![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 7, 2020, 11:24 AM IST
ಮಂಗಳೂರು: ಕೋವಿಡ್ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮರ್ಥ್ಯದ ಶೇ. 50ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕೋವಿಡ್ ನಿರ್ವಹಣೆ ಸಂಬಂಧ ಗುರುವಾರ ಮಂಗಳೂರು ಉತ್ತರ ಶಾಸಕ ಡಾ| ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ. ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸಚಿವರು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಿಗೆ ಸರಕಾರದಿಂದ ರ್ಯಾಪಿಡ್ ಕಿಟ್‌ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಲಿದೆ ಎಂದರು.
ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ಬೋರ್ಡ್ ಅಳವಡಿಸಿ ವಿವರ ನಮೂದಿಸಬೇಕು ಎಂದರು.
ಶಾಸಕ ಡಾ| ಭರತ್ ಶೆಟ್ಟಿ, ಜಿ.ಪಂ. ಸಿಇಒ ಡಾ| ಸೆಲ್ವಮಣಿ, ಡಿಎಚ್‌ಒ ಡಾ| ರಾಮಚಂದ್ರ ಬಾಯರಿ, ವೆನ್ಲಾಕ್ ಅಧೀಕ್ಷಕ ಡಾ| ಸದಾಶಿವ, ಎ.ಜೆ. ಆಸ್ಪತ್ರೆ ನಿರ್ದೇಶಕ ಡಾ| ಪ್ರಶಾಂತ್ ಮಾರ್ಲ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಡೀನ್ ಡಾ| ಉದಯ ಕುಮಾರ್ ಮೊದಲಾದವರಿದ್ದರು.
ಸಕ್ರಿಯರಾಗಿರಿ: ಆರೋಗ್ಯ ಮಿತ್ರರಿಗೆ ಡಿಸಿ ಸೂಚನೆ
ಎಲ್ಲ ಮೆಡಿಕಲ್ ಕಾಲೇಜುಗಳು ಪ್ರತೀ ದಿನ 100 ಮಂದಿಯ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು. ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರಗಿಸು ವುದಾಗಿ ಜಿಲ್ಲಾಧಿಕಾರಿ ಎಚ್ಚರಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.