![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 25, 2020, 9:51 AM IST
ಮಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್ ನೀಡಿದ್ದು, ನಾನು ಹಾಜರಾಗಲು ಮಂಗಳೂರಿಗೆ ಹೋಗುತ್ತಿದ್ದೇನೆ. ಅವರು ವಿಚಾರಣೆಗೆ ಮಾತ್ರ ಕರೆದಿರುವುದು. ಹಾಗಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ.
ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮಂಗಳೂರು ಪೊಲೀಸರು ಅನುಶ್ರೀಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ಅನುಶ್ರೀ ಇಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿಗೆ ತೆರಳಿ ವಿಚಾರಣೆಗೆ ಹಾಜರಾಗುವುದಾಗಿ ಹೇಳಿಕೊಂಡಿದ್ದಾರೆ.
ಕೇವಲ ವಿಚಾರಣೆಗೆ ಕರೆದಿದ್ದಾರೆ. ಆದರೆ ಕೆಲವು ಮಾಧ್ಯಮಗಳಲ್ಲಿ ನಾನು ನಟಿಸಿದ ದೃಶ್ಯಗಳನ್ನು ತೋರಿಸಿ ನನ್ನನ್ನು ಅಪರಾಧಿ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ನನ್ನದೇನೂ ಪಾತ್ರವಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರೌಡಿಶೀಟರ್ ನ ಕೊಚ್ಚಿಕೊಲೆ
ಕಳೆದ ವಾರ ಮಂಗಳೂರಿನಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದಾಗ ಸಿಕ್ಕಿಬಿದ್ದ ಪ್ರಸಿದ್ದ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯ ಮೂಲಕ ಅನುಶ್ರೀ ಹೆಸರು ಪ್ರಕರಣದಲ್ಲಿ ತಳುಕು ಹಾಕಿಕೊಂಡಿದೆ ಎನ್ನಲಾಗಿದೆ. ಕಿಶೋರ್ ಶೆಟ್ಟಿ ಸ್ನೇಹಿತೆ ಅಸ್ಕಾ ಎಂಬಾಕೆಯನ್ನೂ ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ಮಣಿಪುರ ಮೂಲದವಳಾದ ಈಕೆ ಮಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.
You seem to have an Ad Blocker on.
To continue reading, please turn it off or whitelist Udayavani.