ಸ್ವಾತಂತ್ರ್ಯದ “ಅಮೃತ’ ಸಡಗರ ; ಮಂಗಳೂರು ನಗರದಾದ್ಯಂತ ಸಕಲ ತಯಾರಿ

Team Udayavani, Aug 12, 2022, 3:45 PM IST

14

ಮಹಾನಗರ: ಸ್ವಾತಂತ್ರ್ಯದ 75ನೇ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸುವ ಸಲುವಾಗಿ ಮಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ಸಕಲ ತಯಾರಿ ನಡೆಸಲಾಗಿದ್ದು, ಹಬ್ಬದ ಸಡಗರ ಮನೆ ಮಾಡಿದೆ.

ದ.ಕ. ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಪಾಲಿಕೆ ಸಹಿತ ವಿವಿಧ ಸರಕಾರಿ ಕಚೇರಿ, ಸರಕಾರೇತರ ಸಂಸ್ಥೆಗಳ ಸಹಿತ ವಿವಿಧ ಕಡೆಗಳಲ್ಲಿ ಅಮೃತ ಮಹೋತ್ಸವ ಆಚರಣೆಗೆ ಸಿದ್ಧತೆ ನಡೆಸಲಾಗಿದೆ. ವಿವಿಧ ರಾಜಕೀಯ ಪಕ್ಷಗಳು, ಶಿಕ್ಷಣ ಸಂಸ್ಥೆಗಳು, ಸಂಘ – ಸಂಸ್ಥೆಗಳು ಕೂಡ ಹಬ್ಬದ ಸಡಗರಕ್ಕೆ ಕೊನೆಯ ಹಂತದ ತಯಾರಿ ನಡೆಸುತ್ತಿವೆ. ಮೂರು ದಿನಗಳ ಸಂಭ್ರಮದ ಹಬ್ಬಕ್ಕೆ ಎಲ್ಲೆಲ್ಲೂ ಸಡಗರ ಮೇಳೈಸಿದೆ.

ಆ. 13ರಿಂದ 15ರ ವರೆಗೆ ಎಲ್ಲ ಮನೆಗಳ, ಸರಕಾರಿ ಕಚೇರಿ ಕಟ್ಟಡ, ಸರಕಾರೇತರ ಸಂಘ – ಸಂಸ್ಥೆಗಳ ಕಟ್ಟಡ ಹಾಗೂ ಇತರ ಎಲ್ಲ ಕಟ್ಟಡಗಳ ಮೇಲೆ ಧ್ವಜವನ್ನು ಹಾರಿಸಲು ದ.ಕ. ಜಿಲ್ಲಾಡಳಿತ ನಿರ್ದೇಶನ ನೀಡಿದೆ. ಈ ಪೈಕಿ, ಎಲ್ಲ ಸರಕಾರಿ ಕಟ್ಟಡಗಳು, ಶಾಲೆ, ಕಾಲೇಜು, ಜಿಲ್ಲಾ/ತಾಲೂಕು ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಹಗಲಿನಲ್ಲಿ ಮಾತ್ರ ಹಾರಿಸಲು ಅನುಮತಿ ನೀಡಲಾಗಿದೆ. ಆ. 13ರಿಂದ 15ರ ವರೆಗೆ ಪ್ರತಿದಿನ ಸೂರ್ಯೋದಯದ ಅನಂತರ ಬೆಳಗ್ಗೆ 8ರೊಳಗೆ ಧ್ವಜಾರೋಹಣ ಮಾಡಬೇಕು, ಸೂರ್ಯಾಸ್ತದ ವೇಳೆಗೆ ಇಳಿಸಬೇಕಿದೆ.

ಇಂದು ಸಂಭ್ರಮದ ನಡಿಗೆ

ಭಾರತೀಯ ಸಂಸ್ಕೃತಿ, ಸಾಧನೆ, ಭವ್ಯ ಇತಿಹಾಸ ಗೌರವಿಸುವ ನಿಟ್ಟಿನಲ್ಲಿ ಪಾಲಿಕೆಯ ಅಧಿಕಾರಿ-ಸಿಬಂದಿ, ವಿದ್ಯಾರ್ಥಿಗಳಿಂದ “ಸಂಭ್ರಮದ ನಡಿಗೆ’ ಆ. 12ರಂದು ನಡೆಯಲಿದೆ. ಪಾಲಿಕೆ ಕೇಂದ್ರ ಕಚೇರಿಯಿಂದ-ಬ್ರಹ್ಮಶ್ರೀ ನಾರಾಯಣ ಗುರು ವೃತ್ತ -ಮಣ್ಣಗುಡ್ಡೆ ಕೆನರಾ ಶಾಲೆಯಾಗಿ ಕೇಂದ್ರ ಕಚೇರಿವರೆಗೆ ನಡೆಯಲಿದೆ.

