45 ದಿನ ವಾಹನ ಸಂಚಾರ ನಿರ್ಬಂಧ

 ಸಾರ್ಟ್‌ಸಿಟಿ ವೇಗ; ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

Team Udayavani, Mar 29, 2022, 11:40 AM IST

repair

ಜಪ್ಪು: ಜಪ್ಪು ಮಹಾಕಾಳಿ ಪಡ್ಪು ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮ ಗಾರಿಗಳಿಗೆ ವೇಗ ನೀಡುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಿಂದ ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಕೆಳಸೇತುವೆ ಮೂಲಕ ಮೋರ್ಗನ್ಸ್‌ ಗೇಟ್‌ ಜಂಕ್ಷನ್‌ ವರೆಗೆ ಮಾ.28ರಿಂದ ಮೇ 11ರವರೆಗೆ 45 ದಿನಗಳ ಕಾಲ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಮಂಗಳೂರು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರು ಈ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿಯಿಂದ ಮಂಗ ಳೂರು ನಗರ ಪ್ರವೇಶಕ್ಕೆ ಪರ್ಯಾಯ ರಸ್ತೆ ಬಳಸುವಂತೆ ಸೂಚಿಸಿದ್ದಾರೆ.

ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ವೇಳೆ ರಾಷ್ಟ್ರೀಯ ಹೆದ್ದಾರಿ 66ರಿಂದ ಮಹಾಕಾಳಿ ಪಡ್ಪು ರೈಲ್ವೇ ಕೆಳಸೇತುವೆ ಮುಖಾಂತರ ಮೋರ್ಗನ್‌ ಗೇಟ್‌ ಜಂಕ್ಷನ್‌ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಪ್ರಯಾಣಿಕರ ಗಮನಕ್ಕೆ ನಗರದ ಒಳಗಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರ ಕಡೆಗೆ ಸಂಚರಿಸುವ ಎಲ್ಲ ವಾಹನಗಳು ವೆಲೆನ್ಸಿಯಾ ರಸ್ತೆ ಮೂಲಕ ಕಂಕನಾಡಿ ವೃತ್ತಕ್ಕೆ ಬಂದು ಅಲ್ಲಿಂದ ಬಲಕ್ಕೆ ತಿರುಗಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಪ್ರವೇಶಿಸಿ ಮುಂದಕ್ಕೆ ಸಂಚರಿಸಬೇಕಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರಿಂದ ಮಹಾಕಾಳಿಪಡ್ಪು ಮೂಲಕ ಮಂಗಳೂರು ನಗರಕ್ಕೆ ಬರುವ ಎಲ್ಲ ವಾಹನಗಳು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಎಡಕ್ಕೆ ತಿರುಗಿ ಹಳೆ ಕಂಕನಾಡಿ ರಸ್ತೆ ಮೂಲಕ ನಗರಕ್ಕೆ ಪ್ರವೇಶಿಸಿ ‌ಮುಂದಕ್ಕೆ ಸಂಚರಿಸಬೇಕಾಗಿದೆ. ನಾಲ್ಕು ಪಥದ ಸಂಪರ್ಕ ರಸ್ತೆ ಜಪ್ಪು ರಾಷ್ಟ್ರೀಯ ಹೆದ್ದಾರಿ-66 ರಿಂದ ಮೋರ್ಗನ್ಸ್‌ ಗೇಟ್‌ ಜಂಕ್ಷನ್‌ ವರೆಗೆ ನಾಲ್ಕು ಪಥದ ಸಂಪರ್ಕ ರಸ್ತೆ, ಮಹಾಕಾಳಿ ಪಡ್ಪುವಿನಲ್ಲಿ ಆರ್‌ಯುಬಿ ನಿರ್ಮಾಣ ಕಾರ್ಯ ನಡೆಯಲಿದೆ. ಈ ಪೈಕಿ ರಾಷ್ಟ್ರೀಯ ಹೆದ್ದಾರಿಯಿಂದ ಕೊಂಚ ಮುಂಭಾಗದಿಂದ ತಿರುವು ಭಾಗದವರೆಗೆ ಒಂದು ಪಾರ್ಶ್ವದಲ್ಲಿ ಕಾಂಕ್ರೀಟ್‌ ಕೆಲಸ ಆಗಿದೆ. ಉಳಿದ ಕಾಮಗಾರಿ ನಡೆಯಲಿದೆ.

