ವೆನ್ಲಾಕ್‌ಗೆ ಹೆಚ್ಚುವರಿ 53 ವೆಂಟಿಲೇಟರ್‌ ಅಳವಡಿಕೆ; ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅನುಕೂಲ


Team Udayavani, Aug 12, 2020, 6:15 AM IST

ವೆನ್ಲಾಕ್‌ಗೆ ಹೆಚ್ಚುವರಿ 53 ವೆಂಟಿಲೇಟರ್‌ ಅಳವಡಿಕೆ; ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅನುಕೂಲ

ಮಹಾನಗರ: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ವೆನ್ಲಾಕ್‌ ಆಸ್ಪತ್ರೆಯಲ್ಲಿ ಹೊಸದಾಗಿ 53 ವೆಂಟಿಲೇಟರ್‌ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ.

ವೆನ್ಲಾಕ್‌ನಲ್ಲಿ ಸದ್ಯ 48 ವೆಂಟಿಲೇಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, 38 ವೆಂಟಿಲೇಟರ್‌ಗಳ ಅಳವಡಿಕೆ ಬಾಕಿ ಯಿದ್ದು ಅವುಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಜತೆಗೆ ಹೆಚ್ಚುವರಿಯಾಗಿ 15 ವೆಂಟಿಲೇಟರ್‌ಗಳನ್ನು ಅಳವಡಿಸಲು ಸರಕಾರ ಕ್ರಮ ಕೈಗೊಂಡಿದ್ದು, ಈ ಮೂಲಕ ವೆನ್ಲಾಕ್‌ನಲ್ಲಿ ವೆಂಟಿಲೇಟರ್‌ಗಳ ಸಂಖ್ಯೆ 101ಕ್ಕೆ ಏರಿಕೆಯಾಗಲಿದೆ.

ಲೇಡಿಗೋಷನ್‌ನಲ್ಲಿ ಸದ್ಯ ಒಂದು ವೆಂಟಿಲೇಟರ್‌ ಇದ್ದು, ಹೆಚ್ಚುವರಿ 5 ವೆಂಟಿ ಲೇಟರ್‌ಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ. ತಾಲೂಕು ಆಸ್ಪತ್ರೆಗೆ ಹೈ ಫ್ಲೋ ಆಕ್ಸಿಜನ್‌ ಬೆಡ್‌ ವೆನ್ಲಾಕ್‌ನಲ್ಲಿ 210 ಹೈ ಫ್ಲೋ ಆಕ್ಸಿಜನ್‌ ಬೆಡ್‌ಗಳು ಇದ್ದು, ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 50 ಹೈ ಫ್ಲೋ ಆಕ್ಸಿಜನ್‌ ಬೆಡ್‌ ಹಾಗೂ ಸಮುದಾಯ ಆಸ್ಪತ್ರೆಗಳಲ್ಲಿ 30 ಹೈ ಫ್ಲೋ ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆಗೆ ಸರಕಾರ ನಿರ್ಧರಿಸಿದೆ.

ಜಿಲ್ಲೆಯಲ್ಲಿರುವ ಆಯುರ್ವೇದ ಹಾಗೂ ಹೋಮಿಯೋಪಥಿ ವೈದ್ಯಕೀಯ ಕಾಲೇ ಜುಗಳ ಆಸ್ಪತ್ರೆಗಳಲ್ಲಿರುವ ಹಾಸಿಗೆಗಳನ್ನು ಕೂಡ ಜಿಲ್ಲಾಡಳಿತಕ್ಕೆ ನೀಡುವ ಸಂಬಂಧ ಮಾತುಕತೆ ನಡೆಯುತ್ತಿದೆ. ಜತೆಗೆ, ಖಾಸಗಿ ಆಸ್ಪತ್ರೆಗಳಲ್ಲಿಯೂ ನಿಗದಿತ ಪ್ರಮಾಣದ ಹಾಸಿಗೆ ನೀಡಲು ಕೋರಲಾಗುತ್ತಿದೆ.

ಜಿಲ್ಲೆಯಲ್ಲಿ 8 ಮೆಡಿಕಲ್‌ ಕಾಲೇಜುಗಳು ಸೇರಿ ಒಟ್ಟು 23 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 9 ಆಸ್ಪತ್ರೆಗಳಲ್ಲಿ ಸರಕಾರ ನಿಗದಿ ಪಡಿಸಿದ ದರದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ.

4,720 ಹಾಸಿಗೆ
ಜಿಲ್ಲೆಯ ಎಂಟು ಖಾಸಗಿ ವೈದ್ಯಕೀಯ ಕಾಲೇಜುಗಳು ಅವುಗಳ ಸಾಮರ್ಥ್ಯದ ಶೇ. 50ರಷ್ಟು ಹಾಸಿಗೆಗಳನ್ನು ಮೀಸಲಿಟ್ಟಿವೆ. ಹೀಗಾಗಿ 8 ಕಾಲೇಜುಗಳಲ್ಲಿ ಒಟ್ಟು 4,000 ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ಮೀಸಲಿಡಲಾಗಿದೆ. ಜತೆಗೆ, ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಾಗಿರುವ ವೆನ್ಲಾಕ್‌ನಲ್ಲಿ 270 ಹಾಸಿಗೆಗಳು ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಲಭ್ಯವಿವೆ. ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 450 ಹಾಸಿಗೆಗಳು ಲಭ್ಯವಿವೆ.

ವೆಂಟಿಲೇಟರ್‌ ಅಳವಡಿಕೆ ಶೀಘ್ರ ಪೂರ್ಣ
ವೆನ್ಲಾಕ್‌ನಲ್ಲಿ 48 ವೆಂಟಿಲೇಟರ್‌ಗಳು ಸದ್ಯ ಕಾರ್ಯನಿರ್ವಹಿಸುತ್ತಿದ್ದು, 38 ವೆಂಟಿಲೇಟರ್‌ಗಳ ಅಳವಡಿಕೆ ಶೀಘ್ರದಲ್ಲಿ ಪೂರ್ಣವಾಗಲಿದೆ. ಹಾಗೂ ಇನ್ನೂ ಹೆಚ್ಚುವರಿಯಾಗಿ 15 ವೆಂಟಿಲೇಟರ್‌ ಅಳವಡಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಲೇಡಿಗೋಷನ್‌ಗೆ 5 ವೆಂಟಿಲೇಟರ್‌ಗಳನ್ನು ಹೊಸದಾಗಿ ಅಳವಡಿಸಲಾಗುವುದು.
 - ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.