ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ
Team Udayavani, Apr 19, 2020, 6:47 PM IST
ವೆನ್ ಲಾಕ್ ಆಸ್ಪತ್ರೆ ಬಳಿ ಪೊಲೀಸ್ ಪಹರೆ
ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಸುದ್ದಿಯಿಂದ ಆಘಾತದಲ್ಲಿರುವ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಸೋಂಕು ಪ್ರಕರಣ ಪಾಸಿಟಿವ್ ಆಗಿದೆ.
ಎ.16ರಂದು ಪಾಸಿಟಿವ್ ಆಗಿದ್ದ ಉಪ್ಪಿನಂಗಡಿ ನಿವಾಸಿಯ ಪತ್ನಿಗೆ ಸೋಂಕು ತಾಗಿದ್ದು ದೃಢವಾಗಿದೆ. P325 ಎಂದು ಗುರುತಿಸಲಾಗಿದ್ದ ಉಪ್ಪಿನಂಗಡಿ ಮೂಲದ ವ್ಯಕ್ತಿಯ ಸಂಪರ್ಕದಿಂದ ಆತನ ಪತ್ನಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.
30 ವರ್ಷ ವಯಸ್ಸಿನ ಮಹಿಳೆಗೆ ಸೋಂಕು ಕಂಡು ಬಂದ ಹಿನ್ನಲೆ ಜಿಲ್ಲೆಯ ಕೋವಿಡ್ ಆಸ್ಪತ್ರೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 15ಕ್ಕೇರಿದೆ. ಇದರಲ್ಲಿ 12 ಮಂದಿ ಡಿಸ್ಚಾರ್ಜ್ ಆಗಿದ್ದು, ಒಬ್ಬರು ಇಂದು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 390ಕ್ಕೇರಿದೆ. ಇದರಲ್ಲಿ ಒಟ್ಟು 16 ಸೋಂಕಿತರು ಸಾವನ್ನಪ್ಪಿದ್ದಾರೆ. 111 ಮಂದಿ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.