ದೀಪಾಲಂಕಾರದ ಸೊಬಗು

ಸ್ವಾತಂತ್ರ್ಯದ ಅಮೃತ ಮಹೋತ್ಸವ ವನ್ನು ವೈವಿಧ್ಯಮಯ, ವರ್ಣರಂಜಿತವಾಗಿ ಆಚರಿಸಿ ಸ್ಮರಣೀಯವಾಗಿರಿಸಲು ನಗರದ ಪ್ರಮುಖ ವೃತ್ತಗಳನ್ನು ಅಲಂಕರಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್‌ ಡ್ಯಾಂನಲ್ಲಿ ಈ ಬಾರಿ ವರ್ಣರಂಜಿತ ದೀಪಾಲಂಕಾರ ಮಾಡಲಾಗಿದೆ. ಮಹಾನಗರ ಪಾಲಿಕೆ, ಸುರತ್ಕಲ್‌ ವಲಯ ಕಚೇರಿ, ಪುರಭವನ, ಈಜುಕೊಳ ಸಹಿತ ಪ್ರಮುಖ ಕಟ್ಟಡಗಳು ಬೆಳಕಿನಿಂದ ಶೃಂಗಾರವಾಗಲಿದೆ. ಲಾಲ್‌ಬಾಗ್‌ ವೃತ್ತ, ಬ್ರಹ್ಮಶ್ರೀ ನಾರಾಯಣಗುರು ವೃತ್ತ, ಗೋವಿಂದ ಪೈ ವೃತ್ತ, ಎ.ಬಿ. ಶೆಟ್ಟಿ ವೃತ್ತ, ಕ್ಲಾಕ್‌ ಟವರ್‌ ವೃತ್ತ, ಮಾರ್ನಮಿಕಟ್ಟೆ ವೃತ್ತ, ಕೋಟಿಚೆನ್ನಯ ವೃತ್ತ ನಂದಿಗುಡ್ಡೆ, ಸರ್ಕೀಟ್‌ ಹೌಸ್‌ ವೃತ್ತ, ಮಲ್ಲಿಕಟ್ಟೆ ವೃತ್ತ, ಬೊಂದೇಲ್‌ ವೃತ್ತ, ಸುರತ್ಕಲ್‌ ವೃತ್ತ, ಜಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರ ಬಳಿಯ ವೃತ್ತಗಳಿಗೆ ಕೇಸರಿ, ಬಿಳಿ, ಹಸುರು ವರ್ಣದ ಎಲ್‌.ಇ.ಡಿ. ದೀಪ ಗಳೊಂದಿಗೆ ಆ. 13ರಿಂದ 15ರ ವರೆಗೆ ವರ್ಣರಂಜಿತ ವಿದ್ಯುತ್‌ ದೀಪಾಲಂಕಾರ ಮಾಡಲಾಗುತ್ತದೆ.

ಆ. 14: ಬಿಕರ್ನಕಟೆಯಲ್ಲಿ “ಅಮರ ಸುಳ್ಯʼದ ನೆನಪು!

ಶಾಸಕ ಡಿ. ವೇದವ್ಯಾಸ ಕಾಮತ್‌ ಅವರ ನೇತೃತ್ವದಲ್ಲಿ ತಿರಂಗಾ ಯಾತ್ರೆ ಆ. 13ರಂದು ನಗರದಲ್ಲಿ ನಡೆಯಲಿದೆ. ಪುರಭವನ ಮುಂಭಾಗದಲ್ಲಿ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅನಂತರ ಯಾತ್ರೆಯು ಹಂಪನಕಟ್ಟೆ ಮೂಲಕ ಸಾಗಿ ನವಭಾರತ್‌ ಸರ್ಕಲ್‌ ಮೂಲಕ ಪಿವಿಎಸ್‌ನಲ್ಲಿ ಸಮಾಪನಗೊಳ್ಳಲಿದೆ. ಆ. 14ರಂದು ಬಿಕರ್ನಕಟ್ಟೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಅಮರ ಸುಳ್ಯ ಹೋರಾಟ ನಡೆಸಿದವರನ್ನು ನೇಣುಗಂಬಕ್ಕೆ ಏರಿಸಿದ್ದ ಬಿಕರ್ನಕಟ್ಟೆಯಲ್ಲಿಯೇ ಅಮರ ಸುಳ್ಯ ಹೋರಾಟ ನೆನಪಿಸುವ ಕಾರ್ಯಕ್ರಮ ಇದಾಗಿದೆ.

ಮನೆಗಳಲಿ ಧ್ವಜ: ಎಲ್ಲ ಮನೆಗಳ ಮೇಲೆ ಆ. 13ರಂದು ಸೂರ್ಯೋದಯದ ಅನಂತರ ಬೆಳಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡಬೇಕು. ಹಗಲು ರಾತ್ರಿ ನಿರಂತರವಾಗಿ ಧ್ವಜ ಹಾರಿಸಿ ಆ. 15ರ ಸೂರ್ಯಾಸ್ತದ ವೇಳೆಗೆ ಇಳಿಸಲು ಕ್ರಮ ಕೈಗೊಳ್ಳಬೇಕು. ತ್ರಿವರ್ಣ ಧ್ವಜ ಸಂಹಿತೆಯಂತೆ ಧ್ವಜಕ್ಕೆ ಅಲಂಕಾರ ಮಾಡುವಂತಿಲ್ಲ. ಹರಿದ, ಕೊಳಕಾದ ತ್ರಿವರ್ಣ ಧ್ವಜವನ್ನು ಹಾರಿಸುವಂತಿಲ್ಲ. –ಡಾ| ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ ದಕ್ಷಿಣ ಕನ್ನಡ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.