ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿಗೆ 31ನೇ ಬಲಿ: 35 ವರ್ಷದ ಯುವಕ ಇಂದು ಸಾವು
Team Udayavani, Jul 10, 2020, 11:19 AM IST
ಮಂಗಳೂರು: ಕರ್ನಾಟಕ ಕರಾವಳಿಯಲ್ಲಿ ಕೋವಿಡ್ ಸೋಂಕು ಆರ್ಭಟ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದರೆ, ಮತ್ತೊಂದೆಡೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲೂ ಏರಿಕೆಯಾಗುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಇಂದು ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಕೋವಿಡ್ ಸೋಂಕಿನ ಕಾರಣದಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾನೆ.
ಇಂದಿನ ಈ ಯುವಕನ ಸಾವು ಪ್ರಕರಣದಿಂದ ಜಿಲ್ಲೆಯ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಗುರುವಾರ ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದರು. ಗುರುವಾರ ಜಿಲ್ಲೆಯಲ್ಲಿ 167 ಮಂದಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆ ಕಂಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.