ಸದ್ಯ ಸಂಪರ್ಕ ರಸ್ತೆಯು 4.50 ಮೀ.ನಿಂದ 6 ಮೀ.ವರೆಗೆ ಇದ್ದು, ಈ ರಸ್ತೆ ಮೇಲ್ದರ್ಜೆಗೇರಲಿದೆ. ನೂತನ ಯೋಜನೆಯ ಪ್ರಕಾರ 1,078 ಮೀ. ಉದ್ದದ ರಸ್ತೆಯನ್ನು 18 ಮೀ.ಗೆ ವಿಸ್ತರಿಸಿ 4 ಪಥದ ಕಾಂಕ್ರೀಟ್‌ ರಸ್ತೆ, ಮೀಡಿಯನ್‌, ದಾರಿದೀಪಗಳು, ಎರಡೂ ಭಾಗಗಳಲ್ಲಿ ಆರ್‌ಸಿಸಿ ಮಳೆ ನೀರು ಚರಂಡಿ, ತಗ್ಗು ಪ್ರದೇಶದ ಭಾಗದಲ್ಲಿ ಆರ್‌ಸಿಸಿ ತಡೆಗೋಡೆ, ಗ್ರಾನೈಟ್‌ ಕಲ್ಲು ಪಿಚ್ಚಿಂಗ್‌ ಒಳಗೊಂಡಿದೆ.

ಪಂಪ್‌ವೆಲ್‌ನಲಿ ಟ್ರಾಫಿಕ್‌ ಕಿರಿಕಿರಿ ಸಾಧ್ಯತೆ!

ತೊಕ್ಕೊಟ್ಟು ಭಾಗದಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ಬಹುತೇಕ ವಾಹನಗಳು ಜಪ್ಪಿನಮೊಗರು ಮುಖೇನ ತೆರಳುತ್ತಿತ್ತು. ಆದರೆ ಮುಂದಿನ 45 ದಿನ ಮೋರ್ಗನ್‌ ಗೇಟ್‌ ರಸ್ತೆ ಬಂದ್‌ ಆಗುವ ಕಾರಣದಿಂದ ವಾಹನಗಳು ರಾಷ್ಟ್ರೀಯ ಹೆದ್ದಾರಿ ಮೂಲಕ ಪಂಪ್‌ವೆಲ್‌ ಗೆ ಬಂದು ನಗರ ಪ್ರವೇಶಿಸಬೇಕಾಗುತ್ತದೆ. ಇದರಿಂದಾಗಿ ಮೊದಲೇ ವಾಹನ ದಟ್ಟಣೆ ಎದುರಿಸುತ್ತಿರುವ ಪಂಪ್‌ ವೆಲ್‌ನಲ್ಲಿ ಮತ್ತಷ್ಟು ವಾಹನ ಒತ್ತಡ ಎದುರಿಸಬೇಕಾದ ಅನಿವಾರ್ಯವಿದೆ. ಜತೆಗೆ ನಗರದಿಂದ ತೆರಳುವ ವಾಹನಗಳು ಕೂಡ ಕಂಕನಾಡಿ ಭಾಗದಿಂದ ಪಂಪ್‌ವೆಲ್‌ ಮೂಲಕ ತೆರಳಬೇಕಾದ ಹಿನ್ನೆಲೆಯಲ್ಲಿ ಕಂಕನಾಡಿ-ಪಂಪ್‌ವೆಲ್‌ನಲ್ಲಿ ಸಂಚಾರ ದಟ್ಟಣೆ ಎದುರಾಗುವ ಸಾಧ್ಯತೆಯಿದೆ.

ಸ್ಮಾರ್ಟ್‌ಸಿಟಿಯಿಂದ ರೈಲ್ವೇ ಆರ್‌ಯುಬಿ ಯೋಜನೆ

ಕೇರಳ-ಮಂಗಳೂರು ಮಧ್ಯೆ ಪ್ರತಿನಿತ್ಯ ಹತ್ತಾರು ರೈಲುಗಳು ಸಂಚರಿಸುತ್ತವೆ. ಈ ರೈಲು ಜಪ್ಪು ಮಹಾಕಾಳಿಪಡ್ಪು ಮೂಲಕ ಸಾಗುವ ಕಾರಣದಿಂದ ವಾಹನ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಕಾರಣಕ್ಕಾಗಿ ರಸ್ತೆ ಬ್ಲಾಕ್‌ ಆಗಿ ತೊಕ್ಕೊಟ್ಟು-ಮಂಗಳೂರು ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವ ಪ್ರಮೇಯ ಇಲ್ಲಿ ನಿತ್ಯದ ಸಂಗತಿ. ಇಕ್ಕಟ್ಟಿನ ರಸ್ತೆಯಲ್ಲಿ ವಾಹನ ಸಂಚರಿಸಲೂ ಆಗದೆ ಸಂಕಷ್ಟವೇ ಎದುರಾಗುತ್ತಿದೆ. ಇದೇ ಕಾರಣಕ್ಕೆ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಇಲ್ಲಿ ಹೊಸ ಸಂಪರ್ಕ ರಸ್ತೆ ಮತ್ತು ಆರ್‌ಯುಬಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.