ರಾಜ್ಯದಿಂದ 8,000 ಮಂದಿ ಹಜ್‌ಗೆ
ಜು. 17: ಮಂಗಳೂರಿನಲ್ಲಿ ಯಾತ್ರೆಗೆ ಚಾಲನೆ; 5 ವಿಮಾನಗಳಲ್ಲಿ ಪ್ರಯಾಣ
Team Udayavani, Jul 14, 2019, 10:39 AM IST
ಮಂಗಳೂರು: ಈ ವರ್ಷ ರಾಜ್ಯದಿಂದ 8,000 ಮಂದಿ ಹಜ್ ಯಾತ್ರೆ ಕೈಗೊಳ್ಳಲಿದ್ದಾರೆ. ರಾಜ್ಯ ಹಜ್ ಸಮಿತಿ ವತಿಯಿಂದ ಮಂಗಳೂರು ಹಜ್ ಕ್ಯಾಂಪ್ ಮೂಲಕ 750 ಮಂದಿ ಹಜ್ ಯಾತ್ರೆ ಹೋಗಲಿದ್ದು, ಹಜ್ಜಾಜ್‌ಗಳ ವಿಮಾನ ಯಾತ್ರೆಯ ಉದ್ಘಾಟನೆ ಜು. 17 ಬುಧವಾರ ಬೆಳಗ್ಗೆ 10.30ಕ್ಕೆ ಬಜಪೆ ಅನ್ಸಾರ್ ಪಬ್ಲಿಕ್ ಸ್ಕೂಲ್‌ನಲ್ಲಿ ನೆರವೇರಲಿದೆ.
ರಾಜ್ಯ ಹಜ್ ಮತ್ತು ವಕ್ಫ್ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಉದ್ಘಾಟಿಸುವರು. ಸಚಿವ ಯು.ಟಿ. ಖಾದರ್ ಪ್ರಥಮ ಹಜ್ ಯಾತ್ರಾರ್ಥಿಗಳ ಪಾಸ್ ಪೋರ್ಟ್ ವಿತರಿಸುವರು. ರಾಜ್ಯ ಹಜ್ ಸಮಿತಿ ಅಧ್ಯಕ್ಷ ಆರ್. ರೋಶನ್ ಬೇಗ್ ಪ್ರಥಮ ತಂಡದ ವಾಹನಕ್ಕೆ ಹಸಿರು ನಿಶಾನೆ ತೋರಿಸುವರು. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ರಾಜ್ಯ ಹಜ್ ಸಮಿತಿ ಸದಸ್ಯ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಪ್ರಸ್ತಾವನೆಗೈಯುವರು.
ದಶ ವರ್ಷದ ಹಜ್ ಕ್ಯಾಂಪ್
2009 ಅಕ್ಟೋಬರ್ 25ರಂದು ಮಂಗಳೂರು ಹಜ್ ಕೇಂದ್ರ ಅಸ್ತಿತ್ವಕ್ಕೆ ಬಂದಿದ್ದು, 9 ವರ್ಷಗಳಲ್ಲಿ ಈ ಹಜ್ ನಿರ್ವಹಣ ಸಮಿತಿ ಮೂಲಕ 6,000 ಮಂದಿ ಹಜ್ ಯಾತ್ರೆ ಕೈಗೊಂಡಿದ್ದಾರೆ ಎಂದು ಸಮಿತಿ ಅಧ್ಯಕ್ಷ ವೈ. ಮಹಮ್ಮದ್ ಕುಂಞಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜು. 17 ಮತ್ತು 18ರಂದು ದ.ಕ. ಮತ್ತು ಉಡುಪಿ ಜಿಲ್ಲೆಯ ಯಾತ್ರಾರ್ಥಿಗಳು ಹಾಗೂ ಜು. 19ರಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ ಮತ್ತು ಹಾಸನ ಜಿಲ್ಲೆಯ ಯಾತ್ರಾರ್ಥಿಗಳು ಒಟ್ಟು 5 ವಿಮಾನಗಳಲ್ಲಿ ಪ್ರಯಾಣ ಬೆಳೆಸುವರು. ಯಾತ್ರೆ ಮುಗಿಸಿ ಹಾಜಿಗಳು ಆ. 31ರಿಂದ ಸೆ. 2ರ ತನಕ 5 ತಂಡಗಳಾಗಿ ಹಂತ ಹಂತವಾಗಿ ಮಂಗಳೂರಿಗೆ ಹಿಂದಿರುಗಲಿರುವರು ಎಂದು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.