2,500 ಸ್ಮಾರ್ಟ್‌ಕಾರ್ಡ್‌ ವಿತರಣೆ; ಸಿಟಿ ಬಸ್‌ಗಳ “ಸ್ಮಾರ್ಟ್‌ ಕಾರ್ಡ್‌’ಗೆ ಬಹು ಬೇಡಿಕೆ


Team Udayavani, Aug 7, 2020, 12:42 PM IST

2,500 ಸ್ಮಾರ್ಟ್‌ಕಾರ್ಡ್‌ ವಿತರಣೆ; ಸಿಟಿ ಬಸ್‌ಗಳ “ಸ್ಮಾರ್ಟ್‌ ಕಾರ್ಡ್‌’ಗೆ ಬಹು ಬೇಡಿಕೆ

ಮಹಾನಗರ: ನಗರದ ಸಿಟಿಬಸ್‌ಗಳಲ್ಲಿ ಜಾರಿಗೆ ಬಂದಿರುವ “ಸ್ಮಾರ್ಟ್‌ಕಾರ್ಡ್‌’ಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸ್ಮಾರ್ಟ್‌ ಕಾರ್ಡ್‌ ಮೂಲಕವೇ ಪ್ರಯಾಣಿಕರು ಸಿಟಿಬಸ್‌ಗಳಲ್ಲಿ ಸಂಚರಿಸಲು ಉತ್ಸುಕತೆ ತೋರುತ್ತಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಸುಮಾರು 2,500 ಸ್ಮಾರ್ಟ್‌ ಕಾರ್ಡ್‌ಗಳನ್ನು ಪ್ರಯಾಣಿಕರು ಪಡೆದುಕೊಂಡಿ ದ್ದಾರೆ. ಒಂದು ಬಸ್‌ನ ಒಂದು ದಿನದ ಗಳಿಕೆಯಲ್ಲಿ ಶೇ. 15ರಷ್ಟು ಸ್ಮಾರ್ಟ್‌ ಕಾರ್ಡ್‌ ಮೂಲಕ ದೊರೆಯುತ್ತಿದೆ. ಪುತ್ತೂರು-ಮಂಗಳೂರು ಬಸ್‌ನಲ್ಲಿಯೂ ಈ ಪರಿಕಲ್ಪನೆ ಮುಂದುವರಿಸಲು ಇದೀಗ ಯೋಜನೆ ರೂಪಿಸಲಾಗುತ್ತಿದೆ.

ಏನಿದು ಸ್ಮಾರ್ಟ್‌ಕಾರ್ಡ್‌?
ಸ್ಮಾರ್ಟ್‌ಕಾರ್ಡ್‌ ಅಂದರೆ ನಗದು ರಹಿತ ಪ್ರಯಾಣಕ್ಕೆ ಅವಕಾಶ ಎಂಬುದು ತಾತ್ಪರ್ಯ. ಇದು ಸಂಪೂರ್ಣ ಡಿಜಿಟಲ್‌. ಸದ್ಯ ಸಿಟಿ ಬಸ್‌ನ ಎಲ್ಲ ನಿರ್ವಾಹಕರಲ್ಲಿ “ಇಟಿಎಂ’ ಟಿಕೆಟ್‌ ಮೆಶಿನ್‌ ಇದೆ. ಈ ಕಾರ್ಡ್‌ ಪಡೆದವರು ನಿಗದಿತವಾಗಿ ರೀಚಾರ್ಜ್‌ ಮಾಡಿಕೊಂಡು ಬಸ್‌ನಲ್ಲಿ ಪ್ರಯಾಣಿಸು ವಾಗ ಕಾರ್ಡ್‌ ಸ್ವೆ„ಪ್‌ ಮಾಡಬೇಕು. ಆಗ ಪ್ರಯಾಣ ದರವು ಪ್ರಯಾಣಿಕನ ಕಾರ್ಡ್‌ ನಿಂದ ಕಡಿತವಾಗುತ್ತದೆ.  ನಗರದ ಎಲ್ಲ ಸಿಟಿ ಬಸ್‌ಗಳಲ್ಲಿ ಸ್ಮಾರ್ಟ್‌ ಕಾರ್ಡ್‌ ವ್ಯವಸ್ಥೆ ಜಾರಿಗೆ ತರಲು “ಚಲೋ’ ಸಂಸ್ಥೆಯ ಸಹಯೋಗದೊಂದಿಗೆ ಸಿಟಿ ಬಸ್‌ ಮಾಲಕರ ಸಂಘ ಈಗಾಗಲೇ ಒಪ್ಪಂದ ಮಾಡಿಕೊಂಡಿದೆ.

ಪ್ರಯಾಣಿಕರಿಗೆ “ಸ್ಮಾರ್ಟ್‌ ಕಾರ್ಡ್‌’ ಉಚಿತ
ಸ್ಮಾರ್ಟ್‌ಕಾರ್ಡ್‌ ಪಡೆಯಲು ಪ್ರಯಾ ಣಿಕರು ಯಾವುದೇ ರೀತಿಯ ಶುಲ್ಕ ಪಾವತಿಸಬೇಕಿಲ್ಲ. ಕಂಡಕ್ಟರ್‌ ಅವರಲ್ಲಿ ಈ ಕಾರ್ಡ್‌ ಉಚಿತವಾಗಿ ಪಡೆಯಬಹುದು ಹಾಗೂ ಅವರ ಬಳಿಯೇ ಹಣ ಕೊಟ್ಟು ರೀಚಾರ್ಜ್‌ ಕೂಡ ಮಾಡಿಸಬಹುದು. ಜತೆಗೆ ನಗರದಲ್ಲಿ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಸಹಿತ ವಿವಿಧ ಕಡೆಗಳಲ್ಲಿ ಮಾಹಿತಿ ನೀಡಲಾಗುತ್ತಿದೆ. 10,000ಕ್ಕೂ ಅಧಿಕ ಕಾರ್ಡ್‌ ಗಳನ್ನು ಪ್ರಯಾಣಿಕರಿಗೆ ನೀಡಲು ಉದ್ದೇಶಿಸಲಾಗಿದೆ.

ಉತ್ತಮ ಸ್ಪಂದನೆ
ಸ್ಮಾರ್ಟ್‌ ಕಾರ್ಡ್‌’ಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಪ್ರಯಾಣಿಕರು ಕಾರ್ಡ್‌ ಪಡೆಯಲು ಉತ್ಸುಕತೆ ತೋರುತ್ತಿದ್ದಾರೆ. ಬಸ್‌ನಲ್ಲಿ ಕಂಡಕ್ಟರ್‌ ಮೂಲಕವೇ ಇದೀಗ ಕಾರ್ಡ್‌ ವಿತರಿಸಲಾಗುತ್ತಿದೆ. ಜತೆಗೆ ರೀಚಾರ್ಜ್‌ ಕೂಡ ಅವರಿಂದಲೇ ಮಾಡಲಾಗುತ್ತದೆ.
 - ದಿಲ್‌ರಾಜ್‌ ಆಳ್ವ, ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.