Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ
ಕೆಸರು ಗದ್ದೆಯಂತಾದ ಅಡ್ಯಾರ್‌ಕಟ್ಟೆ ರಸ್ತೆ
Team Udayavani, Sep 17, 2024, 2:17 PM IST
ಅಡ್ಯಾರ್: ನಗರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 66ರ ಅಡ್ಯಾರ್ ಕಟ್ಟೆಯಿಂದ ಅಡ್ಯಾರ್ ಪದವು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರು ಗದ್ದೆಯಂತಾಗಿದೆ. ವಾಹನಗಳ ಸಂಚಾರಕ್ಕೆ, ಜನ ನಡೆದುಕೊಂಡು ಹೋಗಲು ಸಂಕಷ್ಟ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಅಡ್ಯಾರ್ ಕಟ್ಟೆಯಿಂದ ಕೆಮಂಜೂರು ರೈಲ್ವೇ ಟ್ರಾಫಿಕ್ ವರೆಗಿನ ಸುಮಾರು ಅರ್ಧ ಕಿ.ಮೀ. ರಸ್ತೆಯಲ್ಲಿ ಮಳೆಗಾಲದ ಆರಂಭದಲ್ಲೇ ಅಲ್ಲಲ್ಲಿ ಗುಂಡಿ ಬಿದ್ದು ಹದಗೆಟ್ಟು ಸಂಚಾರಕ್ಕೆ ಅಡ್ಡಿಯಾಗಿತ್ತು. ಕಳೆದ ವಾರ ಈ ಗುಂಡಿಗಳಿಗೆ ಮಣ್ಣು ಸುರಿದು ಮುಚ್ಚುವ ಕೆಲಸ ನಡೆದಿತ್ತು. ಆದರೆ ಮಳೆ ಈ ಮಣ್ಣು ಕೆಸರು ರಾಡಿಯಾಗಿದೆ. ಟಿಪ್ಪರ್, ಲಾರಿ, ಟೆಂಪೋ ಸಹಿತ ವಿವಿಧ ಘನ ವಾಹನಗಳ ಸಂಚಾರವೂ ಈ ರಸ್ತೆಯಲ್ಲಿ ಹೆಚ್ಚಾ ಗಿದ್ದು, ಸಂಪೂರ್ಣವಾಗಿದೆ ಹಾಳಾಗಿದೆ.
ಕೆಲವು ಕಡೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ದ್ವಿಚಕ್ರ ವಾಹನ ಸವಾರರಿಗೆ ಗುಂಡಿ ತಪ್ಪಿಸಿ ವಾಹನ ಚಲಾಯಿಸುವ ಸಾಹಸ ಮಾಡಬೇಕಾದ ಪರಿಸ್ಥಿತಿಯಿದೆ. ದೊಡ್ಡ ವಾಹನಗಳು ಸಾಗು ವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವವರ ಮೇಲೆ ಕೆಸರಿನ ಸಿಂಚನವಾ ಗುತ್ತಿದೆ. ನಿತ್ಯ ಮಳೆಯೂ ಸುರಿಯುತ್ತಿ ರುವುದರಿಂದ ರಸ್ತೆ ಮತ್ತಷ್ಟು ಹದಗೆಡುವ ಸಾಧ್ಯತೆಯಿದ್ದು, ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.