ್ಜಿಗಳು ಸೇವಾಸಿಂಧುವಿನಲ್ಲಿ ಸಲ್ಲಿಕೆಯಾಗಿವೆ. ಪ್ರತಿ ಅರ್ಜಿಯಲ್ಲಿ 3 ರಿಂದ 5 ಮಂದಿ ನೋಂದಾಯಿಸಿದ್ದು, ಸುಮಾರು 25 ಸಾವಿರ ಮಂದಿ ಬರಬಹುದು. ಮಹಾರಾಷ್ಟ್ರದಿಂದಲೇ 2,594 ಅರ್ಜಿ ಸಲ್ಲಿಕೆಯಾಗಿದ್ದು, 5,000ಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆಯಿದೆ. ಅವರಿಗೆ ಸರಕಾರದ ವತಿಯಿಂದಲೇ ಕ್ವಾರಂಟೈನ್‌ಗೆ ಒಳಪಡಿಸಲು ಸಿದ್ಧತೆ ನಡೆದಿದೆ ಎಂದರು.

ಮನೆಯಲ್ಲಿ ಅವಕಾಶ ನೀಡಿ
ಶಾಸಕ ಯು.ಟಿ. ಖಾದರ್‌ ಮಾತನಾಡಿ, ಜಿಲ್ಲೆಗೆ ಬರುವವರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ತಮ್ಮ ಮನೆ ಅಥವಾ ಸಂಬಂಧಿಕರ ಮನೆಗಳಲ್ಲಿ ಕ್ವಾರಂಟೈ ನ್‌ಗೆ ಒಳಪಡಲು ಇಚ್ಛಿಸಿದರೆ, ಸೂಕ್ತ ಕ್ರಮಗಳೊಂದಿಗೆ ಅವಕಾಶ ಕಲ್ಪಿಸಿದರೆ ಉತ್ತಮ ಎಂದರು.

ಪೊಲೀಸ್‌ ಆಯುಕ್ತ ಡಾ| ಪಿ.ಎಸ್‌. ಹರ್ಷ ಮಾತನಾಡಿ, ತುರ್ತು ಆರೋಗ್ಯ ಸಂದರ್ಭವಾದ ಕಾರಣ ಖಾಸಗಿ ಹಾಸ್ಟೆಲ್‌, ಶಿಕ್ಷಣ ಸಂಸ್ಥೆಗಳ ರೂಂಗಳನ್ನು ಪಡೆಯಬೇಕು ಎಂದರು. ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಖಾಸಗಿ ವೈದ್ಯಕೀಯ, ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್‌ಗ‌ಳನ್ನು ಕೂಡಾ ಬಳಸಿಕೊಳ್ಳಬೇಕು ಎಂದರು. ವಿ.ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಮಾತನಾಡಿ, ಸಾಕಷ್ಟು ಸಂಖ್ಯೆಯಲ್ಲಿ ಗರ್ಭಿಣಿಯರೂ ಆಗಮಿಸುವುದರಿಂದ ಅವರಿಗೆ ಹೋಂ ಕ್ವಾರಂಟೈನ್‌ಗೆ ವಿಶೇಷ ಆದ್ಯತೆ ನೀಡಿ ಎಂದರು.

ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಸದ, ನಳಿನ್‌ ಕುಮಾರ್‌ ಕಟೀಲು, ಶಾಸಕರಾದ ರಾಜೇಶ್‌ ನಾೖಕ್‌, ಡಾ| ವೈ. ಭರತ್‌ ಶೆಟ್ಟಿ, ಉಮಾನಾಥ್‌ ಕೋಟ್ಯಾನ್‌ ಆಗ್ರಹಿಸಿದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಮತ್ತಿತರಿದ್ದರು.

ತುರ್ತು ಅಗತ್ಯಕ್ಕೆ ಅವಕಾಶ
ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಮದನ್‌ ಮೋಹನ್‌ ಮಾತನಾಡಿ, ಕೇಂದ್ರ ಸರಕಾರದ ಆದೇಶದ ಪ್ರಕಾರ ಪ್ರಸ್ತುತ ಆ ಅರ್ಜಿಗಳಲ್ಲಿ ಕುಟುಂಬದಲ್ಲಿ ಮರಣ ಸೇರಿದಂತೆ ತುರ್ತು ಆಗಮನ, ಗರ್ಭಿಣಿಯರು, ವೈದ್ಯಕೀಯ ಸೌಲಭ್ಯ ಪಡೆಯಬೇಕಾದವರು, ಪ್ರವಾಸಕ್ಕೆ ತೆರಳಿ ಬಾಕಿಯಾಗಿರುವವರು, ವಿದ್ಯಾರ್ಥಿಗಳು, ಹೊರ ದೇಶಗಳಿಂದ ಬಂದು ಇತರ ರಾಜ್ಯಗಳಲ್ಲಿ ಬಾಕಿಯಾದವರು, ವಜಾಗೊಂಡ ಕಾರ್ಮಿಕರು ಸೇರಿದಂತೆ ತುರ್ತು ಅಗತ್ಯಗಳ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದರು.

