ಕಟೀಲು 5ನೇ ಮೇಳದಿಂದ 8 ಮಂದಿ ಹೊರಕ್ಕೆ

Team Udayavani, Nov 13, 2017, 2:15 PM IST

25874.jpg

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ 5ನೇ ಮೇಳದ ಪ್ರಧಾನ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರ ವರ್ಗಾವಣೆ ವಿರೋಧಿಸಿ 23 ಮಂದಿ ಕಲಾವಿದರು ರಾಜೀನಾಮೆ ನೀಡಿದ್ದ ಪ್ರಕರಣ ಇನ್ನೊಂದು ಮಜಲು ಮುಟ್ಟಿದೆ.

ಇದೀಗ ರಾಜೀನಾಮೆ ನೀಡಿದವರಲ್ಲಿ 9 ಮಂದಿ ಮೇಳಕ್ಕೆ ವಾಪಸಾಗಿದ್ದಾರೆ. 8 ಮಂದಿಯ ರಾಜೀನಾಮೆ ಅಂಗೀಕರಿಸಲಾಗಿದ್ದು, ಅವರಿಗೆ ಸೇರ್ಪಡೆಗಿದ್ದ ಬಾಗಿಲು ಬಂದ್‌ ಆಗಿದೆ. ಇದೇ ಸಂದರ್ಭ 6 ಮಂದಿ ಕಲಾವಿದರು ಅತಂತ್ರ ಸ್ಥಿತಿ ತಲುಪಿದ್ದಾರೆ. 

ರಾಜೀನಾಮೆ ಪ್ರಕರಣಕ್ಕೆ ಕಾರಣವಾಗಿದ್ದಾರೆ ಎನ್ನಲಾದ 8 ಮಂದಿ ಕಲಾವಿದರನ್ನು ಹೊರತು ಪಡಿಸಿ ಉಳಿದ ಕಲಾವಿದರಿಗೆ ಮೇಳದ ಕಡೆಯಿಂದ ಕರೆ ಹೋಗಿದ್ದು, ನಿಲುವು ಸ್ಪಷ್ಟಪಡಿಸಲು ಶನಿವಾರ ತಿಳಿಸಲಾಗಿತ್ತು. ಅದರಂತೆ 9 ಮಂದಿ ಕಲಾವಿದರು ವಾಪಸ್ಸಾಗುವ ಇಚ್ಛೆ ವ್ಯಕ್ತಪಡಿಸಿದ್ದರು. ಇನ್ನು 6 ಕಲಾವಿದರು ಸರಿಯಾದ ನಿಲುವು ತಿಳಿಸದಿರುವುದರಿಂದ ಅವರ ಸ್ಥಿತಿ ಅತಂತ್ರವಾಗಿದೆ.

ತಿರುಗಾಟಕ್ಕೆ ಮೇಳ ಸಿದ್ಧ

ಕಲಾವಿದರ ರಾಜೀನಾಮೆ ವಿವಾದದ ಮಧ್ಯೆ ತಿರುಗಾಟಕ್ಕೆ ಮೇಳ ಪೂರ್ಣವಾಗಿ ಸಿದ್ಧವಾಗಿದೆ. ಕಟೀಲು ಮೇಳದಲ್ಲಿ ಉಚಿತ ಸೇವೆ ಸಲ್ಲಿಸಲು 25ಕ್ಕೂ ಹೆಚ್ಚು ಹವ್ಯಾಸಿ ಕಲಾವಿದರು ಮುಂದೆ ಬಂದಿದ್ದಾರೆ. ಜತೆಗೆ ಹೊಸ 6 ಸಮರ್ಥ ಕಲಾವಿದರು ಮೇಳಕ್ಕೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಮೇಳದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ 15ಕ್ಕೂ ಮಿಕ್ಕಿ ಕಲಾವಿದರಿಗೆ ಭಡ್ತಿ ನೀಡಲು ಉದ್ದೇಶಿಸಲಾಗಿದೆ. ಹೊಸದಾಗಿ 25ಕ್ಕೂ ಹೆಚ್ಚು ಕಲಾವಿದರು ಮೇಳಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮೇಳದ ಸಂಚಾಲಕರ ಅಪ್ತ ವಲಯ ತಿಳಿಸಿದೆ.  

ವಾಪಸ್‌ ಸೇರಿಸಿಕೊಳ್ಳಲು ಕೆಲವರ ದುಂಬಾಲು!
ರಾಜೀನಾಮೆ ನೀಡಿದ ಕಲಾವಿದರನ್ನು ಹೊರಗಿಟ್ಟೇ ಮೇಳ ಹೊರಡಲು ಸಿದ್ಧತೆ ನಡೆಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕೆಲವರು ಸಂಚಾಲಕರ ಆಪ್ತ ವಲಯಕ್ಕೆ ಕರೆಮಾಡಿ ಮೇಳಕ್ಕೆ ವಾಪಸ್‌ ಸೇರಿಸಿಕೊಳ್ಳಲು ದುಂಬಾಲು ಬಿದ್ದಿದ್ದಾರೆ. ಇನ್ನು ಆರೂ ಮೇಳದ ಕಲಾವಿದರಲ್ಲಿ ಹೆಚ್ಚಿನವರು ಯಾವುದೇ ಮೇಳವಾದರೂ ಸೇವೆಗೆ ಸಿದ್ಧರಾಗಿದ್ದಾರೆ ಎಂದು ಕಟೀಲು ಮೇಳದ ಮೂಲಗಳು ತಿಳಿಸಿವೆ.

ವಾಪಸ್‌ ಬರಲು ಸಿದ್ಧ
ಏತನ್ಮಧ್ಯೆ ರಾಜೀನಾಮೆ ನೀಡಿದ ಕಲಾವಿದರು ಉದಯವಾಣಿಗೆ ಪ್ರತಿಕ್ರಿಯಿಸಿದ್ದು, ರಾಜೀನಾಮೆ ವಾಪಸ್‌ ಪಡೆದುಕೊಂಡಿದ್ದು, ಮೇಳಕ್ಕೆ ಬರಲು ಸಿದ್ಧವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.