ಅ. 15ರ ಬಳಿಕ ನಿರ್ಬಂಧ ಸಡಿಲಿಕೆ, ನಿಯಮ ಬಿಗಿ
Team Udayavani, Oct 5, 2020, 11:08 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 15ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು. ಆದರೆ ಕೋವಿಡ್ ನಿಗ್ರಹದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಾಲಿಸಬೇಕಾದ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆದರೆ ಇದೇ ವೇಳೆ ಕೊರೊನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಬಂಧ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ನಿಯಮ ಉಲ್ಲಂಘಿಸುವವರ ಮೇಲೆ ಕಠಿನ ಕ್ರಮ ಕಾದಿದೆ.
ಶಾಲೆ, ಕಾಲೇಜು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಕೆಲವು ಚಟುವಟಿಕೆಗಳಿಗೆ ಪರಿಸ್ಥಿತಿಯನ್ನು ಆಧರಿಸಿ ಅ. 15ರ ಅನಂತರ ಹಂತ-ಹಂತವಾಗಿ ಅನುಮತಿ ದೊರಕಲಿದೆ. ಕಂಟೈನ್ಮೆಂಟ್ ವಲಯ ಹೊರತಾಗಿ ಇತರೆಡೆಗಳಲ್ಲಿ ಈಜುಕೊಳ, ಸಿನೆಮಾ ಮಂದಿರ/ ರಂಗಮಂದಿರ/ ಮಲ್ಟಿಪ್ಲೆಕ್ಸ್‌ಗಳನ್ನು, ಮನೋರಂಜನಾ ಉದ್ಯಾನಗಳು ಮತ್ತು ಅದೇ ರೀತಿಯ ಸ್ಥಳಗಳನ್ನು ತೆರೆಯಲು ಷರತ್ತುಗಳನ್ನೊಳಗೊಂಡು ಅನುಮತಿ ನೀಡಲಾಗುತ್ತದೆ. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾ ಭವನದ ಒಟ್ಟು ಸಾಮರ್ಥ್ಯದ ಗರಿಷ್ಠ ಶೇ. 50ರಷ್ಟಕ್ಕೆ ಕೆಲವೊಂದು ಷರತ್ತುಗಳೊಂದಿಗೆ ಅನುಮತಿ ದೊರೆಯಲಿದೆ.
ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.