ಸೋಂಕಿನ ಲಕ್ಷಣ ಇದ್ದರೆ ವೆನ್ಲಾಕ್‌ಗೆ
ಸಚಿವ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆಗೆ ಆಗಮಿಸುತ್ತಿರುವವರಲ್ಲಿ ಮೇಲ್ನೋಟಕ್ಕೆ ಸೋಂಕಿನ ಗುಣ ಲಕ್ಷಣ ಕಂಡು ಬಂದರೆ ಮಾತ್ರ ಅಂಥವರನ್ನು ಕೋವಿಡ್‌ ಆಸ್ಪತ್ರೆಯಾದ ವೆನ್ಲಾಕ್‌ಗೆ ದಾಖಲಿಸಲಾಗುತ್ತದೆ. ಉಳಿದವರನ್ನು ಜಿಲ್ಲಾಡಳಿತ ಕ್ವಾರಂಟೈನ್‌ ಕೇಂದ್ರಕ್ಕೆ ಕಳುಹಿಸಲಾಗುವುದು. ಈ ಕುರಿತಂತೆ ಯಾವುದೇ ಗೊಂದಲದ ಅಗತ್ಯವಿಲ್ಲ. ಜಿಲ್ಲಾಡಳಿತ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದರು.

‘ಮೂಲ ಪತ್ತೆ ಮಾಡಿಯೇ ಸಿದ್ಧ ‘
ಜಿಲ್ಲೆಯಲ್ಲಿ ಕೋವಿಡ್ ಹರಡಿರುವುದರ ಮೂಲ ಪತ್ತೆಯಲ್ಲಿ ತಜ್ಞರನ್ನೊಳಗೊಂಡ ಜಿಲ್ಲಾ ಮಟ್ಟದ ತಂಡ ಮಧ್ಯಾಂತರ ವರದಿ ನೀಡಿದೆ. ಆದರೆ ಫಸ್ಟ್‌ ನ್ಯೂರೊ ಆಸ್ಪತ್ರೆಯಲ್ಲಿ ಸೋಂಕು ಪತ್ತೆಯಾದ ಸಂದರ್ಭ ಕೇರಳದ ರೋಗಿಗಳು ಅಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿರುವುದರಿಂದ ಆ ಬಗ್ಗೆಯೂ ಪರಿಶೀಲನೆ ಅಗತ್ಯವಾಗಿದ್ದು, ತಂಡವು ಕಾಲಾವಕಾಶ ಕೋರಿದೆ. ಆದರೆ ಮೂಲ ಶೋಧನೆ ಮಾಡದೆ ಬಿಡುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ‘ಕೋವಿಡ್ ಮೂಲ ಪತ್ತೆಹಚ್ಚುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎನ್ನುವ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರ ಆರೋಪಕ್ಕೆ ಸಚಿವರು ಈ ಉತ್ತರ ನೀಡಿದರು. ಕೇರಳದ ಮಾಹಿತಿಗಳು ಬರಲು ಕೊಂಚ ಕಾಲಾವಕಾಶ ಬೇಕಾಗುತ್ತದೆ. ಅಲ್ಲಿಯವರೆಗೆ ಕಾಯೋಣ ಎಂದರು. ಇದಕ್ಕೆ, ‘ಬಂಟ್ವಾಳದ ಮಹಿಳೆ ಮೃತಪಟ್ಟು 18 ದಿನಗಳಾದರೂ ಇನ್ನೂ ತನಿಖಾ ವರದಿ ಸಿದ್ಧಪಡಿಸಲು ಆಗಿಲ್ಲ ಎಂದರೆ ಇದು ವೈಫಲ್ಯವಲ್ಲವೇ?’ ಎಂದು ಐವನ್‌ ಪ್ರಶ್ನಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಮಾತನಾಡಿ, ಮೈಕ್ರೋ ಬಯಾಲಜಿಸ್ಟ್‌ ಡಾ| ಆನಂದ್‌ ಅವರನ್ನೊಳಗೊಂಡ 6 ಮಂದಿಯ ತಂಡ ಪ್ರಕರಣದ ಕುರಿತಂತೆ ಮೂರು ದಿಕ್ಕಿನಲ್ಲಿ ಪರಿಶೀಲನೆ ನಡೆಸುತ್ತಿದೆ. ಬಂಟ್ವಾಳ ಕಸ್ಬಾದ ಮೃತಪಟ್ಟ ಮಹಿಳೆ, ಫಸ್ಟ್‌ ನ್ಯೂರೊ ಆಸ್ಪತ್ರೆ ಹಾಗೂ ಆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಕೇರಳ- ಕಾಸರಗೋಡಿನ ರೋಗಿಗಳ ಕುರಿತಂತೆಯೂ ಪರಿಶೀಲನೆ ಮಾಡಲಾಗುತ್ತಿದೆ ಎಂದರು. ಶಾಸಕ ಡಾ| ಭರತ್‌ ಶೆಟ್ಟಿ, ಯು.ಟಿ ಖಾದರ್‌ ಮಾತನಾಡಿದರು.

ಟಾಪ್ ನ್ಯೂಸ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.