Panambur ಬಾಲಕಿಯ ಅಪಹರಣ; ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ
Team Udayavani, Aug 14, 2023, 9:45 PM IST
ಪಣಂಬೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ಬಾ ಬೆಂಗ್ರೆಯ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಅದೇ ಗ್ರಾಮದ ಕುಖ್ಯಾತ ಆರೋಪಿ ಮೊಹಮ್ಮದ್ ಸರ್ಫರಾಝ್ ಯಾನೆ ಚಪ್ಪು (22)ನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.
ಆ. 10ರಂದು ಅಪಹರಣ ಕೃತ್ಯ ನಡೆದಿದ್ದು, ಪ್ರಕರಣ ಕೈಗೆತ್ತಿಕೊಂಡ ಪಣಂಬೂರು ಪೊಲೀಸರು ಒಂದೇ ದಿನದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈತನ ವಿರುದ್ಧ ಬೈಂದೂರು, ಮಂಗಳೂರು, ಪಣಂಬೂರು ಸಹಿತ ವಿವಿಧ ಠಾಣೆಗಳಲ್ಲಿ 8ಕ್ಕೂ ಅಧಿಕ ಅಪರಾಧ ಪ್ರಕರಣಗಳು ದಾಖಲಾಗಿವೆ. ಬೈಂದೂರು ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯಾಗಿದ್ದಾನೆ.
ಹಿರಿಯ ಪೊಲೀಸ್ ಆಧಿಕಾರಿಗಳ ನಿರ್ದೇಶನದಂತೆ ಸಿಪಿಐ ಸೋಮಶೇಖರ್ ಜೆ.ಸಿ., ಎಸ್ಐ ರಾಘವೇಂದ್ರ ನಾಯ್ಕ, ಜ್ಞಾನಶೇಖರ್, ಎಎಸ್ಐ ಕೃಷ್ಣ, ಸಿಬಂದಿ ಪ್ರಮೋದ್, ಪ್ರೇಮಾನಂದ್, ಮಾಣಿಕ್, ಸೀಮಾ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.